Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರರತ್ನ ಪ್ರಶಸ್ತಿಗೆ ಲಕ್ಷ್ಮೀ ನಾರಾಯಣಪ್ಪ ಭಾಜನ

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ನ.28 : ಪ್ರತಿಯೊಬ್ಬರ ಸಹಕಾರದ ಫಲವಾಗಿ ಸಂಘಗಳನ್ನೂ ಸಹಕಾರಿ ಕ್ಷೇತ್ರದಲ್ಲಿ ಲಾಭದಾಯಕವನ್ನಾಗಿಸಿ ಅಭಿವೃದ್ಧಿ ಪಥದತ್ತ ಕೊಂಡೊಯ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಮಂಡಳಿ ನೀಡುವ ಸಹಕಾರ ರತ್ನ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಿ ಪ್ರಶಸ್ತಿ ಕೊಟ್ಟು ಗೌರವಿಸಿರುವುದು ಸಹಕಾರಿ ಕ್ಷೇತ್ರಕ್ಕೆ ಸಂದ ಗೌರವವಾಗಿದೆ ಎಂದು ಹಿರಿಯ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಬಾಲೇಪುರ ಜಿ .ಲಕ್ಷ್ಮೀನಾರಾಯಣಪ್ಪ ತಿಳಿಸಿದರು.

ದೇವನಹಳ್ಳಿತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ನಲ್ಲೂರು ಗ್ರಾಮದ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆವರಣದಲ್ಲಿ ಅಧ್ಯಕ್ಷರಾದ ಜಿ.ಲಕ್ಷ್ಮೀನಾರಾಯಣಪ್ಪ ರವರಿಗೆ ಕರ್ನಾಟಕ ಸರ್ಕಾರದಿಂದ ಸಹಕಾರ ರತ್ನ ಪುರಸ್ಕಾರ ನೀಡಿರುವುದಕ್ಕೆ ಅಭಿನಂದಿಸಲಾಯಿತು.

ಕೆಪಿಸಿಸಿ ಸದಸ್ಯ ವಿ. ಶಾಂತಕುಮಾರ್ ಮಾತನಾಡಿ, ಧೀಮಂತ ನಾಯಕ ನಗುಮುಖದ ಒರಟುತನ ಹಾಸ್ಯ ಭರಿತ ನಿಷ್ಕಳಂಕ ಮಾತುಗಾರ " ಸಹಕಾರ ರತ್ನ" ಪ್ರಶಸ್ತಿಗೆ ಆಯ್ಕೆ ಯಾಗಿರುವ ನಮ್ಮ ನಾಯಕ ಜಿ. ಲಕ್ಷ್ಮೀನಾರಾಯಣ ಅಣ್ಣನವರಿಗೆ ಅಭಿನಂದನೆಗಳು ಹಾಗೂ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದಲ್ಲಿ ಉತ್ತಮ ಹೆಸರನ್ನು ಪಡೆದಿದ್ದು ಒಕ್ಕೂಟದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿರುವ ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಮಂಡಳಿ ವತಿಯಿಂದ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಶ್ಲಾಘನೀಯವಾದದ್ದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ್, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ಮುಖಂಡರಾದ ಶಂಕರಪ್ಪ, ಲಕ್ಷ್ಮಣಗೌಡ, ವೆಂಕಟೇಶ್, ನಾಗೇಗೌಡ, ಲಕ್ಷ್ಮಣಮೂರ್ತಿ, ಮಂಜುಳಾ ಇನ್ನು ಹಲವು ಮುಖಂಡರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ