Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲವಿಳಂಬ ಮಾಡದೇ ಗುಣಮಟ್ಟದ ಕಾಮಗಾರಿಗಳನ್ನು ನಿರ್ಮಿಸಿ; ಕೆಕೆಆರ್ಡಿಬಿ ಕಾರ್ಯದರ್ಶಿ ಅನಿರುದ್ದ್ ಶ್ರವಣ್

ಸುದ್ದಿಮೂಲ ವಾರ್ತೆ

ಯಾದಗಿರಿ,ಜೂ.17: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (ಕೆಕೆಆರ್‍ಡಿಬಿ) ನಿರ್ವಹಿಸಲಾಗುತ್ತಿರುವ ಕಾರ್ಮಗಾರಿಗಳ ನಿರ್ವಹಣೆಯಲ್ಲಿ ಕಾಲವಿಳಂಬ ಮಾಡದೇ ಗುಣಮಟ್ಟದ ಕಾಮಗಾರಿಗಳನ್ನು ನಿರ್ಮಿಸಲು ಜಿಲ್ಲೆಯ ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ ಕೆಕೆಆರ್ಡಿಬಿ ಕಾರ್ಯದರ್ಶಿ ಅನಿರುದ್ದ್ ಶ್ರವಣ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಜಿಲ್ಲೆಯ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿನ ಕಾಮಗಾರಿಗಳಿಗೆ ಕೆಲವರು ಕಾರಣವಿಲ್ಲದೇ ಅಡ್ಡಿಪಡಿಸಿ , ಕಾಮಗಾರಿ ವಿಳಂಬ ಮಾಡುತ್ತಿದ್ದರೆ ಸಂಬಂಧಿಸಿದ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಹಾಗೂ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಕೆಕೆಆರ್‍ಡಿಬಿ ಅನುದಾನದಡಿಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಆಯಾ ಇಲಾಖೆಗಳಿಗೆ ರಾಜ್ಯದಿಂದ ನಿಗದಿಯಂತೆ ಬಿಡುಗಡೆಯಾಗುವ ಅನುದಾನದಲ್ಲಿ ನಿಯಮಿತ ಕಾಮಗಾರಿಗಳನ್ನು ನಡೆಸಬೇಕು. ಅದೇ ರೀತಿ ಅಗತ್ಯ ವಸ್ತುಗಳನ್ನು ಪೂರೈಸಿಕೊಳ್ಳಬೇಕು ಎಂದರು.

2021-22 ಹಾಗೂ 22-23 ನೇ ಸಾಲಿನಲ್ಲಿ ಪ್ರಾರಂಭಿಸಬೇಕಾದ ಕಾಮಗಾರಿಗಳನ್ನು ಪ್ರಾರಂಭಿಸಿದ ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆಯಾ ಏಜೆನ್ಸಿ, ಇಲಾಖೆಗಳು ಹೆಚ್ಚಿನ ಗಮನಹರಿಸಬೇಕು. ಪ್ರಸಕ್ತ ವರ್ಷದ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

2021-22 ನೇ ಸಾಲಿನ ಪಿಡಬ್ಲ್ಯೂಡಿ ಮತ್ತು ಪಿ ಆರ್ ಇ ಡಿ ಯ ಇಲಾಖೆಗಳ ಕ್ರಮವಾಗಿ ಪ್ರಾರಂಭಿಸಬೇಕಾದ ಕಾಮಗಾರಿಗಳನ್ನು ತಕ್ಷಣ ಪ್ರಾರಂಭಿಸಿ ಮುಗಿಸಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಿಲ್ಲೆಯಲ್ಲಿ ರಕ್ತನಿಧಿ ಕೋಶ ಸ್ಥಾಪನೆ ಗೆ ಪ್ರಸ್ತಾವನೆ ಸಲ್ಲಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗರಿಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್ ಹಾಗೂ ಇನ್ನಿತರ ಇಲಾಖಾವಾರು ಅಧಿಕಾರಿಗಳು ಉಪಸ್ಥಿತರಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ