Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಚತ್ರಿಯರು ಉತ್ತಮ ಶಿಕ್ಷಣ ಸಂಸ್ಥೆಗಳನ್ನು ನಿರ್ಮಾಣ ಮಾಡಲಿ: ಜಿ.ಎಸ್.ಬಸವರಾಜು

ಸುದ್ದಿಮೂಲ ವಾರ್ತೆ

ತುಮಕೂರು, ಮಾ.28: ಅಗ್ನಿವಂಶ ಕ್ಷತ್ರಿಯ ಜನಾಂಗದವರು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ಕಟ್ಟುವಂತಾಗಲಿ. ಯಾವುದೇ ಸಮುದಾಯದ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದಲ್ಲಿ ಆ ಕುಟುಂಬ ಸಮಾಜದಲ್ಲಿ ಹೆಚ್ಚಿನ ಗೌರವ ಪಡೆಯುವುದರಲ್ಲಿ ಅನುಮಾನವಿಲ್ಲ ಎಂದು ಸಂಸದ ಜಿ.ಎಸ್.ಬಸವರಾಜು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅಗ್ನಿವಂಶ ಕ್ಷತ್ರಿಯ ತಿಗಳ ಜನಾಂಗದ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಅಮಾನಿಕೆರೆ ಗಾಜಿನಮನೆ ಆವರಣದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಶರೀರವನ್ನು ಧಣಿಸಿ ದುಡಿದು ಪ್ರಾಮಾಣಿಕ ಜೀವನ ನಡೆಸುವ ಸಮುದಾಯ ತಿಗಳ ಸಮುದಾಯವಾಗಿದೆ. ಈ ವರ್ಗದ ಜನರು ಹೆಚ್ಚಾಗಿ ರೈತಾಪಿ ಕುಟುಂಬದವರಾಗಿದ್ದಾರೆ. ಸಮುದಾಯದ ಜನರು ರಾಜಕೀಯವಾಗಿ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರಾಗಿ ಆಯ್ಕೆಯಾಗಿ ಸೇವೆ ಮಾಡಿದ್ದಿರಾ. ಮುಂದಿನ ದಿನಗಳಲ್ಲಿ ವಿಧಾನಸಭೆ, ಲೋಕಸಭೆಗಳಿಗೆ ಆಯ್ಕೆಯಾಗುವುದರ ಮೂಲಕ ಸಮಾಜದ ಪರವಾಗಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದರು. ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ನಾನು ಈ ದೇಶದ ಪ್ರಜೆ ಎಂಬ ಭಾವನೆ ಬರಬೇಕು ಹಾಗೂ ನಾವೆಲ್ಲಾ ಹಿಂದು ನಾವೆಲ್ಲಾ ಒಂದು ಎಂಬ ಭಾವನೆ ಮೂಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಬಿ.ಜ್ಯೋತಿಗಣೇಶ್ ಅವರು, ರಾಜ್ಯ ಸರ್ಕಾರವು ಈ ಸಮುದಾಯದ ಅಭಿವೃದ್ಧಿಗಾಗಿ ತಿಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. ಅಗ್ನಿ ವಂಶ ಕ್ಷತ್ರಿಯ ಜನಾಂಗದ ಕುಲದೇವರಾದ ಶ್ರೀ ಶ್ರೀ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವಂತೆ ನಮ್ಮ ಸರ್ಕಾರ ಆದೇಶ ಮಾಡಿದೆ ಎಂದರು. ಸಮುದಾಯದ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಗಾಗಲೆ ಈಡೇರಿಸಿದೆ. ಅಭಿವೃದ್ಧಿ ನಿಗಮದಿಂದ ಸಮುದಾಯದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಮಾಜಿ ಶಾಸಕ ಸುರೇಶ್‌ಗೌಡ, ಉಪ ಮಹಾಪೌರರಾದ ಟಿ.ಕೆ.ನರಸಿಂಹಮೂರ್ತಿ, ಅಗ್ನಿ ವಂಶ ಸಮಾಜದ ಅಧ್ಯಕ್ಷ ಸುಬ್ಬಣ್ಣ, ಉದಯ್‌ಸಿಂಗ್, ಪೇಟೆ ಯಜಮಾನರಾದ ಶಿವಕುಮಾರ್, ಹನುಮಂತರಾಜು, ನಿವೃತ್ತ ಪ್ರಾಂಶುಪಾಲ ಎಂ.ಅಂಜನೇಯ, ಗೋವಿಂದರಾಜು, ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಬಸವರಾಜು, ರವೀಶ್, ಲಕ್ಷ್ಮೀಶ್ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ