ಶಿಕ್ಷಕರ ಸಂಘದಿಂದ ನೂತನ ಆಯುಕ್ತರಿಗೆ ಅಭಿನಂದನೆ
ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.3: ಸಾಕ್ಷರತಾ ಇಲಾಖೆಯ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಬಿ.ಬಿ. ಕಾವೇರಿ ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸ್ವಾಗತಿಸಿ, ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಕೆ. ನಾಗೇಶ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಆಯುಕ್ತರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.
ಈ ವೇಳೆ ಜೂ.30ರವರೆಗೆ ಖಾಲಿಯಾಗಿರುವ, ನಿವೃತ್ತಿಯಾಗಿರುವ ಹುದ್ದೆಗಳನ್ನು ವರ್ಗಾವಣೆಗೆ ಪರಿಗಣಿಸಲು ವಿನಂತಿಸಲಾಯಿತು. ಶಾಲೆಗಳಿಗೆ ಪೂರ್ಣ ಪ್ರಮಾಣದ ಅನುದಾನ ತಕ್ಷಣ ಬಿಡುಗಡೆಗೊಳಿಸುವಂತೆ ವಿನಂತಿಸಲಾಯಿತು. ರಾಜ್ಯದಾದ್ಯಂತ ಶಾಲಾ ವೇಳಾಪಟ್ಟಿಯಲ್ಲಿ ಆಗಿರುವ ವ್ಯತ್ಯಾಸವನ್ನು ಸರಿಪಡಿಸಿ ಉಪನಿರ್ದೇಶಕರ ಹಂತದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಬಾಗಲಕೋಟೆ ಜಿಲ್ಲಾಧ್ಯಕ್ಷ ಬಸವರಾಜ ಬಾಗೆನ್ನವರ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸಿದ್ರಾಮ ಲೋಕನ್ನವರ, ಗದಗ ಜಿಲ್ಲಾಧ್ಯಕ್ಷ ವಿ.ಎಂ. ಹಿರೇಮಠ ಸೇರಿದಂತೆ ಗದಗ, ರಾಯಚೂರು ಹಾಗೂ ವಿವಿಧ ತಾಲ್ಲೂಕಾ ಘಟಕಗಳ, ಜಿಲ್ಲಾ ಘಟಕಗಳ ಕಾರ್ಯದರ್ಶಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.