Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಆದಿ ಬಣಜಿಗರ ಸಮುದಾಯ ಅಭಿವೃದ್ಧಿಯತ್ತ ಸಾಗಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಹುಬ್ಬಳ್ಳಿ,ಏ.6: ಆದಿ ಬಣಜಿಗರ ಸಮುದಾಯ ಕಾಯಕ ನಿಷ್ಠ ಸಮುದಾಯ. ಈ ಸಮುದಾಯದ ಮಕ್ಕಳು ಶಿಕ್ಷಣ ಪಡೆದು ಬುದ್ದಿವತಂರಾಗಬೇಕು. ಆದಿ ಬಣಜಿಗರ ಸಮುದಾಯವೂ ಅಭಿವೃದ್ಧಿಯತ್ತ ಸಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಹುಬ್ಬಳ್ಳಿಯಲ್ಲಿ ಆದಿ ಬಣಜಿಗ ಸಮುದಾಯವನ್ನು ಪ್ರವರ್ಗ 2ಡಿ ಗೆ ಸೇರಿಸಿರುವುದಕ್ಕೆ ಸಮುದಾಯದ ವತಿಯಿಂದ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದರು.

ಹುಬ್ಬಳ್ಳಿಗೆ ಬಂದಾಗ ಮಗಳು ತವರು ಮನೆಗೆ ಬಂದ ಹಾಗೇ ಆಗುತ್ತದೆ. ನಮ್ಮ ತಂದೆಯವರು ಈ ಊರಿನ ಜೊತೆಗಿನ ಸಂಬಂಧ, ಆತ್ಮೀಯತೆ ಎಲ್ಲವೂ ಚೆನ್ನಾಗಿತ್ತು ಅದೆಲ್ಲವೂ ನನಗೆ ನೆನಪಾಗುತ್ತಿದೆ. ನಾನು ಇಂದು ಬಹಳ ಭಾವನಾತ್ಮಕವಾಗಿದ್ದೇನೆ. ಹಿಂದೆ ಸಾಮಾಜಿಕ ನ್ಯಾಯ ಅಂತ ಭಾಷಣ ಮಾಡುತ್ತ ಹಲವಾರು ಸಮುದಾಯಗಳನ್ನು ಮುಖ್ಯ ವಾಹಿನಿಯಿಂದ ದೂರ ಇಡಲಾಗಿತ್ತು. ಜನರನ್ನು ಒಬ್ಬ ನಾಗರಿಕರಾಗಿ ನೋಡದೆ, ಮತಬ್ಯಾಂಕ್ ಆಗಿ ನೋಡುತ್ತಿದ್ದರು. ಚುನಾವಣೆ ನಂತರ 5 ವರ್ಷ ದೂರು ಇಡುವ ಪ್ರವೃತ್ತಿ ಇತ್ತು. ಇಷ್ಟು ವರ್ಷ ಮೀಸಲಾತಿ ಸಿಗದೆ ಇರೋದು ದುರಂತ ಎಂದರು.

ಮೀಸಲಾತಿ ಹಂಚಿಕೆಗೆ ಕಾನೂನು ವಿಧಿ ವಿಧಾನಗಳಿದ್ದವು. 2016 ಪ್ರಧಾನಮಂತ್ರಿ ಸರ್ವ ಸಮ್ಮತಿ ಅಧಿಕಾರವನ್ನ ನೀಡಿದರು. ಕಳೆದ 15-20 ವರ್ಷದಿಂದ ಅರ್ಜಿಗಳನ್ನು ನೀಡುತ್ತ ಬಂದಿದ್ದರು. ಆದರೆ ಯಾವುದೇ ಕ್ರಮ ಆಗಿರಲಿಲ್ಲ. ನಾನು ಬಂದ ಮೇಲೆ ಆಯೋಗಗಳನ್ನು ಸ್ಟಡಿ ಮಾಡಿ ರಿಪೋರ್ಟ್ ತರಿಸಲಾಗಿದೆ. ಅದರ ಅನ್ವಯ ಈಗ ಮೀಸಲಾತಿ ಹಂಚಿಕೆ ಕ್ರಮ ಕೈಗೊಳ್ಳಲಾಗಿದೆ. ಪ್ರಮುಖ ನಿರ್ಣಯ ಸರ್ಕಾರದಲ್ಲಿ ಆಗಬೇಕಾದರೆ ಸಮಯ ಬೇಕು ಎಂದರು.

ಈ ಸಮುದಾಯದ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಮುಂದುವರೆಸಿ. ಅವರು ನಮ್ಮಂತೆ ಬುದ್ಧಿವಂತರಿದ್ದಾರೆ. ನಮಗಿಂತ ಹೆಚ್ಚು ಹೆಣ್ಣು ಮಕ್ಕಳು ಪ್ರಾಮಾಣಿಕರಿದ್ದಾರೆ. ಸಂಸ್ಥೆಗಳು ಶಾಶ್ವತವಾಗಿರುತ್ತವೆ, ವ್ಯಕ್ತಿಗಳು ಇರಲ್ಲ. ಶಿಕ್ಷಣ ಸಂಸ್ಥೆ ಸೇರಿ ಬ್ಯಾಂಕಿಂಗ್ ಸಂಸ್ಥೆ ಕಟ್ಟುವ ಕೆಲಸ ಬಹಳ ದಿನಗಳ ಹಿಂದೆಯೇ ಆಗಬೇಕಿತ್ತು. ಆದರೆ ತಡವಾಗಿದೆ, ನನ್ನ ಕಾಲದಲ್ಲಿ ಆಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಶಶಿಕಲಾ ಜೋಲ್ಲೆ, ಶಾಸಕರಾದ ಅರವಿಂದ ಬೆಲ್ಲದ, ಮಾಜಿ ಶಾಸಕಿ ಸೀಮಾ ಮಸೂತಿ ಹಾಗೂ ಮತ್ತಿತರರು ಹಾಜರಿದ್ದರು.

 

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ