Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದಗುಡಿ ಗ್ರಾ.ಪಂ.ನಲ್ಲಿ ಕನಕ ಜಯಂತಿ

ಸುದ್ದಿಮೂಲ ವಾರ್ತೆ

ನಂದಗುಡಿ,ನ.30: ಕನಕದಾಸರ ಜೀವನ ಸಂದೇಶ ಮಾನವ ಕುಲದ ಬದುಕಿಗೆ ಸಂಜೀವಿನಿ ದ್ರವ್ಯ ಇದ್ದಂತಾಗಿದೆ ಎಂದು ಪಿಡಿಒ ಕೆಂಪಣ್ಣ ಹೇಳಿದರು.

ಅವರು ನಂದಗುಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 536ನೇ ಕನಕ ಜಯಂತಿ ಕಾರ್ಯಕ್ರಮನ ಉದ್ದೇಶಿಸಿ ಮಾತನಾಡಿದ ಅವರು, ದಾಸ ಸಾಹಿತ್ಯದಲ್ಲಿ ದಿಗ್ಗಜರೆನಿಸಿಕೊಂಡಿರುವ ಕನಕದಾಸರು ಒಬ್ಬರಾಗಿದ್ದು, ಇವರಿಗೆ ದಾಸ ಸಾಹಿತ್ಯದಲ್ಲಿ ವಿಶಿಷ್ಠ ಸ್ಥಾನವಿದೆ ಎಂದು ಹೇಳಿದರು.

ಕನಕದಾಸರು ಸಮಾಜದ ಕೆಳಸ್ತರದಿಂದ ಬಂದವರಾಗಿದ್ದರಿಂದ ಕೆಳ ಜಾತಿಯವರ ನೋವಿನ ಅರಿವು ಮೇಲ್ವರ್ಗದವರ ವೈಭವ ಜೀವನದ ಅನುಭವ ಚೆನ್ನಾಗಿ ಗೊತ್ತಿತ್ತು. ತಮ್ಮ ಕಾವ್ಯ ಕೀರ್ತನೆಗಳಲ್ಲಿ ಸಮಕಾಲೀನ ಜನಜೀವನದ ಚಿತ್ರಣವನ್ನು ಬಹು ಮಾರ್ಮಿಕವಾಗಿ ಚಿತ್ರಿಸಿ ಸಮಾಜಕ್ಕೆ ಸ್ಫೂರ್ತಿಯಾಗಿದ್ದಾರೆ. ಸಾಮಾಜಿಕ ಸಮಾನತೆ ಹಾಗೂ ಧರ್ಮ ಉದ್ಧಾರಕ್ಕಾಗಿ ಶ್ರಮಿಸಿದ ಕನಕದಾಸರು ವ್ಯಕ್ತಿಯ ವ್ಯಕ್ತಿತ್ವ ಮತ್ತು ಚಿಂತನೆಯಲ್ಲಿ ಬದಲಾವಣೆ ಆಗಬೇಕೆಂಬ ಹಂಬಲ ಇಟ್ಟುಕೊಂಡಿದ್ದರು ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಮಲಾ ಶಿವು, ಸದಸ್ಯರಾದ ಸುನೀತಾ ರಾಮೇಗೌಡ, ಮುನಿರತ್ನಮ್ಮ ಶಿವು ಕಾರ್ಯದರ್ಶಿ ವೆಂಕಟೇಶ್, ಲೆಕ್ಕಾಧಿಕಾರಿ ಸಂಪತ್ ಕುಮಾರ್, ಕರ ವಸೂಲಿಗಾರರಾದ ಮನೋಜ್ ಕುಮಾರ್, ವಾಟರ್ ಮ್ಯಾನ್‌ಗಳಾದ ನಟರಾಜಪ್ಪ, ನಯಾಜ್, ರಾಮು, ರಾಜೇಶ್, ಶಿವು, ಶ್ಯಾಮಲಾ ಹಾಗೂ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ