Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿಯಲ್ಲಿ ಲೋಪ; ಹೊಸ ಸಮೀಕ್ಷೆಯಾಗಲಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.25: ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ಹೊಸದಾಗಿ ವೈಜ್ಞಾನಿಕವಾಗಿ ಸಮಿಕ್ಷೆಯಾಗಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಜಾತಿ ಜನಗಣತಿ ವರದಿ ಸರಿ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಜಾತಿ ಗಣತಿ ಲೋಪದಿಂದ ಕೂಡಿದೆ ಎಂದು ನಾವು ವಿರೋಧ ಮಾಡುತ್ತಿದ್ದೇವೆ. ವರದಿಯಲ್ಲಿ ಏನಿದೆ ಅಂತ ಅದೆಲ್ಲ ಲೀಕ್ ಆಗಿದೆ. ಇದರಲ್ಲಿ ಲಿಂಗಾಯತ ವೀರಶೈವ ಎಂದು ಬರೆದುಕೊಂಡೇ ಇಲ್ಲ. ಅನೇಕ ಲೋಪದೋಷಗಳಿರುವ ಈ ಸಮಿಕ್ಷಾ ವರದಿಗೆ ಎಲ್ಲರ ವಿರೋಧವಿದೆ. ನಾವೂ ಸಹ ಸಿಎಂ ಭೇಟಿ ಮಾಡುತ್ತೇವೆ. ಒಕ್ಕಲಿಗರ ಸಮುದಾಯದ ರೀತಿಯೇ ಸಹಿ ಮಾಡಿ ವಿರೋಧ ವ್ಯಕ್ತಪಡಿಸುತ್ತೇವೆ. ಬಿಜೆಪಿ, ಜೆಡಿಎಸ್‌ನವರೂ ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಕುರಿತು ಈಗಾಗಲೇ ಮೌಖಿಕವಾಗಿ ಸಿಎಂ ಬಳಿ ಚರ್ಚೆ ನಡೆಸಿದ್ದೇವೆ, ನೋಡೋಣ ಎಂದು ಹೇಳಿದರು.

ಜಾತಿ ಗಣತಿ ಎಂದರೆ ಮನೆಮನೆಗೆ ಹೋಗಿ ಸಮೀಕ್ಷೆ ಮಾಡಬೇಕು. ಎಲ್ಲೋ ಕುಳಿತು ಸಮೀಕ್ಷೆ ಮಾಡುವುದಲ್ಲ. ಪ್ರತ್ಯೇಕ ಲಿಂಗಾಯತ ಧರ್ಮ ಅಂತ ಹೋದವರೆಲ್ಲ ಸೋತರು, ಬರಿ ಲಿಂಗಾಯತ ಅಂತ ಹೋದವರೆಲ್ಲ ಮಣ್ಣು ಕಚ್ಚಿದರು ಎಂದರು.

ಮೂಲ ವರದಿ ಆಯೋಗಕ್ಕೆ ಸಲ್ಲಿಸಿದ್ದೇನೆ ಎಂದು ಕಾಂತರಾಜು ಅವರು ಹೇಳುತ್ತಿದ್ದಾರೆ. ಆದರೆ, ವರದಿ ನಾಪತ್ತೆಯಾಗಿದೆ ಎಂಬ ಮಾತುಗಳು ಕೇಳಬರುತ್ತಿವೆ. ಮತ್ತೊಂದೆಡೆ ಆಯೋಗದ ಅಧ್ಯಕ್ಷರ ಅಧಿಕಾರಾವಧಿ ವಿಸ್ತರಣೆ ಮಾಡಿ ಎಲ್ಲವನ್ನೂ ಗೊಂದಲ ಉಂಟು ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಗೆ ಜಾತಿ ಜನಗಣತಿ ಹಿನ್ನೆಡೆಯಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಆದಂತೆಯೇ ಈ ಬಾರಿಯೂ ಸಹ ಶೇ.100ರಷ್ಟು ತೊಂದರೆಯಾಗುವುದು ಖಚಿತ ಎಂದು ಹೇಳಿದರು.

ರಾಯರೆಡ್ಡಿ ಹೇಳಿಕೆಗೆ ಟಾಂಗ್:

ಜಾತಿ‌ ವಿಚಾರ ಮಾತನಾಡಿದ್ದು ತಪ್ಪು ಎಂದಿದ್ದ ಬಸವರಾಜ ರಾಯರೆಡ್ಡಿ ಹೇಳಿಕೆ ಕುರಿತು ಉತ್ತರಿಸಿದ ಶಾಮನೂರು ಶಿವಶಂಕರಪ್ಪ, 'ಅವನು ಹಿಂದೆಯೂ ಹೀಗೆ ಏನೇನೊ ಮಾತನಾಡಿದ್ದ. ಕ್ಯಾಬಿನೆಟ್ ಸ್ಥಾನ ಸಿಗದಿರುವುದಕ್ಕೆ ಏನೇನೊ ಮಾತನಾಡುತ್ತಿದ್ದಾನೆ. ಬರಿ ಲಿಂಗಾಯತ ಅಂತ ಹೋದವರೆಲ್ಲ ಮಣ್ಣು ಕಚ್ಚಿದ್ದಾರೆ,' ಎಂದು ತರಾಟೆಗೆ ತೆಗೆದುಕೊಂಡರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ