Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್‌ಆರ್‌ಟಿಸಿ ಬಸ್‌ಗಳ ಬಾಡಿಗೆ ದರ ಏರಿಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಬಸ್‌ಗಳ ಬಾಡಿಗೆ ದರಗಳನ್ನು ಪರಿಷ್ಕರಣೆ ಮಾಡಿದೆ. ಬಸ್‌ಗಳ ಪ್ರಯಾಣ ದರವನ್ನು ಕಿ. ಮೀ.ಗೆ 2 ರೂ. ನಿಂದ 5 ರೂ. ತನಕ ಏರಿಕೆ ಮಾಡಲಾಗಿದೆ.

ಆಗಸ್ಟ್‌ 1 ರಿಂದ ಜಾರಿಗೆ ಬರುವಂತೆ ಪರಿಷ್ಕೃತ ದರವು ಜಾರಿಗೆ ಬರಲಿದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ. ಆದರೆ ಈ ಹಿಂದೆಯೇ ಬಾಡಿಗೆ ಬುಕ್ ಮಾಡಿದ ಒಪ್ಪಂದಗಳಿಗೆ ಹಿಂದಿನ ದರವೇ ಇರಲಿದೆ ಎಂದು ನಿಗಮ ಸ್ಪಷ್ಟನೆಯನ್ನು ನೀಡಿದೆ.

ಪ್ರವಾಸ, ಮದುವೆ ಹಾಗೂ ಇನ್ನಿತರ ಉದ್ದೇಶಗಳಿಗೆ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್‌ಗಳನ್ನು ಕೆಎಸ್ಆರ್‌ಟಿಸಿ ನೀಡುತ್ತದೆ. ಈ ಬಸ್‌ಗಳ ಬಾಡಿಗೆ ದರವನ್ನು ಏರಿಕೆ ಮಾಡಲಾಗಿದೆ. ಈ ಮೊದಲು ಕನಿಷ್ಠ 300 ಕಿ. ಮೀ. ಪ್ರಯಾಣ ನಿಗದಿ ಮಾಡಲಾಗಿತ್ತು, ಈಗ ಅದನ್ನು 350ಕ್ಕೆ ಪರಿಷ್ಕರಣೆ ಮಾಡಲಾಗಿದೆ. ಅಲ್ಲದೇ ಮೈಸೂರು ನಗರದಲ್ಲಿ ಗಂಟೆಗಳ ಆಧಾರದಲ್ಲಿ ವಾಹನಗಳನ್ನು ಒದಗಿಸುವ ವ್ಯವಸ್ಥೆಯನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಸಾರಿಗೆ ಬಸ್‌ನ ಪರಿಷ್ಕೃತ ಬಾಡಿಗೆ ದಿನಕ್ಕೆ ಕನಿಷ್ಠ 350 ಕಿ. ಮೀ. ಆಗಿದೆ. ರಾಜ್ಯದೊಳಗೆ ಪ್ರತಿ ಕಿ. ಮೀ. ಬಾಡಿಗೆ ದರ 47 ರೂ. ಮತ್ತು ಹೊರ ರಾಜ್ಯಕ್ಕೆ 50 ರೂ. ಆಗಿದೆ.

ಉಳಿದಂತೆ ರಾಜಹಂಸ ಎಕ್ಸಿಕ್ಯೂಟಿವ್, ರಾಜಹಂಸ, ಮಿಡಿ ಬಸ್, ನಾನ್ ಎಸಿ ಸ್ಲೀಪರ್, ಮೈಸೂರು ನಗರ ಸಾರಿಗೆ ಸೆಮಿ ಲೋ ಫ್ಲೋರ್ ಬಸ್‌ಗಳು ಸೇರಿದಂತೆ ಎಲ್ಲಾ ಬಾಡಿಗೆ ಬಸ್‌ಗಳ ದರ ಹೆಚ್ಚಾಗಿವೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ