Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಚಿಂತನೆಗಳು ಮಕ್ಕಳಿಗೆ ಪ್ರೇರಣೆಯಾಗಲಿ: ಸಂಸದ ಬಚ್ಚೇಗೌಡ

ಸುದ್ದಿಮೂಲ ವಾರ್ತೆ


ಹೊಸಕೋಟೆ, ಜು.16: ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು. ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು.


ಹೊಸಕೋಟೆ ತಾಲೂಕು ಗಿಡ್ಡಪ್ಪನಹಳ್ಳಿಯಲ್ಲಿ ನಿರ್ಮಿಸಿರುವ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯ ವಸತಿ ಗೃಹಗಳ ಕಟ್ಟಡ ಉದ್ಘಾಟನೆ ಮಾಡಿ ಅವರು ಮಾತನಾಡಿದರು.


ವಸತಿ ಶಾಲೆಗಳಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಹೆಸರಿಟ್ಟಿರುವುದು ಎಲ್ಲರೂ ಹೆಮ್ಮೆ ಪಡುವ ವಿಷಯ. ಅಂತಹ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವುದರಿಂದ ಕಲಾಂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಂಡು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ಸ್ಮರಿಸುತ್ತಾ, ಮಕ್ಕಳಿಗೆ ಉತ್ತಮ


ಗುಣಮಟ್ಟದ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಸರ್ಕಾರ ನಿರ್ಮಿಸಿದೆ. ಒಂದು ಶಾಲೆಯಲ್ಲಿ ಆಹಾರ, ಬಟ್ಟೆ, ವಸತಿ ಮೂಲಭೂತ ಸೌಕರ್ಯಗಳನ್ನು ಉಚಿತವಾಗಿ ಕಲ್ಪಿಸುವುದು ಅಂದರೆ ಅದು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಎಂದರು.


ಈ ಸೌಲಭ್ಯವನ್ನು ಸಂಪೂರ್ಣವಾಗಿ ಮಕ್ಕಳು ಬಳಸಿಕೊಂಡು ಒಳ್ಳೆಯ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಮಕ್ಕಳಿಗೆ ಸಲಹೆ ನೀಡಿದರು.


ಹಿರಿಯ ಮುಖಂಡ ಬಿ.ಎನ್ ಗೋಪಾಲಗೌಡ,ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ ಸತೀಶ್ ಗೌಡ, ಯುವ ಮುಖಂಡ ಬಿ.ಜಿ ನಾರಾಯಣಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಅಕ್ಬರ್ ಆಲಿ ಖಾನ್, ಕರ್ನಾಟಕ ಗೃಹಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಸಂಕುಳ್ಳಿ, ಸಹಾಯಕ ಕಾರ್ಯಪಾಲಕರಾದ ಭವ್ಯ, ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಚಂದ್ರಶೇಖರ್, ಅಲ್ಪಸಂಖ್ಯಾತ ಕಲ್ಯಾಣ


ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ ಇ, ಶಾಲೆಯ ಪ್ರಾಂಶುಪಾಲರಾದ ಶಶಿಕಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬಾಬು, ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು,


ಶಿಕ್ಷಕರು, ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ