Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಸಮಸ್ಯೆಗಳ ಪರಿಹಾರಕ್ಕೆ ಸಿಎಂ ಬಳಿ ನಿಯೋಗ: ಕೋಡಿಹಳ್ಳಿ ಚಂದ್ರಶೇಖರ್

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ ,ಜು 12: ರಾಜ್ಯದಲ್ಲಿ ಸುಮಾರು 20 ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಹೀಗಾಗಿ, ಮಳೆಯಾಗದೆ ಇರುವ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಣೆ ಮಾಡಿ ಕೂಡಲೇ ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರವನ್ನು ಒತ್ತಾಯಿಸಿದರು.

ಶಿಡ್ಲಘಟ್ಟ ನಗರದ ಉಲ್ಲೂರು ಪೇಟೆಯಲ್ಲಿ ಆಯೋಜಿಸಿದ್ದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಜಾನುವಾರುಗಳಿಗೆ ಮೇವಿನ ಕೊರತೆ ಕಾಡಬಾರದು. ಮಳೆಯ ಅಭಾವ ಹೊಂದಿರುವ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಿಸಬೇಕು ಮತ್ತು ಮಳೆಯನ್ನು ಆಶ್ರಯಿಸಿಕೊಂಡು ಬಿತ್ತನೆ ಕಾರ್ಯವನ್ನು ಪೂರೈಸಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಆಗ್ರಹಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ತಲಾ 5 ಟಿಎಂಸಿ ನೀರು ಪೂರೈಕೆ ಮಾಡಬೇಕು ಕೊರಟಗೆರೆ ಮತ್ತು ದೊಡ್ಡಬಳ್ಳಾಪುರದ ನಡುವೆ ನೀರಿನ ಶೇಖರಣೆಗೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರವೇಪ್ರಾರಂಭಿಸಬೇಕು. ಅವಳಿ ಜಿಲ್ಲೆಗಳಿಗೆ ಹರಿಸುತ್ತಿರುವ ಕೆಸಿ ವ್ಯಾಲಿ ಮತ್ತು ಎಚ್.ಎನ್ ವ್ಯಾಲಿ ನೀರನ್ನು ಮೂರು ಹಂತದಲ್ಲಿ ಶುದ್ದೀಕರಿಸಿ ಕೆರೆಗಳಿಗೆ ಹರಿಸಬೇಕು.

ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಮತ್ತು ರೈತರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡಲು ಜು.19 ರ ನಂತರ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕರೆದೊಯ್ಯಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ವೇಣುಗೋಪಾಲ್, ಬಿ.ನಾರಾಯಣಸ್ವಾಮಿ, ವೀರಾಪುರ ಮುನಿನಂಜಪ್ಪ, ಗುಡಿಹಳ್ಳಿ ಕೆಂಪಣ್ಣ, ಹಿತ್ತಲಹಳ್ಳಿ ಗೋಪಾಲಗೌಡ, ಹೆಚ್.ಕೆ.ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ