Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಅಂಗೀಕಾರ

ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.18:
ಮಾನಸಿಕ ಆರೋಗ್ಯ ಸಂಸ್ಥೆೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆೆಯ ಪರಿಭಾಷೆಯೊಳಗೆ ಸೇರಿಸಲು ಹಾಗೂ ಇತರೆ ವೈದ್ಯಕೀಯ ಸಂಸ್ಥೆೆಗಳ ನೊಂದಣಿಯನ್ನು ಸರಳಗೊಳಿಸುವ ಉದ್ದೇಶದಿಂದ ರೂಪಿಸಲಾದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆೆಗಳ ತಿದ್ದುಪಡಿ ವಿಧೇಯಕಕ್ಕೆೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿತು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿಿರುವ ಚಳಿಗಾಲದ ಅಧಿವೇಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಸಚಿವ ದಿನೇಶ್ ಗುಂಡೂರಾವ್ ಅವರು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆೆಗಳ ತಿದ್ದುಪಡಿ ವಿಧೇಯಕ ಮಂಡಿಸಿ, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆೆಗಳ ಅಧಿನಿಯಮ 2007 ಅನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಪ್ರಸ್ತುತ ಖಾಸಗಿ ವೈದ್ಯಕೀಯ ಸಂಸ್ಥೆೆಗಳು ಈ ಅಧಿನಿಯಮದಡಿ ಸೇರ್ಪಡೆಗೊಂಡಿರಲಿಲ್ಲ, ಇದರಿಂದಾಗಿ ಕೆಲವು ನಿಯಮಗಳನ್ನು ಪಾಲಿಸುವುದರಲ್ಲಿ ತೊಡಕಿತ್ತು. ಹೀಗಾಗಿ ಮಾನಸಿಕ ಆರೋಗ್ಯ ಸಂಸ್ಥೆೆಗಳನ್ನೂ ಕೂಡ ಅಧಿನಿಯಮದಡಿ ಖಾಸಗಿ ವೈದ್ಯಕೀಯ ಸಂಸ್ಥೆೆಯ ಪರಿಭಾಷೆಯೊಳಗೆ ಸೇರ್ಪಡೆಗೊಳಿಸಲಾಗುತ್ತಿಿದೆ.
ಅಲ್ಲದೆ ಖಾಸಗಿ ವೈದ್ಯಕೀಯ ಸಂಸ್ಥೆೆಗಳಿಗೆ ಕೆಪಿಎಂಇ ಸಮಿತಿಯಡಿ ನೊಂದಣಿ ಮತ್ತು ಪರವಾನಗಿ ಪಡೆಯುವ ನಿಟ್ಟಿಿನಲ್ಲಿ ವಿಳಂಬವಾಗುತ್ತಿಿದೆ ಎಂಬ ದೂರುಗಳು ಕೇಳಿಬರುತ್ತಿಿದ್ದವು. ಹೀಗಾಗಿ ತಾತ್ಕಾಾಲಿಕ ನೊಂದಣಿ ಪ್ರಮಾಣ ಪತ್ರ ಮಂಜೂರು ಮಾಡಲು ಅಥವಾ ನವೀಕರಣ ಮಾಡುವುದು ಸೇರಿದಂತೆ ವಿವಿಧ ಪ್ರಕ್ರಿಿಯೆಗಳ ಸರಳೀಕರಣಕ್ಕಾಾಗಿ ಈ ಅಧಿನಿಯಮಕ್ಕೆೆ ತಿದ್ದುಪಡಿ ತರಲಾಗುತ್ತಿಿದೆ. ಖಾಸಗಿ ವೈದ್ಯಕೀಯ ಸಂಸ್ಥೆೆಗಳ ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಪ್ರಾಾಧಿಕಾರಕ್ಕೆೆ ನಾಮನಿರ್ದೇಶನ ಮಾಡಲು ವಿಧೇಯಕದಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಖಾಸಗಿ ಕ್ಲಿಿನಿಕ್‌ಗಳಿಗೆ ಅಗ್ನಿಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ನೀಡುವುದನ್ನು ಕಡ್ಡಾಾಯಗೊಳಿಸಿದ್ದು, ಇದರಿಂದ ಸಣ್ಣ ಪುಟ್ಟ ಖಾಸಗಿ ಕ್ಲಿಿನಿಕ್‌ಗಳಿಗೂ ತೊಂದರೆಯಾಗುತ್ತಿಿದೆ. ಇದನ್ನು ಸಡಿಲಗೊಳಿಸುವಂತೆ ಶಾಸಕರುಗಳಾದ ಡಾ. ಶಿವರಾಜ್ ಪಾಟೀಲ್, ಡಾ. ಶ್ರೀನಿವಾಸ್ ಸೇರಿದಂತೆ ಹಲವರು ಒತ್ತಾಾಯಿಸಿದರು. ಇದಕ್ಕೆೆ ಪ್ರತಿಕ್ರಿಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು, ಆಸ್ಪತ್ರೆೆ ಸೇರಿದಂತೆ ವಿವಿಧ ಬಗೆಯ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿಿ ಆಕಸ್ಮಿಿಕದಿಂದ ಜೀವ ಹಾನಿ ಅಥವಾ ಆಸ್ತಿಿ ಹಾನಿಯಾಗದಂತೆ ತಡೆಗಟ್ಟುವ ಉದ್ದೇಶದಿಂದ ಅಗ್ನಿಿಶಾಮಕ ಇಲಾಖೆ ಈ ನಿಯಮ ರೂಪಿಸಿದೆ. ಹೀಗಾಗಿ ನಿಯಮಗಳನ್ನು ಸಡಿಲಗೊಳಿಸುವ ಅಧಿಕಾರವ್ಯಾಾಪ್ತಿಿ ಆರೋಗ್ಯ ಇಲಾಖೆಗೆ ಬರುವುದಿಲ್ಲ ಎಂದರು.
ಸದನದ ಸದಸ್ಯರುಗಳ ಚರ್ಚೆಯ ಬಳಿಕ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆೆಗಳ ತಿದ್ದುಪಡಿ ವಿಧೇಯಕಕ್ಕೆೆ ವಿಧಾನಸಭೆ ಅಂಗೀಕಾರ ನೀಡಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ