Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಬಿಜೆಪಿಗೆ ಲೋಕಜನಶಕ್ತಿ ಬೆಂಬಲ: ಸಂಜಯ್ ಶರಾಫ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ, 30; ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ ಎಲ್ಲಾ 224 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಪ್ರಚಾರ ನಡೆಸಲಿದೆ ಎಂದು ರಾಷ್ಟ್ರೀಯ ಲೋಕಜನಶಕ್ತಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಜಯ್ ಶರಾಫ್ ಹೇಳಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಎಲ್.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಪಶುಪತಿ ಕುಮಾರ್ ಪರಸ್ ಅವರ ಸೂಚನೆಯಂತೆ ಈ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುತ್ತಿಲ್ಲ. ಆದರೆ ಎಲ್ಲಾ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದೇವೆ. ಬಿಜೆಪಿ ಪರ ಈಗಾಗಲೇ ಪ್ರಚಾರದಲ್ಲಿ ನಿರತರಾಗಿರುವುದಾಗಿ ಹೇಳಿದರು.

ರಾಜ್ಯ ಬಿಜೆಪಿ ನಾಯಕರ ಸಹಯೋಗ ಮತ್ತು ಸಮನ್ವಯತೆಯಿಂದ ಎಲ್ಲಾ ಕ್ಷೇತ್ರಗಳಲ್ಲಿ ಮತಯಾಚಿಸುತ್ತಿದ್ದೇವೆ. ಬಿಜೆಪಿ ರಾಷ್ಟ್ರೀಯ ವಿಚಾರಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದು, ಎನ್.ಡಿ.ಎ ಮೈತ್ರಿಕೂಟದ ಎರಡನೇ ಅತಿ ದೊಡ್ಡ ಪಕ್ಷವಾಗಿದೆ. ಬಿಜೆಪಿ ರಾಷ್ಟ್ರೀಯ ವಿಷಯಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದು, ದೇಶದ ಹಿತ ದೃಷ್ಟಿಯಿಂದ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರನ್ನು ಮನವೊಲಿಸುತ್ತಿದ್ದೇವೆ ಎಂದು ತಿಳಿಸಿದರು.

ರಾಷ್ಟ್ರೀಯ ಲೋಕಜನಶಕ್ತಿ ಪಕ್ಷದ ರಾಜ್ಯಾಧ್ಯಕ್ಷರಾದ ಶಿಲ್ಪ ಬಾಬು ಮಾತನಾಡಿ, ಆರ್‌ಎಲ್‌ಜೆಪಿ ಯುವಮೋರ್ಚಾ, ಮಹಿಳಾ ಮೋರ್ಚಾ, ಜನಶಕ್ತಿ ಮಸ್ದೂರ್ ಸಂಗಮ್ ಮತ್ತು ದಲಿತ ಸೇನೆಯ ವಿವಿಧ ಶಾಖೆಗಳು ಬಿಜೆಪಿ ಪರವಾಗಿ ಪ್ರಚಾರ ಕಣದಲ್ಲಿವೆ. ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ರಾಷ್ಟ್ರೀಯ ಲೋಕಜನಶಕ್ತಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಎಂಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜ್ ಜಿ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬಿಜು, ಆರ್.ಎಲ್.ಜೆ.ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಲಕ್ಷಣ್, ಖಜಾಂಚಿ ರೀಮಾ ಲಕ್ಷಣ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಮುರಳಿ ನಾಯರ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ