Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಮಾರಸ್ವಾಮಿ ಹತಾಶೆಯಿಂದ ವರ್ತಿಸುತ್ತಿದ್ದಾರೆ: ಸಚಿವ ಮಹದೇವಪ್ಪ ಕಿಡಿ

ಸುದ್ದಿಮೂಲ ವಾರ್ತೆ

ಮೈಸೂರು, ನ.18: ಬಿಜೆಪಿಯ ಎಲ್ಲ ಜನ ವಿರೋಧಿ ನೀತಿಗಳ ಸಂದರ್ಭದಲ್ಲಿ ಮೌನವಾಗಿದ್ದು ಕೆಲವಕ್ಕೆ ಬೆಂಬಲವನ್ನೂ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಧಿಕಾರ ಸಿಕ್ಕಿಲ್ಲ ಎಂಬ ಒಂದೇ ಕಾರಣಕ್ಕೆ ಬಹಳಷ್ಟು ಹತಾಶೆಯಿಂದ ವರ್ತಿಸುತ್ತಿರುವುದು ಅತ್ಯಂತ ಸ್ಪಷ್ಟವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಸದನದ ಒಳಗೆ ಬಿಜೆಪಿಗೆ ಬೆಂಬಲ ನೀಡಿ, ಸದನದ ಹೊರಗೆ ಪ್ರತಿಭಟನೆ ಮಾಡುವ ನಾಟಕ ಆಡಿದ್ದ ಕುಮಾರಸ್ವಾಮಿ ಅವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇಲ್ಲ ಎಂದು ಟೀಕಿಸಿದ್ದಾರೆ.

ಉತ್ತಮ ಸಾರ್ವಜನಿಕ ಬದುಕಿನ ಭಾಗವಾಗಿ ಈ ಹಿಂದೆಯೇ ಸೈದ್ಧಾಂತಿಕ ಬದ್ಧತೆಯ ಪ್ರಾಮುಖ್ಯತೆ ಮತ್ತು ಅದು ನಾಯಕತ್ವದ ಮೇಲೆ ಉಂಟು ಮಾಡುವ ಪರಿಣಾಮದ ಬಗ್ಗೆ ಒಳ್ಳೆಯ ಮನಸ್ಸಿನಿಂದ ಹಿಂದೆಯೇ ಅವರಿಗೆ ನಾನು ಎಚ್ಚರಿಸಿದ್ದೆ. ಆದರೆ ಇದ್ಯಾವುದನ್ನೂ ಗಂಭೀರವಾಗಿ ಪರಿಗಣಿಸದ ಅವರು ಈಗ ಮತ್ತೆ ಬಿಜೆಪಿಯೊಂದಿಗೆ ಕೈಜೋಡಿಸಿ ಸೈದ್ಧಾಂತಿಕವಾಗಿ ತಾವೆಷ್ಟು ಅಧಃಪತನಕ್ಕೆ ಜಾರಿದ್ದಾರೆ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಒಂದು ಉತ್ತಮ ಪ್ರಾದೇಶಿಕ ಪಕ್ಷವಾಗಿ ಸಂಘಟನೆ ಮತ್ತು ವಿಷಯಾಧಾರಿತ ಹೋರಾಟಗಳ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ತೋರಬೇಕಿದ್ದ ಅವರು ಈಗಲೂ ಸಹ ಅಧಿಕಾರ ಎಂದರೆ ಅತಂತ್ರ ಸ್ಥಿತಿಯಲ್ಲಿ ದೊರಕುವ ಅನಾಯಾಸ ಅವಕಾಶ ಎಂದುಕೊಂಡಿದ್ದು ಇದೊಂದು ನಗೆಪಾಟಲಿನ ವಿಷಯವಾಗಿದೆ ಎಂದು ಖಂಡಿಸಿದ್ದಾರೆ.

ಮನೆಗೆ ಕರೆಂಟ್ ಪಡೆದುಕೊಂಡ ವಿಚಾರದಲ್ಲಿ ಕ್ಷುಲ್ಲಕ ರಾಜಕೀಯ ಮಾಡಬಾರದು ಎಂದು ಬೋಧಿಸುವ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿಗಳು ಒಂದೆರಡು ಗಂಟೆ ಕ್ರಿಕೆಟ್ ಪಂದ್ಯ ವೀಕ್ಷಿಸಲು ಹೋದರೆ ಇವರಿಗೆ ರಾಜ್ಯದ ಸಮಸ್ಯೆಗಿಂತ ಕ್ರಿಕೆಟ್ ನೋಡುವುದು ಮುಖ್ಯ ಎಂದು ಅತ್ಯಂತ ಬಾಲಿಶತನದ ಹೇಳಿಕೆಯನ್ನು ನೀಡಿದ್ದರು.

ತಾನು ಮಾತ್ರ ಏನಾದರೂ ಹೇಳಬಹುದು, ಮಿಕ್ಕವರೆಲ್ಲರೂ ಇವರು ಅಪೇಕ್ಷಿಸುವ ಆದರ್ಶತನದಿಂದ ಇರಬೇಕು ಎಂದು ಬಯಸುವ ಕುಮಾರಸ್ವಾಮಿ ಅವರು ತಮ್ಮ ದ್ವಂದ್ವ ನಿಲುವುಗಳ ಕಾರಣಕ್ಕಾಗಿಯೇ ತಮ್ಮ ನಾಯಕತ್ವದ ಮೌಲ್ಯವನ್ನು ದಿನೇ ದಿನೇ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಷಾದಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು ವರ್ಗಾವಣೆ ದಂಧೆ ಮಾಡುತ್ತಿದ್ದಾರೆ ಎಂದು ತಳಬುಡವಿಲ್ಲದ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿ ಆಗಿದ್ದಾಗ ವರ್ಗಾವಣೆಗಳನ್ನು ಮಾಡಿಲ್ಲವೇ? ಅದನ್ನೂ ಅವರು ದಂಧೆ ಎಂದು ಪರಿಗಣಿಸುತ್ತಾರಾ ಎಂಬುದನ್ನು ಸ್ಪಷ್ಟ ಪಡಿಸಲಿ ಎಂದು ಆಗ್ರಹಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ