Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಮೇಶ್ವರ್ ಸೋಲಿಸಿಲ್ಲ ಎಂದು ಸಿದ್ದರಾಮಯ್ಯ ಪ್ರಮಾಣ ಮಾಡಲಿ



ಕಲಬುರಗಿ,ಫೆ.19:  ಅಹಿಂದ ವರ್ಗಕ್ಕೆ ಚುನಾವಣೆಯಲ್ಲಿ ಟಿಕೆಟ್ ನೀಡಿ ಸೋಲಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಾರೆ. ಮಾಜಿ ಸಚಿವ ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಸೋಲಿಸಿಲ್ಲಾ ಅಂತ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡಿ ಹೇಳಲಿ ಎಂದು ಮಾಜಿ ಸಚಿವ ಈಶ್ವರಪ್ಪ ಸವಾಲು ಹಾಕಿದರು.


ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ದೇವಸ್ಥಾನ ಇದ್ದಂತೆ, ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್‌ನವರು ಹೂವು ಇಟ್ಟುಕೊಂಡು ಬಂದು ಸದನ ಗೌರವ ಹಾಳು ಮಾಡಿದ್ದಾರೆ. ಮುಂದಿನ ದಿನದಲ್ಲಿ ಏನೇನು ಇಟ್ಟುಕೊಂಡು ಬರುತ್ತಾರೊ. ಸಿದ್ದರಾಮಯ್ಯ ಸೇರಿ ಇತರ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಟುಕೊಂಡು ಪ್ರಚಾರ ಪಡೆಯಲು ಬಂದಿದ್ದರು. ಇದರಿಂದ ರಾಜ್ಯಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಅವಮಾನವಾಗಿದ್ದು, ಕೂಡಲೇ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ ಅವರು, ಸಾರ್ವಜನಿಕ ಸಭೆಯಲ್ಲಿ ಹೂ ಒಂದನ್ನೆ ಯಾಕೆ, ಬೇಕಾದನ್ನು ಇಟ್ಟುಕೊಳ್ಳಲಿ ಎಂದು ಛೇಡಿಸಿದರು.


ಇಲ್ಲಿವರೆಗೆ ಕೇವಲ ಭರವಸೆ ನೀಡಿದ್ದರಿಂದ ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ನಾವು ಭರವಸೆ ಕೊಟ್ಟು ಈಡೇರಿಸಿಲ್ಲಾ ಅಂದ್ರೆ ಅದನ್ನು ಜನ ತೀರ್ಮಾನ ಮಾಡುತ್ತಾರೆ. ಈ ಹಿಂದೆ ರಾಜ್ಯಕ್ಕೆ ಸೋನಿಯಾಗಾಂದಿ, ರಾಹುಲ್ ಗಾಂಧಿ ಅವರನ್ನು ಕೈ ನಾಯಕರು ಕರೆಸುತ್ತಿದ್ದರು. ಅಂದರೆ ಇವರೇನು ಕೆಲಸ ಮಾಡಿಲ್ಲ ಎಂದು ಅರ್ಥವೆ? ಕಾಂಗ್ರೆಸ್‌ನ್ ರಾಷ್ಟ್ರೀಯ ನಾಯಕರ ಮುಖ ನೋಡಿ ಜನ ಮತ ಹಾಕಲ್ಲಾ. ಆದರೆ, ನಮ್ಮ ರಾಷ್ಟ್ರೀಯ ನಾಯಕರು ಮುಖ ನೋಡಿದ್ರೆ ಮತ ಬರುತ್ತವೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ