Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆಎಸ್‌ಸಿಎ ಆಡಳಿತ ಮಂಡಳಿ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಚಿನ್ನಸ್ವಾಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಾವಳಿ ಕುರಿತು ಪರಿಶೀಲನೆಗೆ ಸಮಿತಿ ರಚನೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.22:
ಚಿನ್ನಸ್ವಾಾಮಿ ಕ್ರೀೆಡಾಂಗಣದಲ್ಲಿ ರದ್ದಾಗಿರುವ ಕ್ರಿಿಕೆಟ್ ಪಂದ್ಯಾಾವಳಿಗಳನ್ನು ಮತ್ತೆೆ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸೋಮವಾರ ಕರ್ನಾಟಕ ರಾಜ್ಯ ಕ್ರಿಿಕೆಟ್ ಸಂಸ್ಥೆೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಡಿಸೆಂರ್ಬ 24ರಂದು ಕೆಎಸ್‌ಸಿಎ ವಿಜಯ್ ಹಜಾರೆ ಅವರು ಕ್ರಿಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಕೇವಲ ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ಅವರು ಕೇಳಿದ್ದಾರೆ ಎಂದರು.
ಕ್ರೀೆಡಾಪಟುಗಳ ಸುರಕ್ಷತೆಯೆ ಹಿತದೃಷ್ಟಿಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊೊಳಗೊಂಡ ಸಮಿತಿಯು ಮಧ್ಯಾಾಹ್ನ 3 ಗಂಟೆಗೆ ಚಿನ್ನಸ್ವಾಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆೆ ವರದಿ ನೀಡಲಿದೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು 17 ಅಂಶಗಳ ಸಲಹೆ ಸೂಚನೆಗಳನ್ನು ಪಾಲಿಸುವುದು ಅಗತ್ಯ ಎಂದು ಸೂಚಿಸಿ ಪತ್ರ ಬರೆದಿದ್ದರು. ಅದರಲ್ಲಿ ಏನೆಲ್ಲ ಪೂರ್ಣಗೊಳಿಸಿದ್ದಾರೆ ಎಂಬುದನ್ನು ಪರಿಶೀಲಿಸಿ, ಇಂದು ಸಂಜೆ 5 ಗಂಟೆಯೊಳಗೆ ಸಮಿತಿಯು ಸರ್ಕಾರಕ್ಕೆೆ ತಿಳಿಸಲಿದೆ. ಕೆಲ ದಿನಗಳ ಹಿಂದೆಯಷ್ಟೇ ಕೆಎಸ್ಸಿಿಎ ಹೊಸ ಸಮಿತಿ ರಚನೆಯಾಗಿದೆ. ಎಲ್ಲವನ್ನು ಪೂರ್ಣಗೊಳಿಸುವುದಾಗಿ ಕೆಎಸ್‌ಸಿಎ ಅವರು ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.
ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುರ್ಷಾ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ ಹಾಗೂ ಕೆಎಸ್‌ಸಿಎ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿಿತರಿದ್ದರು.
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತದ ಹಿನ್ನೆೆಲೆಯಲ್ಲಿ ನಗರದ ಚಿನ್ನಸ್ವಾಾಮಿ ಕ್ರೀೆಡಾಂಗಣದಲ್ಲಿ ಅಂತಾರಾಷ್ಟ್ರೀಯ ಕ್ರಿಿಕೆಟ್ ಪಂದ್ಯಗಳಿಗೆ ನಿರ್ಬಂಧ ಹೇರಲಾಗಿತ್ತು. ಬಳಿಕ ಡಿ.12 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕೆಲ್ ಡಿಕುನ್ಹಾಾ ವಿಚಾರಣಾ ಆಯೋಗದ ಮಾರ್ಗಸೂಚಿಯನ್ವಯ ಚಿನ್ನಸ್ವಾಾಮಿ ಸ್ಟೇಡಿಯಂನಲ್ಲಿ ಕ್ರಿಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಒಮ್ಮತದ ಅಭಿಪ್ರಾಾಯ ಕೇಳಿಬಂದಿತ್ತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ