Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಜಿಎಸ್‌ಟಿ ಸೋರಿಕೆ ತಡೆಯಲು ಶಾಸಕರ ಒತ್ತಾಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.14: ಜಿಎಸ್‌ಟಿ ಸೋರಿಕೆ ತಡೆಯಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡು ರಾಜ್ಯಕ್ಕೆ ಹೆಚ್ಚಿನ ಆದಾಯ ಬರುವ ನಿಟ್ಟಿನಲ್ಲಿ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಧಾನಸಭೆಯಲ್ಲಿ ಪಕ್ಷಭೇದ ಮರೆತು ಶಾಸಕರುಗಳು ಸರ್ಕಾರವನ್ನು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು, 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾವಲೋಚನೆಗೆ ಮಂಡಿಸಿದ ಬಳಿಕ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ವಿಧೇಯಕ ಪ್ರಸ್ತಾಪಿಸಿ ಸಚಿವ ಎಚ್.ಕೆ. ಪಾಟೀಲ್, ದೇಶದಲ್ಲಿ 2017ರಿಂದ ಏಕರೂಪ ತೆರಿಗೆ ವ್ಯವಸ್ಥೆ ಜಿ.ಎಸ್‌.ಟಿ. ಜಾರಿಯಲ್ಲಿದೆ. ಇದನ್ನು ಸುಗಮ ತೆರಿಗೆ ಪಾವತಿ ಮತ್ತು ವರ್ತಕ ಸ್ನೇಹಿ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕಕ್ಕೆ ಕೆಲವು ತಿದ್ದುಪಡಿಗಳನ್ನು ತರಲಾಗುತ್ತಿದೆ ಎಂದು ಹೇಳಿದರು.

ಈ ವೇಳೆ ಮಾತನಾಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರ ಜಿಎಸ್‌ಟಿ ಸೋರಿಕೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ತೆರಿಗೆ ರಿಟರ್ನ್ಸ್ ಸಲ್ಲಿಸಲು‌ ಮೂರು ವರ್ಷದ ಅವಧಿ ಕಲ್ಪಿಸುವುದು ದುರುಪಯೋಗಕ್ಕೆ ಕಾರಣವಾಗಲಿದೆ ಎಂದು ಹೇಳಿದರು.

ಸರಕು ಮತ್ತು ಸೇವೆ ಇಡಿ ರಾಷ್ಟ್ರದಲ್ಲಿ ಏಕರೂಪ ತೆರಿಗೆ ಇರಬೇಕೆಂದು 2017 ರಲ್ಲಿ ಸಂವಿಧಾ‌ನ ತಿದ್ದುಪಡಿ ಮಾಡಲಾಯಿತು. ಕೆಲವು ರಾಜ್ಯಗಳು ಉತ್ಪಾದನಾ ರಾಜ್ಯಗಳಾಗಿವೆ. ಕೆಲವು ರಾಜ್ಯಗಳು ಬಳಕೆ ರಾಜ್ಯಗಳಾಗಿವೆ.

ಹಲವಾರು ರಾಜ್ಯಗಳ ಸಲಹೆ ಪಡೆದು ಜಿಎಸ್‌ಟಿಯನ್ನು ಬದಲಾವಣೆ ಮಾಡುತ್ತ ಬಂದಿದ್ದೇವೆ. ಜಿಎಸ್‌ಟಿ ರೆಜಿಸ್ಟ್ರೇಷನ್ ಮಾಡುವುದೇ ಬಹಳ ಕಷ್ಟವಾಗುತ್ತಿತ್ತು ಅದನ್ನು ಸರಳಿಕರಣ ಮಾಡಲು ತಿದ್ದುಪಡಿ ತಂದಿರುವುದು ಸ್ವಾಗತಾರ್ಹ ಎಂದರು.

ಕೋವಿಡ್‌ನಂತಹ ಸಂದರ್ಭದಲ್ಲಿ ಸಹ ನಮ್ಮ ಅಧಿಕಾರಿಗಳು ದಕ್ಷತೆಯಿಂದ ಕೆಲ ಮಾಡಿದ್ದಾರೆ. ಇಡೀ ದೇಶಕ್ಕೆ ಹೋಲಿಸಿದರೆ ನಮ್ಮ ಅಧಿಕಾರಿಗಳು ಹೆಚ್ಚಿನ ಜಿಎಸ್‌ಟಿ ಸಂಗ್ರಹ ಮಾಡಿದ್ದಾರೆ. ಅಧಿಕಾರಿಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅಧಿಕಾರ ನೀಡಬೇಕು, ಅವರ ವರ್ಗಾವಣೆಯಂತಹ ವಿಚಾರದಲ್ಲಿ ಸರ್ಕಾರ ತಲೆ ಹಾಕಬಾರದು ಎಂದು ಹೇಳಿದರು.

ಶಾಸಕ ಶಿವಲಿಂಗೇಗೌಡ ಮಾತನಾಡಿ, ಬಹುತೇಕ ಸಣ್ಣ ಸಣ್ಣ ವ್ಯಾಪಾರಿಗಳು ಜಿಎಸ್‌ಟಿ ಮಾಡಿಸದೆ ವ್ಯಾಪಾರ ಮಾಡುತ್ತಾರೆ. ಅಲ್ಲದೆ, ಕೆಲವರು ಜಿಎಸ್‌ಟಿ ಇದ್ದರೂ ಸಹ ಕಡಿಮೆ ಮೊತ್ತಕ್ಕೆ ಬಿಲ್ಲಿಂಗ್ ಮಾಡಿ, ಹೆಚ್ಚಿನ ಉತ್ಪನ್ನಗಳನ್ನು ನಗದು ರೂಪದಲ್ಲಿ ಪಡೆಯುತ್ತಾರೆ. ಚಿಕ್ಕಪೇಟೆ, ಬಿವಿಕೆ ಅಯ್ಯಂಗಾರ್ ರಸ್ತೆಗಳಂತಹ ವ್ಯಾಪಾರ ಕೇಂದ್ರಗಳಲ್ಲಿ ತೆರಿಗೆ ಅಧಿಕಾರಿಗಳನ್ನು ನಿಯೋಜಿಸಿ ಕಟ್ಟುನಿಟ್ಟಾಗಿ ಪರಿಶೀಲನೆ ಮಾಡಿದರೆ ರಾಜ್ಯದ ಖಜಾನೆಗೆ ಹೆಚ್ಚಿನ ಆದಾಯ ಬರುತ್ತದೆ ಎಂದು ಸಲಹೆ ನೀಡಿದರು.

ಎಚ್.ಡಿ. ರೇವಣ್ಣ ಮಾತನಾಡಿ, ಜಲ್ಲಿ ಕ್ರಷರ್ ಮಾಲೀಕರು ಹೆಚ್ಚಿನ ತೆರಿಗೆ ವಂಚನೆ ಮಾಡುತ್ತಿದ್ದಾರೆ. ಎಲ್ಲಿ ಕ್ರಷರ್‌ಗಳು ನಡೆಯುತ್ತಿವೆಯೋ ಅಲ್ಲಿ ಬರುತ್ತಿರುವ ರಾಯಲ್ಟಿಗೂ ಮತ್ತು ವಿದ್ಯುತ್ ಬಿಲ್‌ಗೂ ತಾಳೆ ಮಾಡಿ ನೋಡಿದರೆ ಗೊತ್ತಾಗುತ್ತದೆ. ಇಂತಹ ಕ್ರಷರ್‌ಗಳ ವಿರುದ್ಧ ಕ್ರಮ ಕೈಗೊಂಡು ರಾಜ್ಯಕ್ಕೆ ಬರಬೇಕಾದ ಆದಾಯವನ್ನು ಪಡೆಯಬೇಕು ಎಂದು ಹೇಳಿದರು.

ಬಳಿಕ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ಜಿಎಸ್‌ಟಿ ಆರಂಭವಾಗಿದ್ದು, 2017ರಲ್ಲಿ. ಆಗ ವಾಟ್‌ ವ್ಯವಸ್ಥೆಯಲ್ಲಿ ಇದ್ದ ತೆರಿಗೆ ಪಾವತಿದಾರರು 5.8 ಲಕ್ಷ ಇದ್ದರೆ, ಜಿಎಸ್‌ಟಿ ಬಂದ ಬಳಿಕ 10 ಲಕ್ಷಕ್ಕೆ ಏರಿಕೆಯಾಗಿದೆ. ಆಗ 44,816 ಕೋಟಿ ತೆರಿಗೆ ಸಂಗ್ರಹವಾಗಿದ್ದರೆ, ಈಗದು 81,848 ಕೋಟಿ ರೂ. ಗೆ ಏರಿಕೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚರ್ಚೆ ಬಳಿಕ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕಕ್ಕೆ ಧ್ವನಿ ಮತದ ಮೂಲಕ ಅಂಗೀಕಾರ ನೀಡಲಾಯಿತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ