Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖೋ-ಖೋ ಸ್ಪರ್ಧೆ ಗುಂಜೂರು ತಂಡ ಪ್ರಥಮ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ.ನ.29:ಕರ್ನಾಟಕ ರಾಜ್ಯ ಖೋ- ಖೋ ಸ್ಪೋರ್ಟ್ಸ್ ಸಂಸ್ಥೆ ಹಾಗೂ ಗುಂಜೂರು ಖೋ- ಖೋ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಅತಿ ಕಿರಿಯ ಬಾಲಕ ಬಾಲಕಿಯರ ಹೊನಲು ಬೆಳಕಿನ ಖೋ ಖೋ ಸ್ಪರ್ಧೆ ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ಗುಂಜೂರು ಖೋ- ಖೋ ಸ್ಪೋರ್ಟ್ಸ್ ಕ್ಲಬ್ ನ ಬಾಲಕಿಯರು ಮತ್ತು ಬೆಂಗಳೂರು ಪೈನೀಯಿರ್ಸ್ ನ ಬಾಲಕರು ಪ್ರಥಮಸ್ಥಾನ ಪಡೆದರು.

ಬೆಂಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ. ಮೈಸೂರು, ಮಂಡ್ಯ, ತುಮಾಕೂರು ರಾಯಚೂರು, ಬೆಳಗಾವಿ ಜಿಲೆಗಳು ಸೇರಿದಂತೆ ರಾಜ್ಯಾದ್ಯಂತ 107 ತಂಡಗಳು ಭಾಗವಹಿಸಿದ್ದವು.

ಬಾಲಕಿಯರ ವಿಭಾಗದ ಪೈನಲ್ ಪಂದ್ಯದಲ್ಲಿ ಟಿ.ನರಸೀಪುರದ ತಂಡ ಮತ್ತು ಗುಂಜೂರು ಖೋ- ಖೋ ಸ್ಪೋರ್ಟ್ಸ್ ಕ್ಲಬ್ ನ ಬಾಲಕಿಯರ ತಂಡ ಸೆಣಸಿ ಅಂತಿಮವಾಗಿ ಗುಂಜೂರು ಖೋ- ಖೋ ಸ್ಪೋರ್ಟ್ಸ್ ಕ್ಲಬ್ ನ ಬಾಲಕಿಯರು ಪ್ರಥಮ ಸ್ಥಾನ ಪಡೆದರೆ ಟಿ.ನರಸೀಪುರದ ಬಾಲಕಿಯರ ತಂಡವು ದ್ವೀತಿಯ ಸ್ಥಾನ ಪಡೆಯಿತು.

ಬಾಲಕರ ವಿಭಾಗದಲ್ಲಿ ಅಂತಿಮ ಪಂದ್ಯದಲ್ಲಿ ಎಂ.ಎಸ್.ಸಿ. ನಾಗನೂರು ತಂಡ ಹಾಗೂ ಬೆಂಗಳೂರು ಪೈನೀಯಿರ್ಸ್ ನ ಬಾಲಕರು ಆಟವಾಡಿ ಬೆಂಗಳೂರು ಪೈನೀಯಿರ್ಸ್ ನ ಬಾಲಕರು ತಂಡ ಪ್ರಥಮ ಸ್ಥಾನ ಹಾಗೂ ಎಂ.ಎಸ್.ಸಿ.ನಾಗನೂರು ತಂಡ ದ್ವಿತೀಯ ಸ್ಥಾನ ಪಡೆದಿದೆ.

ಈ ಖೋ.ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಮುಂದಿನ ತಿಂಗಳು ನಡೆಯುವ ರಾಷ್ಟ್ರದ ಮಟ್ಟದ ಖೋ- ಖೋ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾ ಖೋ- ಖೋ ಅಸೋಸಿಯೇಷನ್ ಉಪಾಧ್ಯಕ್ಷ ಕೆ.ಆರ್.ಜಯರಾಮ್ ತಿಳಿಸಿದರು.

ಈ ಸಂದರ್ಭದಲ್ಲಿ ಮನೋಹರ್, ರಮೇಶ್ ಬಾಬು, ಜಿ.ಟಿ.ನಾಗೇಶ್, ರಾಜ್ ಗೋಪಾಲ್, ಬಾಬುಗೌಡ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ