Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ಪತ್ರೆ ಅಧಿಕಾರಿಗಳಿಂದ ಕಡತಗಳ ನಿರ್ವಹಣೆಯ ಕೊರತೆ : ಶರತ್ ಬಚ್ಚೇಗೌಡ

ಸುದ್ದಿಮೂಲ ವಾರ್ತೆ

ಹೊಸಕೋಟೆ, ನ. 10 : ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಧಿಕಾರಿಗಳು ಆಸ್ಪತ್ರೆಯಲ್ಲಿ ಕಡತಗಳ ನಿರ್ವಹಣೆಯಲ್ಲಿ ವಿಫಲರಾಗಿರೋದನ್ನು ಕಂಡು ಶಾಸಕ ಶರತ್ ಬಚ್ಚೇಗೌಡ ಅಸಮಾಧಾನ ಗೊಂಡ ಘಟನೆ ನಡೆಯಿತು.

ಆಸ್ಪತ್ರೆ ಆವರಣದಲ್ಲಿ ಆರೋಗ್ಯ ರಕ್ಷಾ ಸಮಿತಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಶರತ್‌ ಬಚ್ಚೇಗೌಡ ಅಧಿಕಾರಿಗಳ ವಿರುದ್ಧ ಅಸಮಾಧಾನ ಗೊಂಡರು. ಮುಂದಿನ ತ್ರೈಮಾಸಿಕ ಅವಧಿಗೆ ಹಣದ ಬಿಡುಗಡೆಯ ದೃಷ್ಟಿಯಿಂದ ಸಭೆಯನ್ನು ನಡೆಸಲಾಯಿತು. ಆದರೆ, ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷೆಗಳ ಸಂಖ್ಯೆ, ಆಮ್ಲಜನಕ ಬಳಕೆ ಪ್ರಮಾಣ, ಡಿ ಗ್ರೂಪ್ ನೌಕರರ ಮರಣದ ನಂತರ ಗೌರವಧನ ಬಿಡುಗಡೆ, ಮೆಡಲಿಕ್ ತ್ಯಾಜ್ಯ ನಿರ್ವಹಣೆಗೆ ಹಣ ಬಿಡುಗಡೆ, ಮಾಸಿಕವಾರು ಮಾಡಲಾಗಿರುವ ಕ್ಷ-ಕಿರಣಗಳ ಸಂಖ್ಯೆ ಇದರ ಬಗ್ಗೆ ಕಡತ ನಿರ್ವಹಣೆ ಮಾಡಿಲ್ಲ. ದಾಖಲೆ ಕೇಳಿದರೆ ಕೊಡಲು ಅಧಿಕಾರಿಗಳು ತಡಬಡಾಯಿಸಿದರು. ಇದರಿಂದ ಅಸಮಾಧಾನಗೊಂಡರು.

ನೀವು ಮಾಡಿರುವ ಖರ್ಚಿಗೆ ಅಥವಾ ನೀವು ಕೇಳಿದಷ್ಟು ಹಣ ಬಿಡುಗಡೆಗೆ ಅನುಮೋದನೆ ಕೊಡಲು ನಾವು ಇಲ್ಲಿಗೆ ಬರಬೇಕಾ? ಕನಿಷ್ಠಪಕ್ಷ ಯಾವ ತಿಂಗಳಿನಲ್ಲಿ ಯಾವುದಕ್ಕೆ ಎಷ್ಟು ಖರ್ಚು ಮಾಡಿದ್ದಿರಾ ಎಂದು ಅದಕ್ಕೆ ಪೂರಕವಾದ ದಾಖಲೆಗಳನ್ನು ಒದಗಿಸಬೇಕಲ್ಲವೇ? ಆದ್ದರಿಂದ ಮುಂದಿನ ಸಭೆಯೊಳಗೆ ಕಳೆದ ತ್ರೈಮಾಸಿಕ ವರದಿ ಅನುಮೋದನೆ ಪಡೆದ ನಂತರ ಮುಂದಿನ ತ್ರೈಮಾಸಿಕ ಹಣದ ಬಿಡುಗಡೆಗೆ ಸೂಕ್ತ ವಿವರಣೆಯೊಂದಿಗೆ ಮಾಹಿತಿ ನೀಡಬೇಕು ಎಂದು ಆಸ್ಪತ್ರೆಯ ಆಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಾಲೂಕು ಆರೋಗ್ಯ ಅಧಿಕಾರಿ ಡಾ. ವೀಣಾ, ತಾಲೂಕು ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಸತೀಶ್, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ