Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ ಫಲಿತಾಂಶ ತೆಲಂಗಾಣದಲ್ಲೂ ಮರುಕಳಿಸಲಿದೆ

ಹೈದರಾಬಾದ್, ನ.11: ತೆಲಂಗಾಣ ವಿಧಾನ ಸಭೆ ಚುನಾವಣೆಯಲ್ಲಿ ಕರ್ನಾಟಕದ ಫಲಿತಾಂಶವೇ ಮರುಕಳಿಸಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ಶನಿವಾರ ಹೈದರಾಬಾದ್‌ನ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹತ್ತು ವರ್ಷಗಳ ಕೆ.ಸಿ.ಆರ್ ಆಡಳಿತದಿಂದ ಜನ ಬೇಸರಗೊಂಡಿದ್ದು ಈ ಬಾರಿ ಬದಲಾವಣೆ ಬಯಸಿದ್ದಾರೆ. ಕರ್ನಾಟಕ ದ ಮಾದರಿಯಲ್ಲೇ ಇಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ತೆಲಂಗಾಣದಲ್ಲಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಜಾತ್ಯತೀತ ಮನೋಭಾವದ ಎಲ್ಲ ವರ್ಗ ಕಾಂಗ್ರೆಸ್ ಪರ ವಿಶ್ವಾಸ ಹೊಂದಿದೆ. ಕೆ ಸಿ ಆರ್ ಕೊಟ್ಟ ಭರವಸೆ ಈಡೇರಿಸಿಲ್ಲ, ಆಡಳಿತ ವಿರೋಧಿ ಅಲೆ ತೀವ್ರವಾಗಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ನಾವು ಕೊಟ್ಟ ಗ್ಯಾರಂಟಿ ಈಡೇರಿಸಿದ್ದೇವೆ. ಕೋಟ್ಯಂತರ ಕುಟುಂಬಗಳಿಗೆ ನಮ್ಮ ಗ್ಯಾರಂಟಿ ಯೋಜನೆಯ ಫಲ ದೊರಕುತ್ತಿದೆ. ತೆಲಂಗಾಣದಲ್ಲೂ ನಾವು ಆರು ಗ್ಯಾರಂಟಿ ನೀಡಿದ್ದು ಅದರ ಜಾರಿ ಮಾಡಿಯೇ ತೀರುತ್ತೇವೆ ಎಂದು ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರ ಸಮುದಾಯಕ್ಕೆ ಕೊಟ್ಟ ಮಾತು ಉಳಿಸಿಕೊಂಡಿದೆ. ಸ್ಪೀಕರ್, ಎರಡು ಸಚಿವ ಸ್ಥಾನ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ, ಪರಿಷತ್ ಮುಖ್ಯ ಸಚೇತಕ ಸ್ಥಾನ ಮುಸ್ಲಿಂ ಸಮುದಾಯಕ್ಕೆ ನೀಡಿದೆ. ಇದು ಕಾಂಗ್ರೆಸ್ ನ ಬದ್ಧತೆ ಆಗಿದ್ದು ತೆಲಂಗಾಣ ದಲ್ಲೂ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಹೆಚ್ಚು ಆದ್ಯತೆ ಸಿಗಲಿದೆ ಎಂದು ಹೇಳಿದರು.

ಕೆ. ಸಿ. ರಾಮರಾವ್ ಕಳೆದ ಐದು ವರ್ಷ ತೋಟದ ಮನೆಯಲ್ಲಿದ್ದು ಇದೀಗ ಚುನಾವಣೆ ಬಂತು ಎಂದು ಹೊರಗೆ ಬಂದಿದ್ದಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಿದ್ದ ಶೇ.22 ರಷ್ಟು ಮೀಸಲಾತಿ ವಾಗ್ದಾನ ಈಡೇರಿಸಿಲ್ಲ. ಶೇ.16 ರಿಂದ 17 ರಷ್ಟು ಜನಸಂಖ್ಯೆ ಹೊಂದಿರುವ ಅಲ್ಪ ಸಂಖ್ಯಾತ ಸಮುದಾಯಕ್ಕೆ ಕೇವಲ 2200 ಕೋಟಿ ರೂ. ಅನುದಾನ ಘೋಷಿಸಿ 800 ರಿಂದ 1000 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದ್ದಾರೆ. ಇದು ಮುಸ್ಲಿಂ ಸಮುದಾಯದ ಬಗ್ಗೆ ಅವರಿಗೆ ಇರುವ ಕಾಳಜಿ ಎಂದು ಲೇವಡಿ ಮಾಡಿದರು.

ತೆಲಂಗಾಣ ದಲ್ಲಿ ಬಿಆರ್‌ಎಸ್, ಬಿಜೆಪಿ, ಐಎಎಂ ಎಲ್ಲವೂ ಒಂದೇ. ಕಾಂಗ್ರೆಸ್ ಮಾತ್ರ ಅಪ್ಪಟ ಜಾತ್ಯತೀತವಾದಿ ಪಕ್ಷ ಎಂದು ತಿಳಿಸಿದರು.

ಎಐಸಿಸಿ ತೆಲಂಗಾಣ ಉಸ್ತುವಾರಿ ಅಜೋಯ್ ಕುಮಾರ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ತೆಲಂಗಾಣ ಕಾಂಗ್ರೆಸ್ಮಾಧ್ಯಮ ಘಟಕದ ಕಮಲ್ ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ