Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಣ್ಣೂರು ಗ್ರಾಮ ಪಂಚಾಯತಿ ಅಧ್ಯಕ್ಷ ಅಶೋಕ್ ಕುಮಾರ್, ಉಪಾಧ್ಯಕ್ಷೆ ಲಲಿತಾದೇವರಾಜ್

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ,ಆ.10:ಮಹದೇವಪುರ ಕ್ಷೇತ್ರದ ಕಣ್ಣೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಲಲಿತಾ ದೇವರಾಜ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಮೋಹನ್‌ ತಿಳಿಸಿದರು.

ಕಣ್ಣೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಒಟ್ಟು 31 ಸದಸ್ಯರಲ್ಲಿ ಅಧ್ಯಕ್ಷರಾದ ಅಶೋಕ್ ಕುಮಾರ್ 19 ಪರವಾಗಿ ಮತಗಳು ಚಲಾಯಿಸಿದರೆ,

ಪರಾಜಿತ ಅಭ್ಯರ್ಥಿ ಗೋಪಾಲ ಕೃಷ್ಣಗೆ 12 ಮತಗಳು ಚಲಾವಣೆಯಾದವು. ಉಪಾಧ್ಯಕ್ಷರಾದ ಲಲಿತಾ ದೇವರಾಜ್ ಗೆ 18 ಮತ ಬಿದ್ದಿದ್ದರೆ, ಪರಾಜಿತ ಅಭ್ಯರ್ಥಿ ಆಂಜಿನಮ್ಮರವರಿಗೆ 13 ಮತ ಪಡೆದು ಪರಾಜಿತರಾದರು.

ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಮಾತನಾಡಿ, ಮಹದೇವಪುರ ಕ್ಷೇತ್ರದಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿಯವರು ನಮ್ಮ ಪಂಚಾಯತಿ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮುಂದೆಯೂ ಅವರ ಮಾರ್ಗದರ್ಶನದಲ್ಲಿ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿಯವರ ಜೊತೆಗೂಡಿ ಪಂಚಾಯತಿ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಎಲ್ಲಾ ಸದಸ್ಯರುಗಳನ್ನು ಒಟ್ಟುಗೂಡಿಸಿಕೊಂಡು ಪ್ರಾಮಾಣಿಕವಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಟರಾಜ್, ಮುಖಂಡರಾದ ಪಾಪಣ್ಣ, ಬೈರತಿ ರಮೇಶ್, ಬಿದರಹಳ್ಳಿ ರಾಜೇಶ್, ಮೋಹನ ರೆಡ್ಡಿ, ನಾರಾಯಣ ಟಿ ಪಿ, ಹೂಡಿ ಪಿಳ್ಳಪ್ಪ, ಮಹೇಶ್, ರಘುನಾಥ್ ಜನಾರ್ದನ ಗೌಡ ಹಾಗೂ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ