Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡಪ್ಪಗೌಡರನ್ನು ನಿಮ್ಮ ಊಡಿಯಲ್ಲಿ ಹಾಕಿದ್ದೇನೇ ನೀವೆ ಬೆಳೆಸಿ : ಮಲ್ಲಮ್ಮಗೌಡತಿ ಶಿವಲಿಂಗಪ್ಪಗೌಡ ನರಿಬೋಳ

ದೊಡ್ಡಪ್ಪಗೌಡರನ್ನು ನಿಮ್ಮ ಊಡಿಯಲ್ಲಿ ಹಾಕಿದ್ದೇನೇ ನೀವೆ ಬೆಳೆಸಿ : ಮಲ್ಲಮ್ಮಗೌಡತಿ ಶಿವಲಿಂಗಪ್ಪಗೌಡ ನರಿಬೋಳ



ಫೋಟೊ12ಜೇವರ್ಗಿ : ಪಟ್ಟಣದ ಭೂತಪುರ ಕಲ್ಯಾಣ ಮಂಟಪದಲ್ಲಿ ಕರೆದ ಸಭೆಯಲ್ಲಿ ಸಾವಿರಾರು ಅಭಿಮಾನಿಗಳು ಪಾಲ್ಗೊಂಡಿದ್ದರು.

ಜೇವರ್ಗಿ 12 : ನಾನು ಜನ್ಮ ನೀಡಿ ನಿಮ್ಮ ಊಡಿಯಲ್ಲಿ ಹಾಕಿದ್ದೇನೆ. ಬೆಳೆಸುವ ಜವಾಬ್ದಾರಿ ತಾಲ್ಲೂಕಿನ ಜನರ ಮೇಲೆ ಇದೆ. ನಮ್ಮ ಕುಟುಂಬಕ್ಕೆ ಮೋಸ ಮಾಡಿದವರಿಗೆ ನೀವೇ ಉತ್ತರ ಕೊಡಬೇಕು. ಅಳುವೇ ನನ್ನ ಉತ್ತರವಾಗಿದೆ ಎಂದು ಟಿಕೆಟ್ ವಂಚಿತ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಬೋಳಿ ಅವರ ತಾಯಿ ಮಲ್ಲಮ್ಮಗೌಡತಿ ಶಿವಲಿಂಗಪ್ಪಗೌಡ ನರಿಬೋಳ ಹೇಳಿದರು.

ಬುಧುವಾರ ಪಟ್ಟಣದ ಭೂತಪುರ ಕಲ್ಯಾಣ ಮಂಟಪದಲ್ಲಿ ಕರೆದ ಸಭೆಯಲ್ಲಿ ತಾಲ್ಲೂಕಿನ ಪ್ರತಿ ಗ್ರಾಮಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸಿದರು.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಮಾತನಾಡಿ ನಾನು ಯಾರಿಗೂ ಮೋಸ, ಕಳ್ಳತನ ಮತ್ತು ಲೂಟಿ ಮಾಡಿಲ್ಲ. ದಿನದ ಇಪ್ಪತ್ತನಾಲ್ಕು ಗಂಟೆ ಜನರ ಕೆಲಸ ಮಾಡಿದ್ದೇನೆ. ಹೊಟ್ಟೆಕಿಚ್ಚಿನಿಂದ ಕೆಲವರು ಟಿಕೆಟ್ ತಪ್ಪಿಸಿದ್ದಾರೆ. ತಮ್ಮ ಚುನಾವಣೆಯಲ್ಲಿ ಬೆಳಿಗ್ಗೆ 7ಗಂಟೆಗೆ ಜೇವರ್ಗಿಗೆ ಬರುವ ರಾಜ್ಯ, ಜಿಲ್ಲಾ ಬಿಜೆಪಿ ನಾಯಕರು ವಿಧಾನಸಭೆ ಚುನಾವಣೆ ವೇಳೆ ಕನ್ನ ಹಾಕುವ ಕೆಲಸ ಮಾಡುತ್ತಿದ್ದರು. ನಮ್ಮ ಕುಟುಂಬದ್ದು ಯಾವುದೇ ಕಂಪನಿ, ರಿಯಲ್ ಎಸ್ಟೇಟ್ ಬಿಸಿನೆಸ್ ಇಲ್ಲ. ಸಮಾಜದ ಕಟ್ಟಕಡೆಯ ಮನುಷ್ಯನಿಗೂ ನ್ಯಾಯ ಕೊಡಿಸುವ ಸಲುವಾಗಿ ದಿನದ ಇಪ್ಪತ್ತನಾಲ್ಕು ಗಂಟೆ ಜನಸೇವೆ ಮಾಡುತ್ತಿದ್ದೇನೆ. ಇಷ್ಟೆಲ್ಲ ಕುತಂತ್ರ ಮಾಡಿದ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ರಮೇಶ ಬಾಬು ವಕೀಲ, ದಂಡಪ್ಪ ಸಾಹು ಕರಳಗೇರಿ, ಬಸವರಾಜ ಪಾಟೀಲ್ ನರಿಬೋಳ, ಸುರೇಶ ಸುಂಬಡ, ಸಿದ್ದಣ್ಣ ಹೂಗಾರ, ಸೋಮಶೇಖರ ಹೂಗಾರ, ಸಾಯಬಣ್ಣ ದೊಡ್ಮನಿ, ಶಿವಾನಂದ ಮಾಕಾ, ನಾನಾಗೌಡ ಅಲ್ಲಾಪುರ, ದೇವಿಂದ್ರಪ್ಪಗೌಡ, ಪುಂಡಲಿಕ ಗಾಯಕವಾಡ, ಚಂದ್ರಕಾoತ ಕುಸ್ತಿ, ಮರೆಪ್ಪ ಖಂಡಾಳಕರ್, ಭೀಮಾಶಂಕರ ಕುರಡೆಕರ್, ಶ್ರೀಶೈಲ್ ಕರಕಳ್ಳಿ, ಸೇರಿದಂತೆ ಇತರರು ಇದ್ಡರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ