Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮುಂದೂಡಿಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.3: ವಿಧಾನಸಭಾ ಚುನಾವಣೆಗೆ ಜೆಡಿಎಸ್ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡುವ ದಿನವನ್ನು ಮತ್ತೆ ಮುಂದೂಡಿದೆ.

224 ಕ್ಷೇತ್ರಗಳ ಪೈಕಿ 93 ಕ್ಷೇತ್ರಗಳಿಗೆ ಕಳೆದ ಡಿಸೆಂಬರ್‌ನಲ್ಲಿಯೇ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್‌ ಇಂದು ಸೋಮವಾರ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತದೆ ಎಂದು ಎಲ್ಲರೂ ನಿರೀಕ್ಷೆಯಿಂದ ಕಾದಿದ್ದರು. ಆದರೆ, ಕಾರಾಣಾಂತರಗಳಿಂದ ಪಟ್ಟಿ ಬಿಡುಗಡೆ ಮತ್ತೆ ಮುಂದೆ ಹೋಗಿದೆ.

ಕಾಂಗ್ರೆಸ್ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಮಂಗಳವಾರ ಅಥವಾ ಬುಧವಾರ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇನ್ನು ಬಿಜೆಪಿ ಇದುವರೆಗೆ ಒಂದೂ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಏ.8 ಅಥವಾ 10ಕ್ಕೆ ಮೊದಲ ಪಟ್ಟಿ ಬಿಡುಗಡೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಈ ಕಾರಣಗಳಿಂದ ಜೆಡಿಎಸ್ ಸಹ ಕಾದು ನೋಡುವ ತಂತ್ರ ಅನುಸರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ಕುಟುಂಬದೊಳಗೆ ಹಾಸನ ಟಿಕೆಟ್ ಕಗ್ಗಂಟಾಗಿದೆ. ಭವಾನಿ ರೇವಣ್ಣ ಅವರು ಹಾಸನ ಟಿಕೆಟ್‌ಗಾಗಿ ಕುಟುಂಬದೊಳಗೆ ಪಟ್ಟು ಹಿಡಿದಿದ್ದರೆ ಕುಮಾರಸ್ವಾಮಿ ಅವರು ಅದಕ್ಕೆ ಸಮ್ಮತಿಸುತ್ತಿಲ್ಲ. ಇದೇನೇ ಇದ್ದರೂ ಸಹ ಹಾಸನ ಟಿಕೆಟ್ ಹೊರತುಪಡಿಸಿ ಅಂದಾಜು 35 ಕ್ಷೇತ್ರಗಳಿಗೆ ಇಂದು ಎರಡನೇ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ