Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಂಟಿ ಪತ್ರಿಕಾಗೋಷ್ಠಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ.5: ಪ್ರಧಾನಮಂತ್ರಿಗಳು ನಾಳೆ ಬೆಂಗಳೂರಿನಲ್ಲಿ 9 ಗಂಟೆಗಳ ಕಾಲ ರೋಡ್ ಶೋ ನಡೆಸುತ್ತಿದ್ದು, ರೋಗಿಗಳು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತೆರಳಲು ಸಾಧ್ಯವಿಲ್ಲ, ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷೆಗೆ ತೆರಳಲು ಸಾಧ್ಯವಿಲ್ಲ. ಮಣಿಪುರ ಹೊತ್ತಿ ಉರಿಯುವಾಗ, ಮಣಿಪುರ ರಾಜ್ಯಪಾಲರು ಕಂಡಲ್ಲಿ ಗುಂಡು ಆದೇಶ ಹೊರಡಿಸಿದ್ದಾರೆ. ಕೇವಲ ಚುನಾವಮೆ ವಿಚಾರಕ್ಕೆ ಪ್ರಧಾನಮಂತ್ರಿಗಳು ಮೂರು ದಿನಗಳ ಕಾಲ ದೇಶದ ರಾಜಧಾನಿ ಬಿಟ್ಟು ಬರಲು ಸಾಧ್ಯವೇ? ಅವರಿಗೆ ರಾಜ್ಯದಲ್ಲಿ ಚುನಾವಣೆ ಎದುರಿಸಲು ಸ್ಥಳೀಯ ನಾಯಕರು ಇಲ್ಲವೇ?

ದೇಶದ ಬೌಗೋಳಿಕ ವಿಚಾರವಾಗಿ ಮಣಿಪುರ ಬಹಳ ಮಹತ್ವಪೂರ್ಣವಾದ ರಾಜ್ಯವಾಗಿದ್ದು, ಮಣಿಪುರದಲ್ಲಿ ಇಂತಹ ಪರಿಸ್ಥಿತಿ ಇದ್ದಾಗ ದೆಹಲಿಯಲ್ಲಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿರುವುದು ಪ್ರಧಾನಿಯ ಜವಾಬ್ದಾರಿ. ಆದರೆ ಅವರು ನಿರಂತರ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದಾರೆ.

ಮೋದಿ ಅವರ ರೋಡ್ ಶೋನಿಂದ ಸಾರ್ವಜನಿಕ ದೊಡ್ಡ ಮಟ್ಟದಲ್ಲಿ ತೊಂದರೆ ಆಗಲಿದ್ದು, ಸುದೀರ್ಘ 9 ತಾಸುಗಳ ರೋಡ್ ಶೋ ವೇಳೆ ಆ ದಾರಿಯಲ್ಲಿ ಯಾರಿಗೂ ಪ್ರವೇಶವಿಲ್ಲ, ಮನೆಗಳ ಬಾಲ್ಕನಿ, ಮಹಡಿ ಮೇಲೆ ಯಾರೂ ಹೋಗುವಂತಿಲ್ಲ ಎಂದಿದ್ದಾರೆ. ನೀಟ್ ಪರೀಕ್ಷೆ ನಡೆಯುತ್ತಿದ್ದು, ಈ ವಿದ್ಯಾರ್ಥಿಗಳು, ರೋಗಿಗಳ ಪರಿಸ್ಥಿತಿ ಏನು?

40% ಕಮಿಷನ್ ಸರ್ಕಾರ ಬಿಜೆಪಿ ಅಂದರೆ ಭ್ರಷ್ಟಾಚಾರ. ಇಂದು ದಿನಪತ್ರಿಕೆಗಳಲ್ಲಿನ ಜಾಹೀರಾತು ಹಾಗೂ ಅದರಲ್ಲಿ ಬಿಜೆಪಿಯ ಭ್ರಷ್ಟಾಚಾರದ ಪ್ರಮಾಣ ನೋಡಿ ಆಘಾತವಾಗಿದೆ. 1.50 ಲಕ್ಷ ಕೋಟಿ ಹಣವನ್ನು ಈ ಸರ್ಕಾರ ರಾಜ್ಯದ ಜನರಿಂದ ಲೂಟಿ ಮಾಡಿದೆ. ಇದು ಬಿಜೆಪಿ ಸರ್ಕಾರ ರಾಜ್ಯಕ್ಕೆ ನೀಡಿರುವ ಕೊಡುಗೆ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ 150 ಕ್ಷೇತ್ರಗಳಲ್ಲಿ ಗೆಲ್ಲಿಸಲಿದ್ದಾರೆ.

ಕಾಂಗ್ರೆಸ್ 2013ರಲ್ಲಿ ತನ್ನ ಪ್ರಣಾಳಿಕೆಯಲ್ಲಿ ಒಟ್ಟು 165 ಭರವಸೆಗಳನ್ನು ನೀಡಿದ್ದು, ಅದರಲ್ಲಿ 158 ಭರವಸೆ ಈಡೇರರಿಸಿ, ಹೆಚ್ಚುವರಿಯಾಗಿ 30 ಯೋಜನೆಗಳನ್ನು ಜಾರಿ ಮಾಡಿದ್ದೇವು. ಈ ಬಾರಿ ನಾವು 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ, ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ ಅಕ್ಕಿ ಉಚಿತ, ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ 2 ವರ್ಷಗಳ ಕಾಲ ಪ್ರತಿ ತಿಂಗಳು 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ ನೀಡಲಾಗುವುದು. ಶಕ್ತಿ ಯೋಜನೆ ಮೂಲಕ ರಾಜ್ಯ ಸಾರ್ವಜನಿಕ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗುವುದು.

ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಬಿಜೆಪಿ ಬೇರೆವರ ಕೆಲಸಗಳಿಗೂ ತಾವು ಪ್ರಚಾರ ಪಡೆಯುತ್ತಾರೆ. 3 ದಿನಗಳ ಹಿಂದೆ ನಾವು ಬಿಜೆಪಿಯ ದಾರಿ ತಪ್ಪಿಸುವ ಜಾಹೀರಾತುಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೆವು. ಈ ಎಲ್ಲಾ ತಪ್ಪು ಮಾಹಿತಿ ಜಾಹೀರಾತುಗಳನ್ನು ಚುನಾವಣಾ ಆಯೋಗದ ಅನುಮತಿ ನೀಡಲಾಗಿದೆ. ಇದು ಬಹಳ ಗಂಭೀರವಾದ ವಿಚಾರ. ಇದು ಚುನಾವಣಾ ಆಯೋಗದ ಕಾರ್ಯದ ಬಗ್ಗೆ ಪ್ರಶ್ನೆ ಮೂಡುತ್ತದೆ.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ಹೆಚ್ಚಳ ವಿಚಾರವಾಗಿ ಬಿಜೆಪಿ ಸುಳ್ಳು ಜಾಹೀರಾತು ನೀಡಿದೆ. ಪರಿಷಿಷ್ಟ ಜಾತಿಯ ಮೀಸಲಾತಿಯನ್ನು 15%ರಿಂದ 17%ಕ್ಕೆ, ಪರಿಶಿಷ್ಟ ಪಂಗಡದವರಿಗೆ 3% ರಿಂದ 7%ಗೆ ಏರಿಕೆ ಮಾಡಲಾಗಿದೆ ಎಂಬ ಜಾಹೀರಾತು ಪ್ರಕಟಿಸಿದೆ. ಇದೇ ಬಿಜೆಪಿಯ ಕೇಂದ್ರ ಸರ್ಕಾರ ಮಾ.14ರಂದು ಸಂಸತ್ತಿನಲ್ಲಿ ಮೀಸಲಾತಿ ಮೀತಿಯ ಮಿತಿ ಶೇ.50ಕ್ಕಿಂತ ಹೆಚ್ಚಿಸುವುದಿಲ್ಲ ಎಂದು ಹೇಳಿದೆ. ಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿಗೂ ಪ್ರಸ್ತಾವನೆ ಸಲ್ಲಿಸಿರಲಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಗೂ ಮುನ್ನ ಕಾರ್ಯದರ್ಶಿಗಳಿಂದ ಪತ್ರ ಬರೆಸಿದ್ದಾರೆ. ಈ ಮೀಸಲಾತಿ ವಿಚಾರದಲ್ಲಿ ಸಂಸತ್ತಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕು, ಆ ನಂತರ ಅದು ಸುಪ್ರೀಂ ಕೋರ್ಟ್ ಪರಿವೀಕ್ಷಣೆಗೆ ಒಳಪಡಬೇಕು. ಆನಂತರವಷ್ಟೇ ಇದು ಜಾರಿಯಾಗಲು ಸಾಧ್ಯ. ಇದ್ಯಾವುದನ್ನೂ ಮಾಡದೇ ಬಿಜೆಪಿ ಸರ್ಕಾರ ಮೀಸಲಾತಿ ವಿಚಾರವಾಗಿ ಪ್ರಚಾರ ಪಡೆಯುತ್ತಿದೆ. ಇದು ಹೇಗೆ ಸಾಧ್ಯ? ಚುನಾವಣಾ ಆಯೋಗ ಅದಕ್ಕೆ ಅವಕಾಶ ನೀಡಿದ್ದು ಯಾಕೆ? ಈ ಜಾಹೀರಾತಿನ ಬಗ್ಗೆ ಕ್ಷಮೆ ಕೇಳಿ ಇದನ್ನು ಹಿಂಪಡೆಯಬೇಕು. ಇನ್ನು ಒಬಿಸಿ ಮೀಸಲಾತಿ ವಿಚಾರದಲ್ಲೂ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ತಡೆ ಹಿಡಿಯಲಾಗಿದೆ. ಬಿಜೆಪಿಯ ಈ ಸುಳ್ಳು ಜಾಹೀರಾತುಗಳನ್ನು ಚುನಾವಣಾ ಆಯೋಗ ಕೂಡಲೇ ಹಿಂಪಡೆಯಬೇಕು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ