Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಬಜೆಟ್ : ಮಹಾಂತೇಶ್ ಕೌಲಗಿ 

ಕಲಬುರಗಿ, ಜು.7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಬಜೆಟ್ ಆಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಮಹಾಂತೇಶ್ ಕೌಲಗಿ ತಿಳಿಸಿದ್ದಾರೆ.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ, ಬಸವಣ್ಣನವರ ಸಾಮಾಜಿಕ ನ್ಯಾಯದ ಅಡಿಯಲ್ಲಿ ರಾಜ್ಯದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಐತಿಹಾಸಿಕ 14ನೇ ಬಜೆಟ್ ಮಂಡಿಸಿದ್ದಾರೆ. ಎಲ್ಲ ಜಾತಿ ಜನಾಂಗದವರ ಮನೆ ಮನೆಗೆ ಮುಟ್ಟುವ ಬಜೆಟ್ ಆಗಿದೆ, ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದ್ದಾರೆ.

ಹಿಂದುಳಿದ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದಾರೆ. ಅಲೆಮಾರಿ ಅಲೆಮಾರಿ ಜಾತಿಗಳ ಕುಲಶಾಸ್ತ್ರ ಅಧ್ಯಯನಕ್ಕೆ ಎರಡು ಕೋಟಿ ಅನುದಾನ ನೀಡಿದ್ದಾರೆ. ಕೇಂದ್ರ ಸರ್ಕಾರ ಸ್ಥಗಿತಗೊಳಿಸಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಮರು ಜಾರಿ ಮಾಡಿದ್ದಾರೆ.

ಕೃಷಿ ಭಾಗ್ಯ ಯೋಜನೆ ಮರು ಜಾರಿ ಮಾಡಿ 100 ಕೋಟಿ ಅನುದಾನ ಒದಗಿಸಿದ್ದಾರೆ, ವಿಶೇಷವಾಗಿ ಕಲಬುರಗಿಯಲ್ಲಿ 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಿಸಲು ಅನುದಾನ ಕಲ್ಪಿಸಿದ್ದಾರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಆರಂಭಿಸಲು ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ ಅನುದಾನ ನೀಡಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ 4,000 ಗ್ರಾಮ ಪಂಚಾಯಿತಿಗೆ ಕೂಸಿನ ಮನೆ ಎಂಬ ಶಿಶುಪಾಲನ ಕೇಂದ್ರಗಳನ್ನು ಸ್ಥಾಪನೆ, 35 ಲಕ್ಷ ರೈತರಿಗೆ 25,000 ಕೋಟಿ ಸಾಲದ ಗುರಿ, ಕಲ್ಯಾಣ ಕರ್ನಾಟಕದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣ ನಿರ್ಮಾಣ, ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಸಾಲವನ್ನು 5 ಲಕ್ಷಕ್ಕೆ ಏರಿಸಿದ್ದಾರೆ, ದೀರ್ಘಾವಧಿ ಸಾಲ ಹತ್ತರಿಂದ ಹದಿನೈದು ಲಕ್ಷಕ್ಕೆ ಏರಿಸಿದ್ದಾರೆ, ಹೀಗೆ ಎಲ್ಲ ಸಮುದಾಯದವರೆಗೆ ತಲುಪುವ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ