Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಡುಪಿ ನಗ್ನ ವಿಡಿಯೋ ಪ್ರಕರಣ ಸಮಗ್ರ ತನಿಖೆಯಾಗಲಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.27: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣವನ್ನು ಖಂಡಿಸಿ ಮತ್ತು ಇದರ ಸಮಗ್ರ ತನಿಖೆಗೆ ಆಗ್ರಹಿಸಿ ನಗರದಲ್ಲಿ ಇಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಗೋವಿಂದ, ಬೆಂಗಳೂರು ದಕ್ಷಿಣ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮೀ ಆನಂದ್ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇಡೀ ಸಮಾಜ ತಲೆತಗ್ಗಿಸುವ ಅತ್ಯಂತ ಖೇದಕರ ಘಟನೆ ಇದಾಗಿದೆ. ಶೌಚಾಲಯದಲ್ಲಿ, ಬಾತ್‍ರೂಂನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಮಾಡಿ ಅದನ್ನು ತಮ್ಮ ತಮ್ಮ ನೆಟ್‍ವರ್ಕ್‍ಗಳಿಗೆ ಕಳುಹಿಸುವ ದೊಡ್ಡ ನಾಚಿಕೆಗೇಡಿನ ಸಂಗತಿ ಬಗ್ಗೆ ವಿಳಂಬವಾಗಿ ಎಫ್‍ಐಆರ್ ಮಾಡಿದ್ದು, ಇದು ಪ್ರಕರಣವನ್ನು ಮುಚ್ಚಿಹಾಕುವ ತಂತ್ರದಂತಿದೆ ಎಂದು ಆಕ್ಷೇಪ ಸೂಚಿಸಲಾಯಿತು.

ವಿಡಿಯೋಗ್ರಫಿ ಮಾಡಿದ 3 ವಿದ್ಯಾರ್ಥಿನಿಯರನ್ನು ಇನ್ನೂ ಬಂಧಿಸಿಲ್ಲ. ಸರಕಾರ ಅವರ ಮೇಲೆ ಎಫ್‍ಐಆರ್ ಮಾಡಲು ಆರಂಭದಲ್ಲಿ ಮೀನಾಮೇಷ ಎಣಿಸುತ್ತಿತ್ತು ಎಂದು ಟೀಕಿಸಿದರು. ಪ್ರಕರಣದ ಸಿಐಡಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಯಿತು.

ಹಣೆಗೆ ಕಪ್ಪು ಪಟ್ಟಿ ಧರಿಸಿ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ವಿದ್ಯಾರ್ಥಿನಿಯ ಖಾಸಗಿ ವಿಡಿಯೋ ಮಾಡಿದರೂ ಸರಕಾರದ ಮೌನ ಸರಿಯೇ ಎಂದು ಪ್ರಶ್ನಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ