Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಗೋ ಅನಾವರಣ ಮಾಡಿದ ಪ್ರಕಾಶ್ ಪಡುಕೋಣೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.21: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸುವ ಅಪ್ಪು ಕಪ್ ಸೀಸನ್-2 ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋವನ್ನು ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ಬ್ಯಾಡ್ಮಿಂಟನ್ ಪಟು ಪ್ರಕಾಶ್ ಪಡುಕೋಣೆ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಪ್ರಕಾಶ್ ಪಡುಕೋಣೆ, ಪುನೀತ್ ರಾಜ್ ಕುಮಾರ್ ಅವರು ನನಗೆ ಪರ್ಸನಲ್ ಆಗಿ ಗೊತ್ತಿದ್ದರು. ತುಂಬಾ ಫ್ರೆಂಡ್ಲಿಯಾಗಿದ್ದವರು. ಐದಾರು ವರ್ಷದ ಹಿಂದೆ ನಾವೊಂದು ಇವೆಂಟ್ ಮಾಡಿದ್ದೇವು. ಒಂದೇ ಒಂದು ಫೋನ್ ಕಾಲ್ ಗೆ ಬಂದು ನಮ್ಮ ಜೊತೆ ಎಕ್ಸಿಬ್ಯೂಷನ್ ಮ್ಯಾಚ್ ಆಡಿದ್ದರು. ಸ್ಯಾಂಡಲ್ ವುಡ್ ನಲ್ಲಿ ತುಂಬಾ ಜನ ಬ್ಯಾಡ್ಮಿಂಟನ್ ಆಡುತ್ತಾರೆ ಅನ್ನೋದನ್ನು ಕೇಳಿ ಖುಷಿ ಆಯ್ತು. ಅಪ್ಪು ಕಪ್ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಹೀಗೆ ಮುಂದುವರೆಯಲಿ ಎಂದು ಆಶಿಸಿದರು.

ಕನ್ನಡ ಕಲಾವಿದರು, ತಂತ್ರಜ್ಞನರು ಹಾಗೂ ಮಾಧ್ಯಮದವರು ಆಡಲಿರುವ ಈ ಪಂದ್ಯಾವಳಿ ಆಗಸ್ಟ್ ತಿಂಗಳಾಂತ್ಯಕ್ಕೆ ಶುರುವಾಗಲಿದೆ. ಕಳೆದ ಬಾರಿ ಒಟ್ಟು ಎಂಟು ತಂಡಗಳು ಭಾಗಿಯಾಗಿದ್ದವು. ದಿಗಂತ್, ಸೃಜನ್ ಲೋಕೇಶ್, ವಸಿಷ್ಠ ಸಿಂಹ, ಪ್ರಿಯಾಂಕಾ ಉಪೇಂದ್ರ, ರಾಗಿಣಿ, ಕವಿತಾ ಲಂಕೇಶ್, ಶ್ವೇತಾ ಶ್ರೀವಾಸ್ತವ್, ಮಾಸ್ಟರ್ ಆನಂದ್ ತಂಡದ ಪೈಕಿ ಸೃಜನ್ ಲೋಕೇಶ್ ನೇತೃತ್ವದ ರಾಜ್ ಕುಮಾರ್ ಕಿಂಗ್ಸ್ ಕಳೆದ ಬಾರಿ ಗೆಲುವು ಸಾಧಿಸಿತ್ತು. ಈ ಬಾರಿ ಮತ್ತಷ್ಟು ತಾರೆಯರು ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಮೆರಗು ಹೆಚ್ಚಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ರಾಜೇಶ್ ರೆಡ್ಡಿ, ವಾಣಿಜ್ಯ‌ ಚಲನಚಿತ್ರ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್, ಹಿರಿಯ ಸಿನಿಮಾ ಪತ್ರಕರ್ತರಾದ ಸದಾಶಿವ ಶೆಣೈ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ