Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ಅಗತ್ಯ : ಮಹರ್ಷಿ ಆನಂದ್ ಗುರೂಜಿ

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ಸೆ.11: ಗ್ರಾಮೀಣ ಮತ್ತು ನಗರ ಪ್ರದೇಶದ ಜನರು ಆರೋಗ್ಯದ ಕಡೆ ಹೆಚ್ಚಿನ ಒತ್ತು ನೀಡಬೇಕು. ಕಾಯಿಲೆಯ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿರಬೇಕು ಎಂದು ಮಹರ್ಷಿ ಆನಂದ ಗುರೂಜಿ ತಿಳಿಸಿದರು.

ಪಟ್ಟಣದ ಬಿಬಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ನೆಲಮಹಡಿಯಲ್ಲಿರುವ ಅಸ್ತ್ರ ಕ್ಲಿನಿಕ್ ವತಿಯಿಂದ ಆರೋಗ್ಯ ದಿನಾಚರಣೆ ಅಂಗವಾಗಿ ಉಚಿತ ಹೃದಯ ಮತ್ತು ಕ್ಯಾನ್ಸರ್ ಪರೀಕ್ಷೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಕಾಲದಲ್ಲಿ ಆಹಾರ ಪದ್ಧತಿಗಳು ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯಿಂದ ಜನರು ಆರೋಗ್ಯವಂತರಾಗಿದ್ದರು. ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿಗಳು ಬದಲಾಗಿರುವುದರಿಂದ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದೇವೆ. ಕಾಲಕಾಲಕ್ಕೆ ಮಳೆ ಬೆಳೆಯಾಗಬೇಕು. ರೈತರು ಸುಖ ಸಮೃದ್ಧಿಯ ಜೀವನ ನಡೆಸಬೇಕಾದರೆ ಆರೋಗ್ಯ ಬಹುಮುಖ್ಯ ಎಂದರು.

ಮಾಜಿ ಶಾಸಕ ಜಿ ಚಂದ್ರಣ್ಣ ಮಾತನಾಡಿ, ಇಂದಿನ ಆಧುನಿಕ ಒತ್ತಡದ ಜೀವನ ಶೈಲಿ ಹಾಗೂ ಆಹಾರ ಪದಾರ್ಥಗಳು ಬಹಳಷ್ಟು ರೀತಿಯ ಅನಾರೋಗ್ಯಗಳಿಗೆ ಕಾರಣವಾಗುತ್ತಿದೆ. ಗ್ರಾಮೀಣ ಮತ್ತು ನಗರ ಜನರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಇದೆ ವೇಳೆ ಅಸ್ತ್ರ ಕ್ಲಿನಿಕ್‌ನ ಮುಖ್ಯ ವೈದ್ಯಾಧಿಕಾರಿ ಡಾ. ಮಾನಸ ಪುಟ್ಟರಾಜು, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ ಜಗನ್ನಾಥ್, ಸಮಾಜ ಸೇವಕ ಜಿ ಪುಟ್ಟರಾಜು, ತಾಲೂಕು ಬಿಜೆಪಿ ಖಜಾಂಚಿ ಜಿ.ಚನ್ನಕೇಶವ, ಮಾಜಿ ಪುರಸಭಾ ಸದಸ್ಯ ಜಿ ಜನಾರ್ಧನ್, ಪುರಸಭಾ ಸದಸ್ಯ ಜಿ.ಎ. ರವೀಂದ್ರ. ಮುಖಂಡರಾದ ಜಗದೀಶ್, ಮುನಿರಾಜ್, ದೊಡ್ಡವೆಂಕಪ್ಪ, ಸಿ ನಟರಾಜ್ ಮುಂತಾದವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ