Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವಿ ದರ್ಶನ ಪಡೆದ ಲಕ್ಷಾಂತರ ಭಕ್ತರು

ಸುದ್ದಿಮೂಲ ವಾರ್ತೆ

ಮೈಸೂರು, ಜೂ.23 : ಚಾಮುಂಡಿ ಬೆಟ್ಟದಲ್ಲಿ ನೆಲೆಯಾಗಿರುವ ಶ್ರೀಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲು ಜನ ಸಾಗರವೇ ಹರಿದುಬಂದಿತ್ತು. ಮುಂಜಾನೆ 4 ಗಂಟೆಯಿಂದಲೇ ದೇವಿಯ ದರ್ಶನ ಪಡೆಯಲು ರಾಜ್ಯಾ ಮಾತ್ರವಲ್ಲ ಹೊರ ರಾಜ್ಯಗಳ ಭಕ್ತರೂ ಆಗಮಿಸಿದ್ದರು.



ಭಕ್ತರು ಬೇಡಿದ್ದನ್ನು ಕರುಣಿಸುವ ತಾಯಿ, ಮಹಿಷ ಮರ್ಧಿನಿ, ದುಷ್ಟ ಶಿಕ್ಷಕಿ, ಶಿಷ್ಟ ರಕ್ಷಕಳಾದ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ಪುನೀತರಾದರು. .

ಆಷಾಢ ಶುಕ್ರವಾರದ ಮೊದಲ ದಿನ, ವರ್ಧಂತಿ ಉತ್ಸವದ ಪೂಜೆಯಲ್ಲಿ ಸರ್ವಾಲಂಕೃತವಾದ ದೇವಿಯ ದರ್ಶನ ಪಡೆಯಲು ಜಿಲ್ಲಾಡಳಿತ ಹಾಗೂ ದೇವಸ್ಥಾನ ಮಂಡಳಿಯವರು ಮಾಡಿದ ಅಚ್ಚುಕಟ್ಟು ವ್ಯವಸ್ಥೆಯಿಂದಾಗಿ ದೇವಿಯ ದರ್ಶನ ಸಾಂಗೋಪಾಂಗವಾಗಿ ನಡೆಯಿತು.

ಬೆಳಗಿನ ಮೊದಲ ಜಾವ 3,30 ರಿಂದಲೇ ಆರಂಭವಾದ ಪೂಜಾ ವಿಧಿ ವಿಧಾನಗಳು,ಮಂತ್ರ ಘೋಷಗಳ ಇಂಪಾದ ಸದ್ದು, ತಾಯಿಯ ದರ್ಶನ ಕಣ್ತುಂಬಿಕೊಳ್ಳಲು ಆಗಮಿಸಿದ ಸಾವಿರಾರು ಭಕ್ತರು ಭಕ್ತಿ ಭಾವ ಪರವಶರಾಗಿ ಸದ್ದುಗದ್ದಲವಿಲ್ಲದೇ, ಉದ್ದುದ್ದ ಸಾಲುಗಳಲ್ಲಿ ಹೆಜ್ಜೆ ಹಾಕಿದರು.

ತಳಿರು ತೋರಣಗಳಿಂದ, ಬಗೆಬಗೆಯ ಹೂಗಳಿಂದ ಅಲಂಕೃತವಾದ ದೇವಾಲಯದ ಪ್ರಾಂಗಣ ಒಳಭಾಗ ತೆಂಗಿನಕಾಯಿ, ಕಬ್ಬು , ತರಹೇವಾರಿ ಹೂಗಳ ಅಲಂಕಾರ ಹಾಗೂ ತೋರಣಗಳು ದೇವಾಲಯದ ಅಂದವನ್ನು ನೂರ್ಮಡಿಗೊಳಿಸಿದ್ದವು.

ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರಗೆ ರಾಜಕಾರಣಿಗಳು, ಅಧಿಕಾರಿಗಳು, ಮಹಿಳೆಯರು,ಮಕ್ಕಳು ದೇವಿ ದರುಶನದಿಂದ ಪುನೀತರಾದರು. ಜನರೇ ಸ್ವಯಂ ಶಿಸ್ತು ಅಳವಡಿಸಿಕೊಂಡದ್ದರಿಂದ ಪೊಲೀಸರ ಕೆಲಸ ತುಸು ಹಗುರಾಗಿತ್ತು.

ಉಚಿತ ಬಸ್ : ಹೆಚ್ಚಿನ ಮಹಿಳಾ ಭಕ್ತರು

ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಉಚಿತ ಬಸ್ ಸೇವೆಯಿಂದಾಗಿ ಮಹಿಳೆಯರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಕೆಲ ಮಹಿಳಾ ಸಂಘಗಳು, ಸ್ತ್ರೀ ಶಕ್ತಿ ಗುಂಪುಗಳ ಮಹಿಳೆಯರು ತಂಡೋಪತಂಡವಾಗಿ ಆಗಮಿಸಿ ಸರ್ಕಾರದ ಉಚಿತ ಬಸ್ ಯೋಜನೆಯನ್ನು ಶ್ಲಾಘಿಸಿದರು.

ಭಕ್ತರಿಗೆ ದಾಸೋಹ:

ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಚಾಮುಂಡೇಶ್ವರಿ ಸೇವಾ ಸಮಿತಿ, ಮೊದಲ ಆಷಾಢ ಶುಕ್ರವಾರದ ಅನ್ನದಾನ ಮಾಡಿದ್ದು, ಸುಮಾರು 30 ಸಾವಿರ ಭಕ್ತರಿಗೆ ಊಟದ ವ್ಯವಸ್ಥೆ ಮಾಡಿದ್ದರು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ತಿಳಿಸಿದರು

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ