Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅಗ್ರಸ್ಥಾನ : ನ್ಯಾಯಾಧೀಶೆ ಉಂಡಿ ಮಂಜುಳಾ

ಸುದ್ದಿಮೂಲ ವಾರ್ತೆ ಲಿಂಗಸುಗೂರು, ಜ.25:
ಪ್ರಜಾಪ್ರಭುತ್ವ ವ್ಯವಸ್ಥೆೆಯ ರಾಷ್ಟವಾಗಿರುವ ಭಾರತದಲ್ಲಿ ಮತದಾನದ ಮೂಲಕ ರಾಷ್ಟ ನಾಯಕರನ್ನು ಆಯ್ಕೆೆ ಮಾಡುವುದರಿಂದ ಮತದಾನಕ್ಕೆೆ ಅಗ್ರಸ್ಥಾಾನ ಕಲ್ಪಿಿಸಲಾಗಿದೆ ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಹಿರಿಯ ಶ್ರೇಣಿ ಸಿವಿಲ್ ನ್ಯಾಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.
ಸ್ಥಳಿಯ ಸರಕಾರಿ ಪ್ರಥಮ ದರ್ಜೆ ಕಾಲೇಜ ಭಾರತ ಚುಣಾವಣಾ ಆಯೋಗ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕಾಡಳಿತ, ನ್ಯಾಾಯವಾದಿಗಳ ಸಂಘ, ಲಿಂಗಸುಗೂರು ಇವರ ಸಂಯುಕ್ತಾಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ - 2026ನ್ನು ಉದ್ಘಾಾಟಿಸಿ ಮಾತನಾಡುತ್ತ ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಪ್ರತಿಯೊಬ್ಬ ನಾಗರಿಕನು ಮತದಾನದಿಂದ ರಾಷ್ಟ್ರವನ್ನು ಪ್ರಗತಿಯತ್ತ ಮತ್ತು ಸಾಮಾನ್ಯ ಜನರ ಕಳವಳಗಳನ್ನು ಪರಿಹರಿಸುವ ಸಾಮರ್ಥ್ಯವಿರುವ ನಾಯಕರನ್ನು ಆಯ್ಕೆೆಯ ಮೂಲಭೂತ ಹಕ್ಕನ್ನು ಹೊಂದಿದ್ದಾಾನೆ. ರಾಷ್ಟ್ರೀಯ ಮತದಾರರ ದಿನವು ಭಾರತದ ಭವಿಷ್ಯಕ್ಕೆೆ ನಿರ್ಣಾಯಕ ಮೂಲಾಧಾರವಾಗಿ ಕಾರ್ಯ ನಿರ್ವಹಿಸುವುದರಿಂದ ಅದರ ನಾಗರಿಕರು ತಮ್ಮ ನಾಯಕರನ್ನು ಆಯ್ಕೆೆಮಾಡುವಲ್ಲಿ ಮಾಡುವ ಆಯ್ಕೆೆಗಳ ಆಧಾರದ ಮೇಲೆ ಇದು ಅತ್ಯಂತ ಮಹತ್ವದ್ದಾಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಾಯಾಧೀಶ ಅಂಬಣ್ಣ.ಕೆ ಈ ದಿನವನ್ನು ವಿಶೇಷವಾಗಿ 18 ವರ್ಷದ ಹೊಸ ಮತದಾರರು ಅವರ ಮತಗಳು ರಾಷ್ಟ್ರದ ಪಥದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತವೆಂಬ ತಿಳುವಳಿಕೆಯನ್ನು ನೀಡುವುದು ಇದರ ಗುರಿಯಾಗಿದೆ ಎಂದರು. ಅಧ್ಯಕ್ಷತೆ ವಹಿ ಸಿದ ಉಪ ವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿಿ ಅವರು ರಾಷ್ಟ್ರೀಯ ಮತದಾರರ ದಿನವು ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವಲ್ಲ, ಬದಲಾಗಿ ಇದು ನಾಗರಿಕರು, ವಿಶೇಷವಾಗಿ ಯುವಕರು ಮತದಾರರಾಗಿ ನೋಂದಾಯಿಸುವ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಿಯೆಯಲ್ಲಿ ಸಕ್ರಿಿಯವಾಗಿ ಭಾಗವಹಿಸಲು ಪ್ರೇರೇಪಿಸಲು ಪ್ರಯತ್ನಿಿಸುತ್ತದೆ. ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ತಹಸೀಲ್ದಾಾರ ಕು.ಸತ್ಯಮ್ಮ ಸಹಾಯಕ ಸರಕಾರಿ ಅಭಿಯೋಜಕ ಸಾಹೇಬಗೌಡ ಬಿ.ಪಾಟೀಲ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಭೂಪನಗೌಡ ಪಾಟೀಲ್, ಸ.ಪ್ರ.ದ.ಕಾಲೇಜು ಪ್ರಾಾಚಾರ್ಯ ಡಾ.ವೆಂಕಟನಾರಾಯಣ ಪದವಿ ವಿದ್ಯಾಾರ್ಥಿಗಳು ಮತ್ತು ತಾಲ್ಲೂಕು ಆಡಳಿತ ಸಿಬ್ಬಂದಿಗಳು ಭಾಗಿಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ