Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಯಾಸಂಬಳ್ಳಿ ಗ್ರಾಮದಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಗೆ ಚಾಲನೆ


ಸುದ್ದಿಮೂಲ ವಾರ್ತೆ




ಬೇತಮಂಗಲ,ಜೂ.19 : ಗ್ರಾಮಗಳ ಅಬಿವೃದ್ದಿಯ ಮೇಲೆ ವ್ಯಾಪಕವಾಗಿ ಕೇಂದ್ರಿಕರಿಸುವ ಗ್ರಾಮೀಣ ಅಭಿವೃದ್ದಿ ಕಾರ್ಯಕ್ರಮವಾಗಿದ್ದು, ಸಾಮಾಜಿಕ, ಸಾಂಸ್ಕೃತಿಕವಾಗಿ ಹಳ್ಳಿ ಸಮುದಾಯದ ಜನರಲ್ಲಿ ಸಾಮಾಜಿಕ ಚಲನಶೀಲತೆ ಪ್ರೇರಿಪಿಸುತ್ತದೆ ಎಂದು ಸಂಸದ ಎಸ್. ಮುನಿಸ್ವಾಮಿ ಹೇಳಿದರು.


ಪಟ್ಟಣದ ಸಮೀಪದ ಕ್ಯಾಸಂಬಳ್ಳಿ ಗ್ರಾಮದಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿದರು.  ಅಸ್ತಿತ್ವದಲ್ಲಿರುವ ಯೋಜನೆಗಳ ಅನುಷ್ಠಾನದ ಮೂಲಕ ಆದರ್ಶ ಗ್ರಾಮಗಳನ್ನು ದತ್ತು ಪಡೆದು ಅಭಿವೃದ್ದಿ ಪಡೆಸಿ ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸುವುದಾಗಿದೆ. ಸರ್ಕಾರದಲ್ಲಿರುವ ಪ್ರತಿಯೊಂದು ಇಲಾಖೆಯಲ್ಲಿ ಲಭ್ಯವಿರುವ ಮೂಲಭೂತ ಸೌಲಭ್ಯಗಳನ್ನು ಜನರಿಗೆ ತಲುಪಿಸುವುದರ ನಿಟ್ಟಿನಲ್ಲಿ ಆದರ್ಶ ಗ್ರಾಮವನ್ನು ಕಾಣಲು ಸಾದ್ಯ ಎಂದರು.


ಈ ಕಾರ್ಯಕ್ರಮದಲ್ಲಿ ಸುಮಾರು 35ಕ್ಕೂ ಆಧಿಕ ಇಲಾಖೆಗಳು ಪಾಲ್ಗೊಂಡಿದ್ದವು. , ಆಯಾ ಇಲಾಖೆಗೆ ಸಂಬಂದ ಪಟ್ಟ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕೆಂದು ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಮಾಡಿದರು.


ಮಹಿಳೆಯರಿಗೆ ಉಚಿತ ಟೈಲರಿಂಗ್ ಮಿಷನ್,  ಅಂಗವಿಕಲರಿಗೆ ಉಚಿತ ವೀಲ್‌ಚೇರ್ ಮ ತ್ತು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾಕಿಟ್, ಮಹಿಳೆಯರಿಗೆ 33 ಲಕ್ಷ ರೂ. ಸಾಲ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಕ ರಿತೇಶ್‌ಕುಮಾರ್, ಮಾಜಿ ಶಾಸಕ ವೈ,ಸಂಪಂಗಿ, ಜಿಪಂ ಮಾಜಿ ಸದಸ್ಯ ಜಯಪ್ರಕಾಶ್ ನಾಯ್ಡು, ವೈ,ಎಸ್. ಅಶ್ವಿನಿ ಸಂಪಂಗಿ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಹೇಶ್, ಗ್ರಾಪಂ ಅಧ್ಯಕ್ಷೆ ವಿಜಿಯಮ್ಮ, ಉಪಾದ್ಯಕ್ಷೆ ಅಂಜಲಿ ಪ್ರತಾಪ್, ಸೇರಿದಂತೆ ಆಯಾ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.


ಫೋಟೋ -  ಬೇತಮಂಗಲದ ಸಮೀಪದ ಕ್ಯಾಸಂಬಳ್ಳಿ ಗ್ರಾಮದಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ