Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳು ರೈತಸ್ನೇಹಿಯಾಗಿ:ಸಿ.ಎಂ.ಸೂಚನೆ

ಅಧಿಕಾರಿಗಳು ರೈತಸ್ನೇಹಿಯಾಗಿ

ಅಧಿಕಾರಿಗಳ ಸಭೆಯಲ್ಲಿ ಸಿ.ಎಂ.ಸೂಚನೆ
ಸುದ್ದಿಮೂಲ ವಾರ್ತೆ
ಮೈಸೂರು, ಜೂನ್‌ 10 : ಮುಂಗಾರು ಪ್ರಾರಂಭವಾಗಿದ್ದು ರೈತರಿಗೆ ಬೀಜ,ಗೂಬ್ಬರ, ಕೀಟನಾಶಕಗಳ ಕೊರತಯಾಗದಂತೆ ಅಧಿಕಾರಿಗಳು ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬಿತ್ತನೆ ಬೀಜದ ಗುಣಮಟ್ಟದ ಬಗೆಗೆ ಕೃಷಿ ಇಲಾಖೆ ಅಧಿಕಾರಿಗಳು ಖಾತ್ರಿಪಡಿಸಬೇಕು‌. ಒಂದು ವೇಳೆ ಯಾವೊಬ್ಬ ರೈತರ ಬೆಳೆ ಕಳಪೆ ಬೀಜದಿಂದ ಹಾಳಾದರೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರನ್ನೆ ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದರು.
ಬಿತ್ತಿದ ಬೀಜ ಶೇಕಡಾ ನೂರರಷ್ಟು ಬೆಳೆ ಬರಬೇಕು, ರೈತರು ಕೇಳುವ ಕಂಪನಿಯ ಬೀಜಗಳನ್ನು ಪೂರೈಸಿ, ಹಿಂದಿನ ಸಾಲಿನಲ್ಲಿ ಮಳೆ ಹಾನಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ಸಂಪೂರ್ಣವಾಗಿ ಪಾವತಿಯಾಗಬೇಕೆಂದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಹಿಂದಿನ ಸಾಲಿನಲ್ಲಿ 3868 ರೈತರ 1267 ಹೆಕ್ಟೇರ್ ಬೆಳೆಹಾನಿಗೆ 1ಕೋಟಿ 14 ಲಕ್ಷ ರೂಗಳನ್ನು ರೈತರಿಗೆ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.ಕುಡಿಯುವ ನೀರಿನ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿಗಳು,ಮೊದಲ ಆದ್ಯತೆ ಕುಡಿಯುವ ನೀರಿಗೆ ಇರಲಿ ಹಾಗೂ ಇನ್ನೆರಡು ದಿನಗಳಲ್ಲಿ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಅಗತ್ಯವಿರುವ ಬೆಳೆಗಳಿಗೂ ನೀರು ಹರಿಸಿ ಕುಡಿಯುವ ನೀರು ಹಾಗೂ ಬೆಳೆ ಎರಡನ್ನೂ ಸರಿದೂಗಿಸಿ ಎಂದರು.ಕುಡಿಯುವ ನೀರು 20 ದಿನಗಳಿಗಾಗುವಷ್ಟಿದ್ದು, ಅಗತ್ಯ ಬಿದ್ದರೆ ಹೇಮಾವತಿ ನಾಲೆ ನೀರು ಬಳಸಿಕೂಳ್ಳಬಹುದೆಂಬ ಅಧಿಕಾರಿಗಳ ಅಭಿಪ್ರಾಯಕ್ಕೆ ಮುಖ್ಯಮಂತ್ರಿಗಳು ಆ ಜಿಲ್ಲೆಗಳ ಪರಿಸ್ಥಿತಿ ನೋಡಿಕೊಂಡು ಅಲ್ಲಿಯ ಕುಡಿಯುವ ನೀರು,ಬೆಳೆ ಪರಿಸ್ಥಿತಿ ಅವಲೋಕಿಸಿ ಕೆಲ ಜಿಲ್ಲೆಗಳಲ್ಲಿ ಸರಿಯಾದ ಸಿದ್ದತೆ ಮಾಡಿಕೊಳ್ಳದೇ ಕಲುಷಿತ ನೀರಿನಿಂದ ಬಹಳ ಸಮಸ್ಯೆ ಆಗಿದೆ, ಹಣಕಾಸಿನ ತೊಂದರೆ ಇಲ್ಲ ಸರಿಯಾಗಿ ಕಾರ್ಯ ನಿರ್ವಹಿಸಿ ಕುಡಿಯುವ ನೀರು ಒದಗಿಸಿ ಎಂದರು.

ರೈತರನ್ನು ಹಾಗೂ ಸಾರ್ವಜನಿಕರನ್ನು ಕಛೇರಿಗಳಿಗೆ ಅಲೆದಾಡಿಸಬೇಡಿ, ರಾಜಕಾರಣಿಗಳು ಸರ್ಕಾರಿ ನೌಕರರಿರುವುದು ಸಾರ್ವಜನಿಕರ ಸೇವೆ ಮಾಡಲು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು, ಸರ್ಕಾರ ನಿಮ್ಮಿಂದ ಏನು ಬಯಸುತ್ತದೆ ಅದನ್ನು ಮಾಡಿ ಇಲ್ಲದಿದ್ದರೆ ಕಠಿಣ ಕ್ರಮ ಆಗುತ್ತದೆ ಎಂದರು.

ಸರ್ಕಾರಿ ಕಛೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಬಗೆಗೆ ಪ್ರಸ್ತಾಪಿಸಿದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರ ಮಾತಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಯಾವುದೇ ಮಧ್ಯವರ್ತಿಗಳು, ಏಜೆಂಟ್ ರನ್ನು  ಸಹಿಸುವುದಿಲ್ಲ ಎಲ್ಲಾ ಅಧಿಕಾರಿಗಳು ಸಾರ್ವಜನಿಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಜನ ನಮಗೆ ಭ್ರಷ್ಟಾಚಾರದ ವಿರುದ್ಧ ಮತ ನೀಡಿದ್ದಾರೆ. ಎಲ್ಲಾ ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಬೇಕು ಇಲ್ಲದಿದ್ದರೆ ಮನೆಗೆ ಕಳುಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ