Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕ ಉತ್ಸವ



ಕಲಬುರಗಿ,ಫೆ.19: ಕಲ್ಯಾಣ ಕರ್ನಾಟಕ ಉತ್ಸವ-2023ರ ಅಂಗವಾಗಿ ಇದೇ ಫೆಬ್ರವರಿ 21, 22 ಹಾಗೂ 23ರಂದು ಬೆಳಿಗ್ಗೆ 6.30 ಗಂಟೆಗೆ ಕ್ರಮವಾಗಿ ಕೆ.ಕೆ.ರನ್ (ಮ್ಯಾರಾಥಾನ್), ಸೈಕ್ಲೋಥಾನ್ ಹಾಗೂ ವಾಕಥಾನ್ ಸ್ಪರ್ಧೇಗಳನ್ನು ಆಯೋಜಿಸಲಾಗಿದೆ ಎಂದು  ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ. ಮತ್ತು ಉತ್ಸವದ ಕ್ರೀಡಾ ಸಮಿತಿಯ ಅಧ್ಯಕ್ಷರಾಗಿರುವ ಮಹಾನಗರ ಪಾಲಿಕೆ ಆಯುಕ್ತ ಭೂವನೇಶ ದೇವಿದಾಸ್ ಪಾಟೀಲ ಅವರು ತಿಳಿಸಿದ್ದಾರೆ.


ಕೆ.ಕೆ.ರನ್ (ಮ್ಯಾರಾಥಾನ್) ನಲ್ಲಿ ಭಾಗವಹಿಸಲಿಚ್ಛಿಸುವವರು  https://forms.gle/AmgeXoTwV9dsEWN86  ಲಿಂಕ್ ಮೂಲಕ, ಸೈಕ್ಲೋಥಾನ್‍ನಲ್ಲಿ ಭಾಗವಹಿಸಲಿಚ್ಛಿಸುವವರು  https://forms.gle/dQHE6UtM4PCksaGK9 ಲಿಂಕ್ ಮೂಲಕ ಹಾಗೂ ವಾಕ್‍ಥಾನ್‍ನಲ್ಲಿ ಭಾಗವಹಿಸಲಿಚ್ಛಿಸುವವರು  https://forms.gle/fPUHv72RPCyTDvhH8 ಲಿಂಕ್ ಮೂಲಕ ಹೆಸರು ನೊಂದಾಯಿಸಿಕೊಳ್ಳಬೇಕು.


ಮ್ಯಾರಾಥಾನ್ ಮತ್ತು ಸೈಕ್ಲೋಥಾನ್ ಸ್ಪರ್ಧೆಗಳ ಪೈಕಿ ಪುರುಷ ಮುಕ್ತ ಸ್ಪರ್ಧೆಗಳಿಗೆ 200 ಜನ, ಉಳಿದ ಸ್ಪರ್ಧೆಗಳಿಗೆ 100 ಜನ ಮೊದಲು ನೋಂದಾಯಿಸಿದವರಿಗೆ ಹಾಗೂ ವಾಕ್‍ಥಾನ್ ನಡಿಗೆಯಲ್ಲಿ ಮೊದಲು 500 ಜನ ನೋಂದಾಯಿಸಿದವರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.


ಮ್ಯಾರಾಥಾನ್, ಸೈಕ್ಲೋಥಾನ್ ಹಾಗೂ ವಾಕ್‍ಥಾನ್ ಸ್ಪರ್ಧೆಗಳ ಪ್ರತಿಯೊಂದು ವಿಭಾಗದಲ್ಲಿ ವಿಜೇತ ಅಗ್ರ ಮೂವರಿಗೆ ನಗದು ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಗುವುದು. ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ. ಅವರು ಮನವಿ ಮಾಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ