Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಪಕ್ಷದವರಿಂದ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ : ಎಂ.ಲಕ್ಷಣ್‌ ಟೀಕೆ

ಸುದ್ದಿಮೂಲ ವಾರ್ತೆ

ಮೈಸೂರು,ಜೂ.16:ವಿಧಾನಸಭಾ ಚುನಾವಣೆ ನಡೆದು ತಿಂಗಳಷ್ಟೇ ಕಳೆದಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚನೆಯಾಗಿ ಟೇಕ್ ಆಫ್ ಆಗುತ್ತಿದೆ. ಆದರೆ ಬಿಜೆಪಿ ಜೆಡಿಎಸ್ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಟೀಕಿಸಿದ್ದಾರೆ.

ಬಿಜೆಪಿಯ ಪ್ರತಾಪ್ ಸಿಂಹ, ಸಿ.ಟಿ ರವಿ ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ .2014 ಮತ್ತು 2019ರಲ್ಲಿ ನೀವು ಯಾರ ಬಳಿ ಯಾವ ತರಹ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿ ಎಂಬುದಕ್ಕೆ ಸಂಸದ ಪ್ರತಾಪ್ ಸಿಂಹ ಉತ್ತರಿಸಬೇಕು. ಬಡವರಿಗೆ ನೀಡುವ ಅಕ್ಕಿ ವಿಚಾರದಲ್ಲಿ ಸಿದ್ದರಾಮಯ್ಯರನ್ನು ಪ್ರಶ್ನೆ ಮಾಡುವ ಯೋಗ್ಯತೆ ನಿಮಗಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.

ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದರೆ ರಾಜ್ಯ ದಿವಾಳಿಯಾಗುತ್ತದೆ ಎಂಬ ಹೇಳಿಕೆ ನೀಡುತ್ತಾರೆ. ಪ್ರಧಾನಿ ಮೋದಿ ಅವರು ಶ್ರೀಮಂತರ ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡಿದಾಗ ದಿವಾಳಿ ಆಗಲಿಲ್ಲವೇ ? ನಾವು ಈಗ ಜಾರಿಗೆ ತಂದಿರುವ ಯೋಜನೆಗಳು ಬಡವರ ಪರವಾದ ಯೋಜನೆಗಳು ಎಂದು ಸಮರ್ಥಿಸಿಕೊಂಡರು.

ಬಿಜೆಪಿಯಲ್ಲಿ ವಿಪಕ್ಷ ಸ್ಥಾನದ ವಿಚಾರವಾಗಿ ಆಂತರಿಕ ಕಲಹ ನಡೆಯುತ್ತಿದೆ.ಈ ವಿಚಾರ ಮುಚ್ಚಿ ಹಾಕಲು ದಿನನಿತ್ಯ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಇದೆಲ್ಲ ಬಿಜೆಪಿಯ ಹುನ್ನಾರ ಎಂದು ಆರೋಪ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ