Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌-ಬಿಜೆಪಿ ಪಟ್ಟಿ ಬಿಡುಗಡೆಗೆ ಕಾಯುತ್ತಿರುವ ಜೆಡಿಎಸ್

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.5:  ಈಗಾಗಲೇ ಜೆಡಿಎಸ್ ತನ್ನ ಮೊದಲ ಪಟ್ಟಿಯಲ್ಲಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಕಾದು ನೋಡುವ ತಂತ್ರ ಅನುಸರಿಸುತ್ತಿದೆ.

ಈಗಾಗಲೇ ಜೆಡಿಎಸ್‌ನ ಎರಡನೇ ಪಟ್ಟಿ ಕಳೆದ ಸೋಮವಾರ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅಂದೂ ಸಹ ಪಟ್ಟಿ ಬಿಡುಗಡೆ ಮಾಡದೆ ಅದನ್ನು ಬುಧವಾರಕ್ಕೆ ಮುಂದೂಡಲಾಗಿತ್ತು.

ಪ್ರಕಟಿಸಿದಂತೆ ಬುಧವಾರ ಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆ ಇತ್ತು. ಆದರೆ, ಇಂದೂ ಸಹ ಎರಡನೇ ಪಟ್ಟಿ ಬಿಡುಗಡೆ ಮಾಡದೆ ಪುನಃ ಮುಂದೂಡಿಕೆ ಮಾಡಲಾಗಿದೆ. ಕಾಂಗ್ರೆಸ್‌ನ ಎರಡನೇ ಪಟ್ಟಿ ಮತ್ತು ಬಿಜೆಪಿಯ ಮೊದಲನೇ ಪಟ್ಟಿ ಬಿಡುಗಡೆಯಾದ ಬಳಿಕ ಜೆಡಿಎಸ್ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡುವ ಲೆಕ್ಕಾಚಾರದಲ್ಲಿ ಮುಂದೂಡುತ್ತಲೇ ಹೋಗುತ್ತಿದೆ.

ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಟಿಕೆಟ್ ವಂಚಿತರ ತಮ್ಮ ಪಕ್ಷಕ್ಕೆ ಬರಬಹುದು ಎಂಬ ನಿರೀಕ್ಷೆ ಹಿನ್ನೆಲೆಯಲ್ಲಿ ಜೆಡಿಎಸ್ ತನ್ನ ಎರಡನೇ ಪಟ್ಟಿ ಬಿಡುಗಡೆಗೆ ವಿಳಂಬ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.

ಆಲ್ಲದೆ, ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಿರ್ಧಾರ ತೆಗೆದುಕೊಳ್ಳಬೇಕಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ದೆಹಲಿಯಲ್ಲಿ ನಡೆಯುತ್ತಿರವು ರಾಜ್ಯಸಭೆ ಕಲಾಪದಲ್ಲಿ ಭಾಗವಹಿಸಲು ತೆರಳಿದ್ದು, ಅವರು ಗುರುವಾರ ಬೆಂಗಳೂರಿಗೆ ಮರಳುವ ಹಿನ್ನೆಲೆಯಲ್ಲಿ ಎರಡನೇ ಪಟ್ಟಿ ಪ್ರಟಕ ವಿಳಂಬ ಮಾಡಲಾಗುತ್ತಿದೆ ಎಂದು ಗೊತ್ತಾಗಿದೆ.

ಈ ಎಲ್ಲಾ ಬೆಳವಣಿಗೆ ಮಧ್ಯೆ ಜೆಡಿಎಸ್ ಸಹ ತನ್ನ ಎರಡನೇ ಪಟ್ಟಿ ಬಿಡುಗಡೆಗೆ ಮುಂದೂಡುತ್ತಲೇ ಕಾದು ನೋಡುವ ತಂತ್ರ ಅನುಸರಿಸುತ್ತಿದೆ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ