Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಸಿಯಾ: ಕಾರ್ಮಿಕರು, ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ





ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.18: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.

ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ(ಕಾಸಿಯಾ)ದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಎಲ್ಲಾ ವಲಯಗಳಲ್ಲಿರುವ ಐಟಿ-ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್ ಗಳ ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಸಾಕಷ್ಟು ಮಂದಿ ಕೆಲಸ ಮಾಡುತ್ತಿದ್ದು, ಅವರೆಲ್ಲರಿಗೂ ತಪ್ಪದೆ ಮತದಾನ ಮಾಡುವಂತೆ ತಮ್ಮ ಸಂಸ್ಥೆಗಳ ವತಿಯಿಂದ ಅರಿವು ಮೂಡಿಸುವ ಕೆಲಸ ಮಾಡಬೇಕು. ಉದ್ಯಮಿಗಳು ತಮ್ಮ- ತಮ್ಮ ಕೈಗಾರಿಕೆಗಳಲ್ಲಿ ಮತದಾನ ಜಾಗೃತಿಯ ಬಿತ್ತಿಪತ್ರಗಳನ್ನು ಅಂಟಿಸಿ ಅರಿವು ಮೂಡಿಸುವ ಕೆಲಸ ಮಾಡಬೇಕು ಮತ್ತು ಎಲ್ಲರೂ ಈ ಪ್ರಜಾಪ್ರಭುತ್ವದ ಹಬ್ಬದ ದಿನವಾದ ಮೇ. 10 ರಂದು ತಪ್ಪದೇ ಮತದಾನದ ಮಾಡುವಂತೆ ಕೋರಿದರು.

ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಸುಮಾರು 5.6 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದು, ಮತದಾನದ ದಿನ ಎಲ್ಲರಿಗೂ ವೇತನ ಸಹಿತ ರಜೆ ನೀಡಿ ತಪ್ಪದೇ ಮತದಾನ ಮಾಡಲು ಉದ್ಯೋಗಿಗಳಿಗೆ ತಿಳಿಸಲಾಗುವುದೆಂದು ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿಗಳು ಭರವಸೆ ನೀಡಿದರು.

ದಕ್ಷಿಣ ವಲಯ ಆಯುಕ್ತರಾದ ಜಯರಾಮ ರಾಯಪುರ, ಕಾಸಿಯಾ ಅಧ್ಯಕ್ಷ ಕೆ.ಎನ್. ನರಸಿಂಹಮೂರ್ತಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಸಂಗಪ್ಪ ಸೇರಿದಂತೆ ಕೈಗಾರಿಕೋದ್ಯಮಿಗಳು, ಮಹಿಳಾ ಉದ್ಯಮಿಗಳ ಸಂಘ ಅವೇಕ್ ನ ಪ್ರತಿನಿಧಿಗಳು ಮತ್ತು ಜಿಟಿ ಮತ್ತು ಟಿಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ