Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರಲ್ಲಿ ಪಂಚ ಗ್ಯಾಾರಂಟಿ ಯೋಜನೆಗಳ ಪ್ರಚಾರದ ಕಲಾ ಜಾಥಾಕ್ಕೆೆ ಚಾಲನೆ

ಸುದ್ದಿಮೂಲ ವಾರ್ತೆ ರಾಯಚೂರು, ನ.20:
ರಾಜ್ಯ ಸರ್ಕಾರದ ಐದು ಗ್ಯಾಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋೋತಿ, ಶಕ್ತಿಿ ಹಾಗೂ ಯುವನಿಧಿ ಯೋಜನೆ ಕುರಿತಂತೆ ಎಲ್ಇಡಿ ವಾಹನದ ಮೂಲಕ ಕಿರುಚಿತ್ರಗಳ ಪ್ರದರ್ಶನ, ಸಂಗೀತ, ಬೀದಿ ನಾಟಕದಿಂದ ಜನಸಾಮಾನ್ಯರಿಗೆ ಮಾಹಿತಿ ಹಾಗೂ ಪ್ರಚಾರ ನೀಡಲು ಹಮ್ಮಿಿಕೊಂಡಿರುವ ಕಲಾ ಜಾಥಾ ಕಾರ್ಯಕ್ರಮಕ್ಕೆೆ ನವೆಂಬರ್ 20ರಂದು ಚಾಲನೆ ಸಿಕ್ಕಿಿತು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನದ ಜಿಲ್ಲಾಮಟ್ಟದ ಸಮಿತಿಯ ಉಪಾಧ್ಯಕ್ಷರಾದ ನಾಗೇಂದ್ರ ಮಟಮಾರಿ, ಹನುಮಂತಪ್ಪ ಜಾಲಿಬೆಂಚಿ ಹಾಗೂ ತಾಲೂಕುಮಟ್ಟದ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ ಅವರು ಹಸಿರು ನಿಶಾನೆ ತೋರುವ ಮೂಲಕ ಕಲಾ ಜಾಥಾ ಕಾರ್ಯಕ್ರಮಕ್ಕೆೆ ಚಾಲನೆ ನೀಡಿದರು.
ಈ ವೇಳೆ ಹನುಮಂತಪ್ಪ ಜಾಲಿಬೆಂಚಿ ಅವರು ಮಾತನಾಡಿ, ಜನತೆಗೆ ಮಾತು ನೀಡಿದಂತೆ ರಾಜ್ಯ ಸರ್ಕಾರವು ವಾರ್ಷಿಕವಾಗಿ 52.000 ಕೋಟಿ ರೂ ಬಳಕೆ ಮಾಡಿ ಎಲ್ಲ ಪಂಚ ಗ್ಯಾಾರಂಟಿ ಯೋಜನೆಗಳನ್ನು ಅನುಷ್ಠಾಾನಗೊಳಿಸಿ ಬದ್ಧತೆಯನ್ನು ಉಳಿಸಿಕೊಂಡಿದೆ. ಈ ಯೋಜನೆಗಳಿಂದ ರಾಜ್ಯದ ಜನತೆಗೆ ಸಾಕಷ್ಟು ಅನುಕೂಲವಾಗಿದೆ. ಈ ಬಗ್ಗೆೆ ಪ್ರಚಾರ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಅಚ್ಚುಕಟ್ಟಾಾಗಿ ನಡೆಯಬೇಕು ಎಂದರು.
ನಾಗೇಂದ್ರಪ್ಪ ಮಟಮಾರಿ ಅವರು ಮಾತನಾಡಿ, ರಾಜ್ಯದ 7 ಕೋಟಿ ಜನರಿಗೆ ಗ್ಯಾಾರಂಟಿ ಯೋಜನೆಗಳು ಬದುಕು ನೀಡಿದೆ. ರಾಜ್ಯದ ಶೇ.96ರಷ್ಟು ಜನ ಒಂದಲ್ಲಾ ಒಂದು ರೀತಿಯಲ್ಲಿ ಪಂಚ ಗ್ಯಾಾರಂಟಿ ಯೋಜನೆಗಳ ಲಾನುಭವಿಗಳಾಗಿದ್ದಾರೆ. ಈ ಮಾಹಿತಿಯು ಜಿಲ್ಲೆಯ ಪ್ರತಿ ಮನೆಮನೆ ಬಾಗಿಲಿಗೆ ಹೋಗಬೇಕು ಎಂದು ತಿಳಿಸಿದರು.
ಪವನ್ ಕಿಶೋರ್ ಪಾಟೀಲ ಅವರು ಮಾತನಾಡಿ, ಪಂಚ ಗ್ಯಾಾರಂಟಿ ಯೋಜನೆಗಳು ರಾಯಚೂರು ಜಿಲ್ಲೆಯಲ್ಲಿ ಸಹ ಅಚ್ಚುಕಟ್ಟಾಾಗಿ ಅನುಷ್ಠಾಾನವಾಗುತ್ತಿಿವೆ. ಗೃಹಲಕ್ಷ್ಮೀ ಯೋಜನೆಯ ಅನುಷ್ಠಾಾನದಲ್ಲಿ ಇಡೀ ರಾಜ್ಯದಲ್ಲಿಯೇ ರಾಯಚೂರು ಜಿಲ್ಲೆಗೆ 5ನೇ ಸ್ಥಾಾನ ಲಭಿಸಿದೆ. ಯುವನಿಧಿ ಅನುಷ್ಠಾಾನದಲ್ಲಿ ಇಡೀ ರಾಜ್ಯದಲ್ಲಿಯೇ ನಾವು 3ನೇ ಸ್ಥಾಾನದಲ್ಲಿದ್ದೇವೆ. ಕಲಾ ಜಾಥಾ ತಂಡದಲ್ಲಿರುವ ಎಲ್ಲರೂ ಪ್ರಚಾರ ರಾಯಭಾರಿಗಳು ನಾವು ಎಂದು ಭಾವಿಸಿ ಜಿಲ್ಲೆಯಲ್ಲಿ ಪ್ರಚಾರ ಕಾರ್ಯವನ್ನು ಶಿಸ್ತುಬದ್ಧವಾಗಿ ನಡೆಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಡಾ.ಟಿ.ರೋಣಿ ಅವರು ಮಾತನಾಡಿ, ಅರ್ಹ ಪ್ರತಿಯೊಬ್ಬರು ಸಹ ಈ ಪಂಚ ಗ್ಯಾಾರಂಟಿ ಯೋಜನೆಗಳ ಪಾಲುದಾರರಾಗುವ ನಿಟ್ಟಿಿನಲ್ಲಿ ವಾರ್ತಾ ಇಲಾಖೆಯಿಂದ ಪ್ರಚಾರ ಕಾರ್ಯಗಳು ವ್ಯವಸ್ಥಿಿತವಾಗಿ ನಡೆಯಬೇಕು ಎಂದು ತಿಳಿಸಿದರು.
ವಾರ್ತಾ ಸಹಾಯಕರಾದ ಗವಿಸಿದ್ದಪ್ಪ ಅವರು ಸ್ವಾಾಗತಿಸಿ, ಪ್ರಾಾಸ್ತಾಾವಿಕ ಮಾತನಾಡಿದರು. ಈ ವೇಳೆ ವಾರ್ತಾ ಇಲಾಖೆಯ ಪ್ರಕಾಶ, ಅಪ್ರೆೆಂಟಿಸ್ ತರಬೇತುದಾರ ಲವ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕಲಾವಿದರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ