Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶುಸಖಿಯರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಸುದ್ದಿಮೂಲ ವಾರ್ತೆ

ಮೈಸೂರು,ಸೆ.26: ಹಸು, ಎಮ್ಮೆ ಕುರಿ, ಕೋಳಿ ಸಾಕಾಣಿಕೆಯ ಪಶುಸಂಗೋಪನೆ ನಾಡಿನ ಸಂಪತ್ತು ಹೆಚ್ಚಿಸುವ ಮೂಲಕ ಆರ್ಥಿಕತೆಯೂ ಪ್ರಗತಿ ಕಾಣುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ನಡೆದ ಪಶುಸಖಿಯರ ತರಬೇತಿ ಕಾರ್ಯಕ್ರಮ, ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಮತ್ತು ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿ ಮಾತನಾಡಿದರು.

ಹಾಲು ಉತ್ಪಾದಕರು ಸಹಕಾರಿ ಕ್ಷೇತ್ರದಲ್ಲಿ ಆರ್ಥಿಕತೆಗೆ ಕಾರಣರಾಗಿದ್ದಾರೆ. ಹಾಲು ಒಕ್ಕೂಟಗಳು ರಚನೆಯಾಗಿದ್ದೇ ರೈತರ, ಹಾಲು ಉತ್ಪಾದಕರ ಶೋಷಣೆ ತಪ್ಪಿಸುವುದಕ್ಕಾಗಿ. ಕೆಎಂಎಫ್ ಮತ್ತು ಡೈರಿಗಳಲ್ಲಿ ಅಧಿಕಾರಿಗಳ ಏಕಸ್ವಾಮ್ಯ ತಪ್ಪಿಸಲು ಹಾಲು ಒಕ್ಕೂಟಗಳಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಪಶುಸಂಗೋಪನಾ ಸಚಿವನಾಗಿ ಮಾಡಿದ್ದೆ ಎಂದು ಸ್ಮರಿಸಿದರು.

ಹಸು, ಎಮ್ಮೆ, ಕುರಿ, ಮೇಕೆ ತಳಿಗಳ ಉಳಿಸುವ ಮತ್ತು ಅಭಿವೃದ್ಧಿ ಪಡಿಸುವ ಹೊಣೆಗಾರಿಕೆಯನ್ನು ಪಶುಸಂಗೋಪನಾ ಇಲಾಖೆ ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಆಶಾ ಕಾರ್ಯಕರ್ತರು ಮಾಡುತ್ತಿರುವ ಉತ್ತಮ ಕಾರ್ಯವನ್ನೇ ಪಶು ಇಲಾಖೆಯಲ್ಲಿ ಪಶುಸಖಿಯರು ನಿರ್ವಹಿಸುತ್ತಾರೆ. ಇವರು ಪಶುಪಾಲಕರು, ರೈತರು ಮತ್ತು ಸರ್ಕಾರದ ನಡುವೆ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಾರೆ ಎಂದು ಮೆಚ್ಚುಗೆ ಸೂಚಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಏರ್ ಪೋರ್ಟ್ ನಿಂದ ನೇರವಾಗಿ ಮುಖ್ಯಮಂತ್ರಿಗಳು ಉತ್ತನಹಳ್ಳಿ ಮಾರಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ನಂತರ ಉತ್ತನಹಳ್ಳಿ ಅಂಬೇಡ್ಕರ್ ಭವನದ ಉದ್ಘಾಟನೆ ನೆರವೇರಿಸಿ, ಕನಕದಾಸ ಮತ್ತು ಸಂಗೊಳ್ಳಿರಾಯಣ್ಣ ಪುತ್ಥಳಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು

ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿಲ್ಲೆಯ ಶಾಸಕರಾದ ಸಿ.ಅನಿಲ್ ಕುಮಾರ್, ಡಿ.ರವಿಶಂಕರ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ ಮತ್ತು ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮರಿತಿಬ್ಬೇಗೌಡ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ