Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್‍ಐಸಿ ಏಜೆಂಟರು, ನೌಕರರಿಗೆ ಪ್ರಯೋಜನ: ನಳಿನ್‍ಕುಮಾರ್ ಕಟೀಲ್ ಧನ್ಯವಾದ

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ.19: ಗೌರಿ, ಗಣೇಶ ಹಬ್ಬದ ಸಂದರ್ಭದಲ್ಲಿ ಭಾರತೀಯ ಜೀವವಿಮಾ ನಿಗಮದ (ಎಲ್‍ಐಸಿ) ಏಜೆಂಟರು ಮತ್ತು ಉದ್ಯೋಗಿಗಳಿಗೆ ವಿವಿಧ ಸೌಲಭ್ಯಗಳನ್ನು ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರದ ಬಿಜೆಪಿ ಸರಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಸ ಸೂಚಿಸಿದ್ದು, ಪ್ರಧಾನಿಯವರು ಮತ್ತು ಸಚಿವಸಂಪುಟಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ.

ಕೌಟುಂಬಿಕ ಪಿಂಚಣಿ ಹೆಚ್ಚಳ, ಏಜೆಂಟರ ಗ್ರಾಚ್ಯುಟಿ ಮಿತಿ ಏರಿಕೆ, ಮರುನೇಮಕಗೊಂಡ ಏಜೆಂಟರ ರಿನೀವಲ್ ಕಮಿಷನ್ ನೀಡುವ ನಿರ್ಧಾರ ಮಾಡಲಾಗಿದೆ. ಇದು ಎಲ್‍ಐಸಿಯಲ್ಲಿ ಕೆಲಸ ಮಾಡುವ 1 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಮತ್ತು 13 ಲಕ್ಷಕ್ಕೂ ಹೆಚ್ಚು ಏಜೆಂಟರಿಗೆ ಪ್ರಯೋಜನ ಕೊಡಲಿದೆ ಎಂದು ಅವರು ತಿಳಿಸಿದ್ದಾರೆ.

ಏಜೆಂಟರ ಗ್ರಾಚ್ಯುಟಿ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿದ್ದಾರೆ. ಇದರಿಂದ 13 ಲಕ್ಷಕ್ಕೂ ಹೆಚ್ಚು ಏಜೆಂಟರಿಗೆ ಪ್ರಯೋಜನ ಸಿಗÀಲಿದೆ. ಮರುನೇಮಕಗೊಂಡ ಏಜೆಂಟರಿಗೆ ಹಿಂದೆ ರಿನಿವಲ್ ಕಮಿಷನ್ ಸಿಗುತ್ತಿರಲಿಲ್ಲ. ಇದೀಗ ಈ ಸೌಲಭ್ಯ ಕಲ್ಪಿಸಲಾಗಿದೆ. ಏಜೆಂಟರ ಟರ್ಮ್ ಇನ್‍ಶೂರೆನ್ಸ್ ಕವರ್ ಸೌಲಭ್ಯದಲ್ಲೂ ಬದಲಾವಣೆ ಮಾಡಲಾಗಿದೆ. ಉದ್ಯೋಗಿಗಳ ಕುಟುಂಬಗಳ ಯೋಗಕ್ಷೇಮವನ್ನು ಗಮನದಲ್ಲಿ ಇಟ್ಟುಕೊಂಡು ಕುಟುಂಬ ಪಿಂಚಣಿ ಪ್ರಮಾಣದ ಬದಲಾವಣೆ ಮಾಡಿದ್ದಾರೆ ಎಂದು ವಿವರಿಸಿದ್ದಾರೆ.

ಎಲ್‍ಐಸಿಗೆ ಸಂಬಂಧಿಸಿದ ಈ ಉತ್ತಮ ಕ್ರಮಗಳಿಂದ ಉದ್ಯೋಗಿಗಳು ಮತ್ತು ಏಜೆಂಟರು ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಲು ಪ್ರೇರೇಪಣೆ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ