Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎನ್‌ಡಿಎ ಭಾಗವಾದ ಜೆಡಿಎಸ್‌

ಸುದ್ದಿಮೂಲ ವಾರ್ತೆ

ನವದೆಹಲಿ, ಸೆ. 22: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ಬಹು ನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್ ವಿಧ್ಯುಕ್ತವಾಗಿ ಎನ್‌ಡಿಎ ಭಾಗವಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸಮಾನ ಅಂತರ ಕಾಯ್ದುಕೊಳ್ಳುವ ತನ್ನ ನಿಲುವಿನಿಂದ ಜೆಡಿಎಸ್ ಹಿಂದೆ ಸರಿದಿದ್ದು, ಬಿಜೆಪಿಯನ್ನು ಅಪ್ಪಿಕೊಂಡಿದೆ. ಈ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯುದು ನಿಚ್ಚಳವಾಗಿದೆ.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರ ಸ್ವಾಮಿ ಅವರು ದೆಹಲಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಈ ಕುರಿತು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ನಾಯಕರಾದ ನಿಖಿಲ್ ಕುಮಾರ ಸ್ವಾಮಿ, ಡಿ. ಕುಪೇಂದ್ರ ರೆಡ್ಡಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತಿತರರು ಉಪಸ್ಥಿತರಿದ್ದರು.

ಎನ್.ಡಿ.ಎ ಭಾಗವಾಗಲು ನಾವು ಸಿದ್ಧವಾಗಿದ್ದು, ಇದಕ್ಕೆ ಅಗತ್ಯವಾಗಿರುವ ವಿಧಿ ವಿಧಾನಗಳನ್ನು ಪೂರ್ಣಗೊಳಿಸಲಾಗುವುದು. ಮುಂದಿನ ಚುನಾವಣೆಗೆ ಸೀಟು ಹಂಚಿಕೆ ಪ್ರಕ್ರಿಯೆ ಶೀಘ್ರ ಪೂರ್ಣಗೊಂಡರೆ ಚುನಾವಣಾ ರಣತಂತ್ರ ರೂಪಿಸಲು ಸಾಧ್ಯವಾಗಲಿದೆ ಎಂದು ಎಚ್.ಡಿ. ಕುಮಾರ ಸ್ವಾಮಿ ಈ ಸಂದರ್ಭದಲ್ಲಿ ತಿಳಿಸಿದರು.

ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ಭೇಟಿ ಕುರಿತು ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಜೆ.ಪಿ. ನಡ್ಡಾ, ಎನ್.ಡಿ.ಎ ಮೈತ್ರಿಕೂಟದ ಭಾಗವಾಗಲು ಜೆಡಿಎಸ್ ಆಸಕ್ತಿ ತೋರಿದ್ದು, ಜೆಡಿಎಸ್ ಮುಖಂಡರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ಇದರಿಂದ ಎನ್.ಡಿ.ಎ ಮತ್ತಷ್ಟು ಬಲವರ್ಧನೆಯಾಗಲಿದ್ದು, ನವಭಾರತ – ಬಲಿಷ್ಠ ಭಾರತ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ದೃಷ್ಟಿಕೋನಕ್ಕೆ ಈ ಬೆಳವಣಿಗೆ ಪೂರಕವಾಗಿದೆ ಎಂದಿದ್ದಾರೆ.

ಈ ಮೂಲಕ ಚುನಾವಣಾ ಮೈತ್ರಿ ಕುರಿತಾದ ಚಟುವಟಿಕೆಗಳು ತೀವ್ರಗೊಂಡಿವೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಸ್ಥಾನ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಲು ಉಭಯ ಪಕ್ಷಗಳು ಆಸಕ್ತಿ ತೋರಿವೆ.

ಎನ್‍ಡಿಎ ಒಕ್ಕೂಟಕ್ಕೆ ಜೆಡಿಎಸ್ ಸೇರ್ಪಡೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಈ ಮೈತ್ರಿಯಿಂದ ರಾಜ್ಯದಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲಿದೆ. ವಿಶ್ವವಂದ್ಯ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗುವುದು ನಿಶ್ಚಿತ ಎಂಬುದರ ಸಂಕೇತ ಇದೆಂದು ಅವರು ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷರು ಎಲ್ಲಿದ್ದಾರೆ?

ಎನ್‌ಡಿಎ ಜೊತೆ ಮೈತ್ರಿ ಮಾತುಕತೆಗೆ ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಪುತ್ರ ತೆರಳಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಎಲ್ಲಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿದೆ.

ಅಧಿಕಾರದ ವಿಷಯ ಬಂದಾಗ ಕುಟುಂಬದವರೇ ಮುಂದೆ ಹೋಗುತ್ತಾರೆ. ಪಕ್ಷಕ್ಕೆ ಒಬ್ಬರು ರಾಜ್ಯಾಧ್ಯಕ್ಷರು ಇದ್ದಾರೆ ಎಂಬುದನ್ನು ಸಹ ನೆನಪಿಸಿಕೊಳ್ಳುವುದಿಲ್ಲ. ಹೀಗಾದರೆ ಪಕ್ಷ ಹೇಗೆ ಬೆಳೆಯುತ್ತದೆ ಎಂದು ಅನೇಕರು ಕಾಮೆಂಟ್‌ಗಳನ್ನು ಹಾಕದಿದ್ದಾರೆ.

ಸ್ವಾಗತಾರ್ಹ ಬೆಳವಣಿಗೆ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಜೆಡಿಎಸ್ ಪಕ್ಷವು ಎನ್.ಡಿ. ಎ. ಭಾಗವಾಗಿರುವುದು ಸ್ವಾಗತಾರ್ಹ ಬೆಳವಣಿಗೆ. ಜೆಡಿಎಸ್ ನಾಯಕರಾದ ಕುಮಾರಸ್ವಾಮಿ, ಎಚ್ ಡಿ ರೆವಣ್ಣ ಅವರಿಗೂ ಸ್ವಾಗತ. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮಾರ್ಗದರ್ಶನ ಮತ್ತು ಆಶೀರ್ವಾದ ಇದಕ್ಕೆ ದೊರಕುತ್ತದೆ ಎಂಬ ವಿಶ್ವಾಸ ಇದೆ.

- ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ