Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬನ್ನೇರುಘಟ್ಟ, ಗದಗ, ಕಲಬುರ್ಗಿ ಮೃಗಾಲಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.2: ಮೈಸೂರಿನಲ್ಲಿರುವ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬೆಂಗಳೂರು ಹೊರ ವಲಯ ಬನ್ನೇರುಘಟ್ಟದಲ್ಲಿರುವ ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಮಹಾ ಯೋಜನೆ (ಮಾಸ್ಟರ್ ಪ್ಲಾನ್) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ತಮ್ಮ ಕಚೇರಿಯಲ್ಲಿ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ರಾಜ್ಯದ ಮೃಗಾಲಯಗಳ ಬಗ್ಗೆ ವಿಶ್ವಾದ್ಯಂತ ಉತ್ತಮ ಹೆಸರಿದೆ. ಮೃಗಾಲಯದಲ್ಲಿರುವ ಪ್ರಾಣಿಗಳ ಸಂತಾನೋತ್ಪತ್ತಿಯ ಪ್ರಮಾಣವೂ ಉತ್ತಮವಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ವನ್ಯ ಮೃಗಗಳ ರಕ್ಷಣೆಗೆ ಮತ್ತು ಇಂದಿನ ಮಕ್ಕಳಿಗೆ ವಿವಿಧ ಪ್ರಾಣಿಸಂಕುಲ ಮತ್ತು ಸಸ್ಯ ಸಂಕುಲದ ಬಗ್ಗೆ ಮಾಹಿತಿ ನೀಡುವ ಮೃಗಾಲಯಗಳನ್ನು ಇನ್ನೂ ಹೆಚ್ಚು ಮಾಹಿತಿಪೂರ್ಣ ಮತ್ತು ಪ್ರೇಕ್ಷಕ ಸ್ನೇಹಿಯಾಗಿ ಮಾಡಲು ಸಮಗ್ರ ನೀತಿ ರೂಪಿಸುವ ಅಗತ್ಯವನ್ನು ಪ್ರತಿಪಾದಿಸಿದರು.

ಗದಗ, ಕಲ್ಬುರ್ಗಿಯಲ್ಲಿರುವ ಮೃಗಾಲಯಗಳನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದ್ದು, ಈ ಬಗ್ಗೆ ಸಮಗ್ರ ವರದಿ ತಯಾರಿಸಿ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಬೀದರ್ ಜಿಲ್ಲೆಯಲ್ಲಿ ದಟ್ಟ ಅಡವಿ ಇಲ್ಲದ ಕಾರಣ ಮಕ್ಕಳಿಗೆ ವನ್ಯ ಮೃಗಗಳ ಬಗ್ಗೆ ನೈಜ ಮಾಹಿತಿ ಇಲ್ಲ. ಬೀದರ್ ನಲ್ಲಿ ಕೃಷ್ಣ ಮೃಗಗಳ ಸಂರಕ್ಷಿತ ಪ್ರದೇಶ ನಿರ್ಮಿಸುವ ಬಗ್ಗೆ ಈ ಬಾರಿಯ ಬಜೆಟ್ ನಲ್ಲಿ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದು, ಇದರ ಜೊತೆಗೆ ಜಿಲ್ಲೆಯಲ್ಲಿ ಮೃಗಾಲಯ ಸ್ಥಾಪನೆ ಮಾಡಿದರೆ, ಇಂದಿನ ಪೀಳಿಗೆಗೆ ವನ್ಯ ಮೃಗಗಳನ್ನು ನೋಡಲು ಮತ್ತು ಅವುಗಳ ಬಗ್ಗೆ ತಿಳಿಯಲು ಅವಕಾಶ ಆಗುತ್ತದೆ. ಈ ಹಿನ್ನೆಲೆಯಲ್ಲಿ ಮೃಗಾಲಯ ಸ್ಥಾಪನೆಗೆ ಕ್ರಿಯಾ ಯೋಜನೆ ರೂಪಿಸುವಂತೆ ಆದೇಶಿಸಿದರು.

ಇದೇ ಸಂದರ್ಭದಲ್ಲಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ವಾರ್ತಾ ಪತ್ರವನ್ನು ಸಚಿವರು ಬಿಡುಗಡೆ ಮಾಡಿದರು.

ಸಭೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಹಿರಿಯ ಐ.ಎಫ್.ಎಸ್. ಅಧಿಕಾರಿಗಳಾದ ರಾಜೀವ್ ರಂಜನ್, ಸುಭಾಷ್ ಮಾಲ್ಕೆಡೆ, ರವಿ, ಸಂಜಯ್ ಬಿಜ್ಜೂರ್, ಕುಮಾರ್ ಪುಷ್ಕರ್, ಎ.ಕೆ. ಸಿಂಗ್ಮತ್ತಿತರರು ಪಾಲ್ಗೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ