Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುಸ್ತಕ ಉದ್ಯಮವಾಗದೇ ಸಂಸ್ಕೃತಿಯಾಗಿ ಬೆಳೆಯಲಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.17 : ಪುಸ್ತಕ ಎನ್ನುವುದು ಸಂಸ್ಕೃತಿಯ ಭಾಗವೇ ಹೊರತು ಮಾರಾಟದ ಸರಕಲ್ಲ ಎಂದು ಹಿರಿಯ ಸಾಹಿತಿ, ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾದ ಡಾ. ಕರೀಗೌಡ ಬೀಚನಹಳ್ಳಿ ಅಭಿಪ್ರಾಯಪಟ್ಟರು.

ಕರ್ನಾಟಕ ಕನ್ನಡ ಬರಹಗಾರರ ಹಾಗೂ ಪ್ರಕಾಶಕರ ಸಂಘದಿಂದ ಸಪ್ನ ಬುಕ್ ಹೌಸ್‌ನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಪುಸ್ತಕವನ್ನು ಕೇವಲ ಉದ್ಯಮವನ್ನಾಗಿ ಮಾತ್ರ ನೋಡದೆ ಅದನ್ನು ಸಂಸ್ಕೃತಿಯ ಭಾಗವಾಗಿ ನೋಡುವಂತೆ ಮಾಡಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ. ಅದಕ್ಕಾಗಿ ಪುಸ್ತಕದ ಗುಣಮಟ್ಟ, ಉತ್ಪಾದನೆಯ ಮೌಲ್ಯ ಹೆಚ್ಚುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ಕನ್ನಡ ಪ್ರಕಾಶಕರ ಹಾಗೂ ಬರಹಗಾರರ ಸಂಘದ ಬೇಡಿಕೆಗಳನ್ನು ಜಾರಿ ಮಾಡುವಲ್ಲಿ ಎಲ್ಲಾ ರೀತಿಯ ಪ್ರಯತ್ನವನ್ನೂ ಮಾಡಲಾಗುವುದು ಎಂದರು.

ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟ್ಟಸ್ವಾಮಯ್ಯ ಮಾತನಾಡಿ, ಗ್ರಂಥಾಲಯಗಳಲ್ಲಿ ಹೊಸ ಪುಸ್ತಕಗಳನ್ನು ಸೇರ್ಪಡೆ ಮಾಡುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಪುಸ್ತಕ ಖರೀದಿಯಲ್ಲಿ ಆಗುತ್ತಿರುವ ವಿಳಂಬ. ಇದರೊಂದಿಗೆ ಪುಸ್ತಕ ಪ್ರಕಾಶನ ರಂಗ ಎದುರಿಸುತ್ತಿರುವ ಹಲವು ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸಬೇಕಾಗಿದೆ. ಪುಟಕ್ಕೆ 40 ಪೈಸೆ ನಿಗದಿಮಾಡಬೇಕೆನ್ನುವ ಮನವಿ ನನೆಗುದಿಗೆ ಬಿದ್ದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಂಘದ ಕಾರ್ಯದರ್ಶಿ ಆರ್. ದೊಡ್ಡೆಗೌಡ ಅವರು ಮಾತನಾಡಿ, ಎರಡು ಮಹತ್ವದ ವಿಶ್ವವಿದ್ಯಾಲಯಗಳಲ್ಲಿ ಪ್ರಸಾರಾಂಗದ ನಿರ್ದೇಶಕ ಜವಾಬ್ದಾರಿಯನ್ನು ನಿರ್ವಹಿಸಿರುವ ಕರೀಗೌಡ ಬೀಚನಹಳ್ಳಿ ಅವರಿಗೆ ಪುಸ್ತಕೋದ್ಯಮದ ಪ್ರತೀ ಸಮಸ್ಯೆಯ ಅರಿವಿದೆ. ಕನ್ನಡ ಪುಸ್ತಕ ಉದ್ಯಮಕ್ಕೆ ಅವರು ಒಳ್ಳೆಯ ಭರವಸೆ ಎನ್ನುವ ಆಶಯವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿದ್ವಾಂಸರಾದ ಡಾ. ಮಲ್ಲೇಪುರಂ ಜಿ. ವೆಂಕಟೇಶ್, ಕಲಬುರಗಿ ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಎಚ್. ಟಿ. ಪೋತೆ, ಕನ್ನಡ ಚಿಂತಕ ರಾ. ನಂ. ಚಂದ್ರಶೇಖರ್, ಡಾ. ಚಂದ್ರಪ್ಪ, ಶ್ರೀಶೈಲ ನಾಗರಾಳ, ಪತ್ರಕರ್ತ ಜಿ. ಎನ್. ಮೋಹನ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ