Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಳ್ಳು ಸುದ್ದಿ ತಡೆಯಲು ಕಠಿಣ ಕಾನೂನು ಜಾರಿ- ಸಚಿವ ಡಾ: ಜಿ. ಪರಮೇಶ್ವರ್

ತುಮಕೂರು ಜು.28 : ಸುಳ್ಳು ಸುದ್ದಿಗಳನ್ನು ತಡೆಗಟ್ಟಲು ಸದ್ಯದಲ್ಲಿಯೇ ಕಠಿಣ ಕಾನೂನನ್ನು ಜಾರಿಗೆ ತರಲಾಗುತ್ತಿದ್ದು, ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಸುಳ್ಳು ಸುದ್ದಿ ಹರಡುವಿಕೆಯನ್ನು ನಿಲ್ಲಿಸಲು ಸಕಲ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.

ತುಮಕೂರು ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ-2023 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ, ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳು, ಗಣ್ಯರ ಮೇಲೆ ಅನಾವಶ್ಯಕವಾಗಿ ಸುಳ್ಳು

ಸುದ್ದಿಗಳನ್ನು ಹಬ್ಬಿಸುವ ಕೆಲಸ ಇತ್ತೀಚೆಗೆ ವ್ಯಾಪಕವಾಗಿ ನಡೆಯುತ್ತಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಗಂಭೀರ ಪರಿಣಾಮಗಳು ಸಮಾಜದ ಮೇಲೆ ಉಂಟಾಗುತ್ತಿದೆ. ಇದನ್ನು ನಿಲ್ಲಿಸಲು ಕಠಿಣ ಶಿಕ್ಷೆಯುಳ್ಳ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು.

ಪತ್ರಕರ್ತರ ಚಿಂತನೆ ಸಮಾಜಮುಖಿಯಾಗಿರಬೇಕು ಮತ್ತು ಜನರ ಏಳಿಗೆಯನ್ನು ಬಯಸುವಂತಿರಬೇಕು. ಟೀಕೆಗಳು ಸತ್ಯ ಆಧಾರಿತ ಟೀಕೆಯಾಗಿರಬೇಕು. ಸುಳ್ಳಿನ ಟೀಕೆಯಾಗಿರಬಾರದು ಎಂದ ಅವರು ‘ತಟಸ್ಥ ನೀತಿ ಪತ್ರಕರ್ತರಿಗೆ ಶೋಭೆ ತರುತ್ತದೆ’ ಎಂದರು.

ಜೀವನೋಪಾಯಕ್ಕಾಗಿ ಪತ್ರಿಕೋದ್ಯಮಕ್ಕೆ ಬರುತ್ತಿರುವವರು ಹೆಚ್ಚುತ್ತಿದ್ದಾರೆ. ಪತ್ರಿಕೋದ್ಯಮ ಒಂದು ಜವಾಬ್ದಾರಿ ಎಂದು ಹೇಳುವವರು ಕಡಿಮೆಯಾಗುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಪತ್ರಕರ್ತರ ಸಂಘದ ಬೇಡಿಕೆಯಂತೆ ತುಮಕೂರು ನಗರದ 2 ಕಿ.ಮೀ. ವ್ಯಾಪ್ತಿಯೊಳಗೆ 5 ಎಕರೆ ಜಮೀನನ್ನು ಗುರುತಿಸಿ ನೋಂದಾಯಿತ ಪತ್ರಕರ್ತರಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಪತ್ರಕರ್ತರಿಗೆ ಆರೋಗ್ಯ ಸೇವೆ ಒದಗಿಸಲಾಗುವುದು ಎಂದ ಅವರು, ತುಮಕೂರು ಜಿಲ್ಲೆಯ ಪತ್ರಕರ್ತರು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದು ಇಂದು ನನಗೆ ಸಂತಸ ನೀಡಿದೆ ಎಂದು ತಿಳಿಸಿದರು.

ಸರ್ಕಾರದ ಸೌಲತ್ತುಗಳು ಏನೇ ಇದ್ದರೂ ಪತ್ರಕರ್ತರಿಗೆ ಒದಗಿಸಲಾಗುವುದು. ಪತ್ರಕರ್ತರ ಕಲ್ಯಾಣ ನಿಧಿಗೆ 500 ರೂ.ಕೋಟಿ ನೀಡುವ ಸಂಬಂಧ ಸದ್ಯದಲ್ಲೇ ಘೋಷಣೆ ಹೊರಡಿಸಲಾಗುವುದು ಎಂದು ಈ ಸಂದರ್ಭ ಸಚಿವರು ತಿಳಿಸಿದರು.

ಕೆಯುಡಬ್ಲೂಜೆ ತುಮಕೂರು ಜಿಲ್ಲಾಧ್ಯಕ್ಷರಾದ ಚಿ.ನಿ.ಪುರುಷೋತ್ತಮ್ ಅವರು ಮಾತನಾಡಿ, ಗ್ರಾಮೀಣ ಪತ್ರಕರ್ತರು ವಾಸ್ತವವಾಗಿ ಸಂಕಷ್ಟದಲ್ಲಿದ್ದಾರೆ. ಅವರ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ಗ್ರಾಮೀಣ ಪತ್ರಕರ್ತರ ಏಳಿಗೆಗಾಗಿ ಸರ್ಕಾರದಿಂದ ಕಾರ್ಯಕ್ರಮಗಳು ಹೆಚ್ಚೆಚ್ಚು ಜಾರಿಯಾಗಬೇಕು.

ಕೆಯುಡಬ್ಲೂಜೆ ಸದಸ್ಯತ್ವ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಂತೆ ಅವರು ಈ ಸಂದರ್ಭ ಸಚಿವರಲ್ಲಿ ಮನವಿ ಮಾಡಿದರು.

ಕೆಯುಡಬ್ಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜೊಳ್ಳು ಪತ್ರಕರ್ತರು ಹೆಚ್ಚಿದ್ದು, ಇದರಿಂದ ನೈಜ ಪತ್ರಕರ್ತರಿಗೆ ಕಳಂಕ ಮೆತ್ತಿಕೊಳ್ಳುತ್ತಿದೆ. ಇದು ನೋವಿನ ಸಂಗತಿಯಾಗಿದ್ದು, ಬ್ಲಾಕ್ ಮೇಲ್ ಮಾಡುವುದಕ್ಕಾಗಿಯೇ ಪತ್ರಿಕೋದ್ಯಮದ ಸೋಗು ಹಾಕುವಂತಹ ಜೊಳ್ಳು ಪತ್ರಕರ್ತರನ್ನು ಪತ್ರಿಕಾ ವೃತ್ತಿಯಿಂದ ಹೊರಗಿಡುವ ಕೆಲಸ ಪ್ರಥಮ ಆದ್ಯತೆ ಮೇರೆಗೆ ಆಗಬೇಕಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿ.ಪಂ. ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್‌ವಾಡ್, ವಾರ್ತಾಧಿಕಾರಿ ಎಂ.ಆರ್. ಮಮತ, ಸಿದ್ಧಗಂಗಾ ವೈದ್ಯಕೀಯ ಸಂಶೋದನಾ ಕೇಂದ್ರ ಡಾ. ಪರಮೇಶ್, ಉಪಾಧ್ಯಕ್ಷರಾದ ಚಿಕ್ಕೀರಪ್ಪ, ಪ್ರಸನ್ನಮೂರ್ತಿ, ತಿಪಟೂರು ಕೃಷ್ಣ ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ