Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಎಸ್‌ಸಿ ಒಂದೇ ದಿನ ಮೂರು ಪರೀಕ್ಷೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.25: ರಾಜ್ಯ ಲೋಕಸೇವಾ ಆಯೋಗವು ನ.5ರಂದು ಒಂದೇ ದಿನ ಮೂರು ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಗೊಳಿಸಿರುವುದರಿಂದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದೆ. ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚನೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 242 ಲೆಕ್ಕ ಸಹಾಯಕರು, ಸಹಕಾರ ಸಂಘಗಳ 47 ನಿರೀಕ್ಷಕರ ಹುದ್ದೆಗಳಿಗಾಗಿ ರಾಜ್ಯ ಲೋಕಸೇವಾ ಆಯೋಗವು ನ.5ರಂದು ಒಂದೇ ದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿ ಪಡಿಸಿದ್ದು, ಅದೇ ದಿನ ರಾಜ್ಯ ಪೊಲೀಸ್‌ ಇಲಾಖೆಯೂ ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಪರೀಕ್ಷೆ ನಿಗದಿ ಪಡಿಸಿದೆ.

ಈ ಪರೀಕ್ಷೆಗಳನ್ನು ಬೇರೆ ಬೇರೆ ದಿನಗಳಲ್ಲಿ ನಿಗದಿಗೊಳಿಸಲು ಕ್ರಮ ವಹಿಸುವಂತೆ ಹಲವಾರು ಅಭ್ಯರ್ಥಿಗಳು ತಮ್ಮನ್ನು ಕೋರಿರುವುದಾಗಿ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಕಳೆದ ಐದು ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೇ ಸಾವಿರಾರು ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ವಯೋಮಿತಿಗೆ ಸೂಕ್ತವಾದ ಉದ್ಯೋಗ ಸಿಗದೇ ಅನ್ಯಾಯಕ್ಕೆ ಒಳಗಾಗಿದ್ದಾರೆ ಸರ್ಕಾರಿ ಉದ್ಯೋಗಕ್ಕೆ ಸೇರ ಬಯಸಿ ಅರ್ಜಿ ಆಹ್ವಾನಿಸಲಾಗಿರುವ ಪ್ರತಿಯೊಂದು ನೇಮಕಾತಿಗಳಿಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ದೀರ್ಘ ಕಾಲದಿಂದ ತಯಾರಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಚಿವರು ಹೇಳಿದ್ದು, ಈ ಕಾರಣದಿಂದ ಬೇರೆ ಬೇರೆ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಿನಾಂಕವನ್ನು ನಿಗದಿ ಪಡಿಸಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ.

ಲಕ್ಷಾಂತರ ಪ್ರತಿಭಾನ್ವಿತ ಅಭ್ಯರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕೋರಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ