Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಲೂರು ಗ್ರಾಪಂ: ಕಾಂಗ್ರೆಸ್ ಬೆಂಬಲಿತ ತೆಕ್ಕೆಗೆ

ಸುದ್ದಿಮೂಲ ವಾರ್ತೆ

ಯಲಬುರ್ಗಾ:ತಾಲೂಕಿನ ಕಲ್ಲೂರು ಗ್ರಾಮ ಪಂಚಾಯತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷ,ಉಪಾಧ್ಯಕ್ಷರಾಗಿ ಆಯ್ಕೆಗೊಂಡರು.

ಇಲ್ಲಿಯ ಗ್ರಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಗಯ್ಯ ತಂದಿ ಬಸಯ್ಯ ಗುರುಮಠ,ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಲ್ಲಯ್ಯ ಸಂಗನಾಳಮಠ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಮಪ್ಪ ಪೂಜಾರ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಂಜುಳಾ ಗಂಡ ಸುರೇಶ ಈಳಗೇರ ತಮ್ಮ ನಾಮಪತ್ರ ಸಲ್ಲಿಸಿದ್ದರು.

ನಂತರ ನಡೆದ ಮತದಾನದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಗಯ್ಯ ತಂದಿ ಬಸಯ್ಯ ಗುರುಮಠ(೬) ಪಡೆದುಕೊಂಡು ಅಧ್ಯಕ್ಷರಾಗಿ ಆಯ್ಕೆಗೊಂಡರು.ಕಲ್ಲಯ್ಯ ಸಂಗನಾಳಮಠ(೩) ಮತಗಳನ್ನು ಪಡೆದುಕೊಂಡರು.

ಅಲ್ಲದೇ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಮಪ್ಪ ಹನಮಪ್ಪ ಪೂಜಾರ(೬) ಮತಗಳನ್ನು ಪಡೆದುಕೊಂಡು ಉಪಾಧ್ಯಕ್ಷರಾಗಿ ಚುನಾಯಿತಗೊಂಡರು. ಮಂಜುಳಾ ಗಂಡ ಸುರೇಶ ಈಳಗೇರ(೩) ಮತಗಳನ್ನು ಪಡೆದುಕೊಂಡರು.

ವಿಜಯೋತ್ಸವ;ಕಲ್ಲೂರು ಗ್ರಾಪಂಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಗೊಳ್ಳುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಯುವ ಘಟಕದ ಕಾರ್ಯಾಧ್ಯಕ್ಷ ಸಿಎಂ.ಈಶ್ವರ ಅಟಮಾಳಗಿ,ಶರಣಪ್ಪ ಗಾಂಜಿ, ಕಲ್ಲೂರು ಗ್ರಾಮದ ಕಾಂಗ್ರೆಸ್ ಮುಖಂಡ ಕಲ್ಲಪ್ಪ ಕ್ಯಾದಗುಂಪಿ  ನಿಕಟಪೂರ್ವ ಅಧ್ಯಕ್ಷ ಕಲ್ಲಪ್ಪ ಕವಳಕೇರಿ,ವರದಯ್ಯ ಹೊಸಮನಿ,ನಿಲ್ಲಪ್ಪ ತೊಂಡಿಹಾಳ, ಬಸಪ್ಪ ಬಂಗಾಳಗಿಡದ,ರಫಿಸಾಬ ದೊಡ್ಡಮನಿ,ಪ್ರಭು ಬೆಣಕಲ್,ಯಲ್ಲಪ್ಪ ಅಗಸಿಮನಿ,ಬಸವರಾಜ ಪೂಜಾರ, ಗ್ರಾಪಂ ಸದಸ್ಯರು,ಮುಖಂಡರು,ಕಾರ್ಯಕರ್ತರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ