Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ಗೆದ್ದ ಕಾಂತಾರ ಸಿನಿಮಾ

ಸುದ್ದಿಮೂಲ ವಾರ್ತೆ

ಗೋವಾ, ನ. 28 : ದೇಶದ ಚಿತ್ರರಂಗವೇ ಕನ್ನಡ ಚಿತ್ರೋದ್ಯಮದೆಡೆ ತಿರುಗಿ ನೋಡುವಂತೆ ಮಾಡಿದ್ದ ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಕಾಂತಾರ’ ಚಿತ್ರ ಗೋವಾ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹೊಂಬಾಳೆ ಸಂಸ್ಥೆ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ ಇದೀಗ ಗೋವಾದಲ್ಲಿ ನಡೆಯುತ್ತಿರುವ 52ನೇ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಮೂಲಕ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಈ ಪ್ರಶಸ್ತಿ ಪಡೆದ ಮೊದಲ ಚಿತ್ರ ಎಂಬ ದಾಖಲೆಯನ್ನು ಕಾಂತಾರ ನಿರ್ಮಿಸಿದೆ.

70ರ ದಶಕದಲ್ಲಿ ಪ್ರಪ್ರಥಮ ಬಾರಿಗೆ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಅಭಿನಯಕ್ಕೆ ನಟ ಶಂಕರ್‌ನಾಗ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು. ಆದರೆ ಸಿನಿಮಾ ವಿಭಾಗದಲ್ಲಿ ಕನ್ನಡ ಸಿನಿಮಾಕ್ಕೆ ಈ ಪ್ರಶಸ್ತಿ ಲಭಿಸುತ್ತಿರುವುದು ಇದೇ ಮೊದಲು.

ಸದ್ಯ ‘ಕಾಂತಾರ’ ಚಾಪ್ಟರ್ 1 ಫಸ್ಟ್ ಲುಕ್ ಬಿಡಗಡೆಯಾಗಿದ್ದು, ನಿರೀಕ್ಷೆಗೂ ಮೀರಿ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮುಂದಿನ ತಿಂಗಳಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ