Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವರ್ಷಪೂರ್ತಿ ಕನ್ನಡ ಸಂಭ್ರಮ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.27: ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ನ.1ರಿಂದ‌ ಮುಂದಿನ‌ ವರ್ಷ 2024ರ ನವೆಂಬರ್ 30ರವರೆಗೆ ಕರ್ನಾಟಕದ‌ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕನ್ನಡ ಧ್ವಜಾರೋಹಣ ಮಾಡಲಿದ್ದು, ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರು ಕನ್ನಡ ಧ್ವಜ ವಂದನೆ ನೆರವೇರಿಸಲಿದ್ದಾರೆ. ನಾಡಿನ ಎಲ್ಲ ಕನ್ನಡಿಗರು, ಕನ್ನಡ ಮನಸ್ಸುಗಳು, ಕನ್ನಡ ಪರ ಹೋರಾಟಗಾರರು ಈ ಸಂಭ್ರಮದಲ್ಲಿ ತೊಡಗುವಂತಾಗಬೇಕು ಎಂದರು.

ರಾಜ್ಯೋತ್ಸವದಂದು ರಾಜ್ಯದ ಎಲ್ಲ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ, ಕರ್ನಾಟಕ ಸಂಭ್ರಮ-50 : ಉಸಿರಾಯಿತು ಕರ್ನಾಟಕ ಹೆಸರಾಗಲಿ ಕನ್ನಡ ಎನ್ನುವ ಘೋಷ ವಾಕ್ಯ ಬರೆಯಬೇಕು. ಬೆಳಗ್ಗೆ 9 ಗಂಟೆಗೆ ನಾಡಗೀತೆ ಮೊಳಗಲಿದೆ. ಸಂಜೆ 5 ಗಂಟೆಗೆ ನಿಮ್ಮ- ನಿಮ್ಮ ಊರುಗಳ ಮೈದಾನಗಳಲ್ಲಿ ಕೆಂಪು- ಹಳದಿ ಬಣ್ಣದ ಗಾಳಿಪಟಗಳನ್ನು ಬಾನೆತ್ತರಕ್ಕೆ ಹಾರಿಸಿ. ಈ ಗಾಳಿಪಟ ಉತ್ಸವದ ಮೂಲಕ ನಮ್ಮ ಸುವರ್ಣ ಸಂಭ್ರಮವನ್ನು ಜಗತ್ತಿಗೆ ಸಾರಿ ಹೇಳಲಾಗುವುದು. ರಾತ್ರಿ ಏಳು ಗಂಟೆಗೆ ಪ್ರತಿಯೊಬ್ಬರ ಮನೆ, ಕಚೇರಿ, ಅಂಗಡಿ ಮಳಿಗೆಗಳ ಮುಂದೆ ಹಣತೆಯಲ್ಲಿ ಕನ್ನಡ ಜ್ಯೋತಿ ಬೆಳಗಿಸಲಾಗುವುದು ಎಂದು ಹೇಳಿದರು.

ಕನ್ನಡ ರಥಯಾತ್ರೆ:

ಕರ್ನಾಟಕ ಹೆಸರು ನಾಮಕರಣವಾದಾಗ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದರು. ಆವಾಗ ಯಾವ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತೋ ಅದೇ ಮಾದರಿಯ ಕಾರ್ಯಕ್ರಮ ಈಗ ರೂಪಿಸಲಾಗಿದೆ. ನ.2ರಂದು ಹಂಪಿಯಲ್ಲಿ ಭವ್ಯ ಕರ್ನಾಟಕ ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ನ.3.ರಂದು ರಥಯಾತ್ರೆ ಗದಗ ತಲುಪುತ್ತದೆ. ಅಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಗದಗ ಕಾರ್ಯಕ್ರಮದಲ್ಲಿ ಅದ್ಧೂರಿಯಾಗಿ ಸನ್ಮಾನಿಸಲಾಗುವುದು. ಹೀಗೆ ನ.4ರಿಂದ ಆರಂಭಗೊಂಡು ರಥಯಾತ್ರೆ ಇಡೀ ಕರ್ನಾಟಕದಾದ್ಯಂತ ಸಂಚರಿಸಲಿದೆ ಎಂದು ಸಚಿವ ತಂಗಡಗಿ ಹೇಳಿದರು.

ಅಲ್ಲದೆ, ರಾಜ್ಯಾದ್ಯಂತ ಎಲ್ಲಾ‌ ಶಾಲಾ- ಕಾಲೇಜುಗಳಲ್ಲಿ ನನ್ನ ಭಾಷೆ, ನನ್ನ ಹಾಡು ಪ್ರಬಂಧ ಸ್ಪರ್ಧೆ, ರಸ ಪ್ರಶ್ನೆ‌ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ತಮ್ಮ‌ ಜಿಲ್ಲೆಗಳಲ್ಲಿ ‌ರಥಯಾತ್ರೆ ಹಾಗೂ ಜ್ಯೋತಿ ಬಂದಾಗ ಎಲ್ಲಾ ಜಿಲ್ಲೆಗಳ ಸ್ಥಳೀಯ ಕಲಾಪ್ರಕಾರ, ಸ್ಥಳೀಯ ಕಲಾವಿದರು ಹಾಗೂ ಕಲಾ ತಂಡಗಳನ್ನು ಬಳಸಿಕೊಳ್ಳಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಕಲಾ ಪ್ರಕಾರಗಳನ್ನು ಹಳೇ ಮೈಸೂರು ಭಾಗಕ್ಕೆ ಇಲ್ಲಿನ‌ ಕಲಾ ಪ್ರಕಾರಗಳನ್ನು ಆ ಭಾಗಕ್ಕೆ ಕೊಂಡೊಯ್ಯುವ ಕೆಲಸ ಪ್ರಯತ್ನ ನಡೆಯಲಿದೆ. ಕನ್ನಡ ಸಾಂಸ್ಕೃತಿಕ ಲೋಕದ ಸಾಂಸ್ಕೃತಿಕ ಹಬ್ಬ. ಕನ್ನಡದ ಸೊಗಡನ್ನು ಯುವ ಪೀಳಿಗೆಗೆ ಪರಿಚಯಿಸುವ‌ ಉದ್ದೇಶ ನಮ್ಮದಾಗಿದೆ ಎಂದು ಹೇಳಿದರು.

ಈ ಸಂಭ್ರಮದಲ್ಲಿ ಐಟಿ- ಬಿಟಿ ಕಂಪನಿಗಳ ಉದ್ಯೋಗಿಗಳು ಕರ್ನಾಟಕ ಸಂಭ್ರಮದ ಭಾಗವಾಗಲಿದ್ದು, ಅವರೊಂದಿಗೂ ಚರ್ಚೆ ನಡೆಸಲಾಗಿದೆ. ಅವರ ಕಚೇರಿಗಳಲ್ಲಿ ಕನ್ನಡದ ಕಂಪು ಕುರಿತು ಕಾರ್ಯಕ್ರಮ ಆಯೋಜಿಸಲಾಗುವುದು. ಅಂಚೆ‌ ಇಲಾಖೆಯ ಮೂಲಕ ವಿಶೇಷ ಅಂಚೆ ಚೀಟಿ ಹೊರ ತರುವಂತೆ ಕೇಂದ್ರ‌ ಸರ್ಕಾರಕ್ಕೆ‌ ಪತ್ರ ಬರೆಯಲಾಗುವುದು.

ಕರ್ನಾಟಕದ ಏಕೀಕರಣದ ವಿಷಯ, ನಂತರ ಸಾಧನೆಗಳ‌ ಪಥ, ಐತಿಹಾಸಿಕ ನೆಲೆಗಳು ಸೇರಿದಂತೆ ಮುಂತಾದ ವಿಷಯಗಳ ಬಗ್ಗೆ ಸಾಕ್ಷ್ಯ ಚಿತ್ರ ರಚಿಸುವುದು. ಬೆಂಗಳೂರಿನಲ್ಲಿ‌ ಭುವನೇಶ್ವರಿ ಪ್ರತಿಮೆ‌ ನಿರ್ಮಾಣ, ಮೈಸೂರಿನಲ್ಲಿ‌ ಮಾಜಿ ಮುಖ್ಯಮಂತ್ರಿ ‌ದೇವರಾಜ ಅರಸು ಪ್ರತಿಮೆ‌ ನಿರ್ಮಾಣ ಹಾಗೂ ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರದಲ್ಲಿರುವ ರಾಜ್ಯದ ‌ಏಕೈಕ ಭುವನೇಶ್ವರಿ ಪ್ರತಿಮೆ‌‌ ಜೀರ್ಣೋದ್ಧಾರ ಮಾಡುವ ಜೊತೆಗೆ 50 ಸಾಧಕ‌ ಮಹಿಳೆಯರಿಗೆ ಸನ್ಮಾನ. ಕರ್ನಾಟಕ ಏಕೀಕರಣದಿಂದ ಇಲ್ಲಿಯವರೆಗಿನ ಸಮಗ್ರ‌‌ ಸ್ಮರಣ‌ ಸಂಚಿಕೆ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಕಲೆ,‌ ಸಾಹಿತ್ಯ, ಜಾನಪದ,‌‌ ಸಂಸ್ಕೃತಿ ಕುರಿತು 50 ಪುಸ್ತಕ‌ ಬಿಡುಗಡೆ ಮಾಡುತ್ತಿದ್ದು, 31 ಜಿಲ್ಲೆಗಳಲ್ಲಿ ಹಲ್ಮಿಡಿ‌ ಶಾಸನದ‌ ಪ್ರತಿಕೃತಿಗಳ ಸ್ಥಾಪನೆ. ಕರ್ನಾಟಕ‌ ಶಾಶ್ವತ ನಿಧಿ ತೆರೆಯಲಾಗುವುದು. ಸದರಿ ನಿಧಿಯಿಂದ ಸಂಗ್ರಹವಾದ ಅನುದಾನದಿಂದ ಗಡಿನಾಡು ಶಾಲೆಗಳ ಅಭಿವೃದ್ಧಿ ಮುಂತಾದ ಕನ್ನಡ ಚಟುವಟಿಕೆಗಳಿಗೆ ಬಳಕೆ. ಸರ್ಕಾರದ ಲೆಟರ್ ಹೆಡ್ ನಲ್ಲಿ ಕರ್ನಾಟಕ ಸಂಭ್ರಮ -50 ಎಂಬ ಲಾಂಛನ ಇರಲಿದೆ ಎಂದರು.

ಕರ್ನಾಟಕ ಪಾಕ್:

ವಿಶೇಷವಾಗಿ ಮೈಸೂರು ಪಾಕ್ ಮಾದರಿಯಲ್ಲಿ ಕೆಎಂಎಫ್ ಸಹಯೋಗದೊಂದಿಗೆ ಸುವರ್ಣ ಕರ್ನಾಟಕ ನೆನಪಿಗೆ 'ಕರ್ನಾಟಕ ಪಾಕ್' ಎಂಬ ವಿಶೇಷ ತಿನಿಸು ತಯಾರಿಸಿ ಪರಿಚಯಿಸಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ