Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಲಾರ-ಚಿಕ್ಕಬಳ್ಳಾಪುರ 100 ಕೆರೆ ಕಾಮಗಾರಿ ಶೀಘ್ರವೇ ಆರಂಭ:ಬೋಸರಾಜು

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.6: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೆ.ಸಿ. ವ್ಯಾಲಿ ಮತ್ತು ಎಚ್.ಎನ್. ವ್ಯಾಲಿ ಮೂಲಕ ಬಾಕಿ ಇರುವ 100 ಕೆರೆ ಕಾಮಗಾರಿಗಳು ಶೀಘ್ರವೇ ಆರಂಭಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜ್ ತಿಳಿಸಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಎಂ.ಎಲ್. ಅನಿಲ್‌ಕುಮಾರ್ ಅವರಿಗೆ ಉತ್ತರ ನೀಡಿದ ಅವರು, ಈಗಾಗಲೇ ನಾನು ಸಚಿವನಾದ ಬಳಿಕ ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಕೆ.ಸಿ. ವ್ಯಾಲಿಯಿಂದ ನೀರು ಭರ್ತಿಯಾಗುವ ಕೆರೆಗಳಿಗೆ ಭೇಟಿ ನೀಡಿದ್ದೇನೆ. ಮುಂಬರುವ ದಿನಗಳಲ್ಲಿ ಈ ಎರಡು ಕಣಿವೆಗಳಲ್ಲಿ ಏತ ನೀರಾವರಿ ಮತ್ತು ಕೆರೆ ಭರ್ತಿ ಸಂಬಂಧಪಟ್ಟಂತೆ ಸಲಹೆ ಪಡೆಯಲು ಶೀಘ್ರವೇ ಕೋಲಾರ ಮತ್ತುಚಿಕ್ಕಬಳ್ಳಾಪುರ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದರು.

ಕೋಲಾರ ಜಿಲ್ಲೆಯಲ್ಲಿ 138, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 201 ಕೆರೆಗಳು ಸಣ್ಣ ನೀರವಾರಿ ವ್ಯಾಪ್ತಿಗೆ ಒಳಪಡುತ್ತಿದ್ದು, ಈಗಾಗಲೇ 402 ಕೆರೆ ಅಭಿವೃದ್ಧಿ ಕಾಮಗಾರಿಗಳು ಕಳೆದ ಎರಡು ವರ್ಷಗಳಲ್ಲಿ ಕೈಗೆತ್ತಿಕೊಂಡು ಈ ಪೈಕಿ 184 ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, 118 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ವಿವರಿಸಿದ ಅವರು, ಈ ಕಾಮಗಾರಿಗಳಿಗಾಗಿ 208 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಒಂದು ಕೆರೆ ಒಡೆದಿದ್ದು, ಮೂರು ಕೆರೆಗಳು ಕೋಡಿ ಏರಿ ಜಖಂಗೊಂಡಿವೆ. ಇವುಗಳ ಪುನರ್‌ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದರು.

ಇದಕ್ಕೂ ಮುನ್ನ ಅನಿಲ್‌ಕುಮಾರ್ ಮಾತನಾಡಿ, ಕೆ.ಸಿ. ವ್ಯಾಲಿಯಲ್ಲಿ ಇನ್ನೂ 120 ಕೆರೆಗಳು ಪೂರ್ತಿಗೊಳಿಸಬೇಕಾಗಿದೆ. 885 ಕೋಟಿ ರೂ. ಕಾಮಗಾರಿಗಳಲ್ಲಿ ಕೇವಲ 25 ಕೋಟಿ ರೂ. ಖರ್ಚು ಮಾಡಲಾಗಿದೆ. ಅದಕ್ಕಾಗಿ ಎರಡು ಜಿಲ್ಲೆಗಳಲ್ಲಿ ಬಾಕಿ ಕಾಮಗಾರಿಗಳು ಪೂರ್ಣಗೊಳಿಸಲು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸಮಗ್ರ ಕ್ರಿಯಾಯೋಜನೆ ಸಿದ್ಧಪಡಿಸಿ ಅಗತ್ಯ ಅನುದಾನ ವೆಚ್ಚ ಮಾಡಲು ಮನವಿ ಮಾಡಿದರು.

ಈ ವೇಳೆ ನಾರಾಯಣಸ್ವಾಮಿ ಮತ್ತು ನಜೀರ್ ಅಹಮದ್ ಮಧ್ಯ ಪ್ರವೇಶಿಸಿ ಕೆ.ಸಿ. ವ್ಯಾಲಿ ಮತ್ತು ಎಚ್.ಎನ್. ವ್ಯಾಲಿಯಿಂದ ಕೋಲಾರ ಜಿಲ್ಲೆಯ ನೀರಾವರಿ ವಂಚಿತ ಪ್ರದೇಶಗಳಲ್ಲಿ ಅಂತರ್ಜಲ ಅಭಿವೃದ್ಧಿಗೆ ಕ್ರಮ ವಹಿಸಲು ಕೋರಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ