Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ಎಚ್. ಮುನಿಯಪ್ಪ ಅವರಿಗೆ ಟಿಕೆಟ್ ಬೇಡ ಎಂದು ಆಗ್ರಹ

ಸುದ್ದಿಮೂಲ ವಾರ್ತೆ ದೇವನಹಳ್ಳಿ,

ಮಾ.24: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್  ಟಿಕೆಟ್‌ ಅನ್ನು ತಾಲ್ಲೂಕಿನ ಹೊರಗಿನವರಿಗೆ ನೀಡಿದರೆ ಪಕ್ಷದ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಸ್ಥಳೀಯ ಸಂಸ್ಥೆಗಳ ಕಾಂಗ್ರೆಸ್ ಬೆಂಬಲಿತ ಸದಸ್ಯರು ಹೇಳಿದ್ದಾರೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಹೈಕಮಾಂಡ್ ಸ್ಥಳೀಯರಿಗೇ ಟಿಕೆಟ್ ನೀಡಬೇಕು. ಆಗ ಮಾತ್ರ ಗೆಲ್ಲಲು ಸಾಧ್ಯ. ಈಗಾಗಲೇ ಎರಡು ಬಾರಿ ಕ್ಷೇತ್ರವನ್ನು ಕಳೆದುಕೊಂಡಿದ್ದೇವೆ. ಈಗ ಮತ್ತೆ ಸ್ಥಳೀಯರನ್ನು ಬಿಟ್ಟು ಹೊರಗಿನ ನಾಯಕರನ್ನು ಇಲ್ಲಿಗೆ ತಂದು ಸ್ಪರ್ಧಿಸುವಂತೆ  ಮಾಡಿದರೆ ಸೋಲು ಕಟ್ಟಿಟ್ಟ ಬುತ್ತಿ. ಪಕ್ಷ ಗೆಲ್ಲಬೇಕು ಎಂಬ ಉದ್ದೇಶ ಇದ್ದರೆ ಇಲ್ಲಿನವರಿಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗುತ್ತದೆ ಎಂಬ ಮಾಹಿತಿ ಕ್ಷೇತ್ರದಲ್ಲಿ ಹರಡಿದ್ದು, ಸ್ಥಳೀಯ ಮುಖಂಡರು ಇದನ್ನು ವಿರೋಧಿಸಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಹೊರಗಿನವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿದ್ದಾರೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,ವಿಜಯಪುರ ಬ್ಲಾಕ್ ಕಾಂಗ್ರೆಸ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷರು, ಗ್ರಾಮಾಂತರ ಜಿಲ್ಲೆಯ ಯುವ ಕಾಂಗ್ರೆಸ್, ಅಧ್ಯಕ್ಷರು, ಕಾಂಗ್ರೆಸ್ ಪುರಸಭಾ ಸದಸ್ಯರು, ಜಿಲ್ಲಾಪಂಚಾಯ್ತಿ ಮಾಜಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು, ಸೇರಿದಂತೆ ಕಾಂಗ್ರೆಸ್ ಪಕ್ಷದ  ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ