Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಹಶೀಲ್ದಾರ್‌ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ಪತ್ರ

ಸುದ್ದಿಮೂಲ ವಾರ್ತೆ

ಮೈಸೂರು, ಜು.19 : ಮಾಹಿತಿ ಇಲ್ಲದ ಅಸಮರ್ಪಕ ಉತ್ತರ ನೀಡಿದ ತಹಶೀಲ್ದಾರ್‌ ಅವರನ್ನು ರೈತರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಎಚ್.ಡಿ.ಕೋಟೆ ಪಟ್ಟಣದ ಆಡಳಿತ ಸೌಧದಲ್ಲಿ ಬುಧವಾರ ನಡೆದ ರೈತ ಸಂಪರ್ಕ ಸಭೆಯಲ್ಲಿ ನಡೆಯಿತು.

ತಹಶೀಲ್ದಾರ್ ಸಣ್ಣರಾಮಪ್ಪ ಅವರ ಅಧ್ಯಕ್ಷತೆಯಲ್ಲಿ ರೈತ ಸಂಪರ್ಕ ಕುಂದು ಕೊರತೆ ಸಭೆ ನಡೆಯಿತು. ಕೆರೆ ಒತ್ತುವರಿ ತೆರವು ವಿಚಾರವಾಗಿ ರೈತ ಮುಖಂಡರು, ಅಧಿಕಾರಿಗಳ ನಡುವೆ ಪರಸ್ಪರ ವಾಗ್ದಾಳಿ ನಡೆಯಿತು.

ರೈತ ಮುಖಂಡರು ಮಾತನಾಡಿ, ತಾಲೂಕಿನಲ್ಲಿ ಎಷ್ಟು ಕೆರೆಗಳಿವೆ, ಎಷ್ಟು ಒತ್ತುವರಿಯಾಗಿವೆ, ಎಷ್ಟು ಕೆರೆಗಳ ಒತ್ತುವರಿ ತೆರವು ಮಾಡಿ ರಕ್ಷಣೆ ಮಾಡಿದ್ದೀರಿ ಎಂದು ತಹಶೀಲ್ದಾರ್ ಸಣ್ಣರಾಮಪ್ಪ ಅವರನ್ನು ಪ್ರಶ್ನಿಸಿದರು.

ರೈತರ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರ ನೀಡದ ತಹಶೀಲ್ದಾರ್‌, ನಮ್ಮಲ್ಲಿ 211 ಕೆರೆಗಳಿವೆ ಅದರಲ್ಲಿ 88 ಕೆರೆ ಒತ್ತುವರಿಯಾಗಿವೆ ಎಂದು ಗುರುತಿಸಿ, ಈಗಾಗಲೇ 77 ಕೆರೆ ಒತ್ತುವರಿ ತೆರವು ಕಾರ್ಯ ಮುಗಿದಿದೆ ಎನ್ನುತ್ತಿದ್ದಂತೆ ಕುಪಿತಗೊಂಡ ರೈತ ಮುಖಂಡರು, ಎಲ್ರೀ ತೆರವು ಮಾಡಿದ್ದೀರಿ, ನಾವೇ ನಾಲ್ಕು ನಾಲ್ಕು ಬಾರಿ ದೂರು ನೀಡಿದ್ದರೂ ನಮ್ಮ ದೂರಿಗೆ ಸ್ಪಂದನೆನೂ ಇಲ್ಲ, ಕೆರೆ ಒತ್ತುವರಿ ತೆರವು ಕಾರ್ಯವೂ ಇಲ್ಲ, ಯಾವ ಯಾವ ಕೆರೆ ತೆರವು ಮಾಡಿದ್ದೀರಾ ಸಭೆ ತಿಳಿಸಿ ಎಂದು ಪಟ್ಟು ಹಿಡಿದರು. ತಹಶೀಲ್ದಾರ್ ಅವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ತೀರ್ಮಾನಿಸಿದರು.

ಒಟ್ಟಾರೆ, ಇಂದಿನ ರೈತ ಸಂಪರ್ಕ ಕುಂದು ಕೊರತೆ ಸಭೆ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲದೆ ಕೆರೆ ಒತ್ತುವರಿ ತೆರವು ವಿಚಾರದಲ್ಲೇ ಮುಕ್ತಾಯವಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ