Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2000 ನೋಟು ರದ್ದತಿ ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 20: ನಮ್ಮ ಸರ್ಕಾರ ರಾಜ್ಯದಲ್ಲಿ ದ್ವೇಷವನ್ನು ಕಿತ್ತೊಗೆದು, ಪ್ರೀತಿ, ಸೌಹಾರ್ದತೆ, ಸಾಮರಸ್ಯದ ಸರ್ಕಾರ ನೀಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಸರ್ಕಾರ 2000 ರೂ. ನೋಟು ಚಲಾವಣೆ ರದ್ದುಪಡಿಸಿದ್ದನ್ನು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪದಗ್ರಹಣ ಕಾರ್ಯಕ್ರಮದ ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ. ಇದರ ಜತೆಗೆ ನಾವು ನೀಡಿರುವ ಇತರೆ ಭರವಸೆಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿದರು.

ಕಳೆದ ಬಾರಿಯ ಸರ್ಕಾರ ಇದ್ದಾಗಲೂ ನಾವು ಹೇಳಿದ್ದನ್ನು ಮಾಡಿ ತೋರಿಸಿದ್ದೇವೆ. ನಾವು ಬಿಜೆಪಿಯವರ ರೀತಿ ಹೇಳುವುದೊಂದು ಮಾಡುವುದು ಮತ್ತೊಂದು ರೀತಿ ಆಡಳಿತ ಮಾಡುವುದಿಲ್ಲ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ.

ಪ್ರಧಾನಿ ಮೋದಿ ಅವರು ಈಗ ಮತ್ತೊಂದು ಆದೇಶ ಹೊರಡಿಸಿದ್ದಾರೆ. ಅವರು ಜಪಾನ್‌ಗೆ ತೆರಳಿದಾಗಲೆಲ್ಲಾ ನೋಟು ರದ್ದು ತೀರ್ಮಾನ ಪ್ರಕಟಿಸುತ್ತಾರೆ. ಕಳೆದ ಬಾರಿ ಜಪಾನ್ ಗೆ ತೆರಳಿದಾಗ ಒಂದು ಸಾವಿರ ರೂ. ಮುಖಬೆಲೆ ನೋಟು ರದ್ದು ಮಾಡಿದ್ದರು.

ಈ ಬಾರಿ 2 ಸಾವಿರ ಮುಖಬೆಲೆಯ ನೋಟು ರದ್ದು ಮಾಡಿದ್ದಾರೆ. ಇದರರ್ಥ ಇದರಿಂದ ದೇಶಕ್ಕೆ ಲಾಭವೋ, ನಷ್ಟವೋ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದಿಲ್ಲ. ಮೋದಿ ಅವರ ಈ ಕೆಲಸ ದೇಶದ ಜನರಿಗೆ ತೊಂದರೆ ಆಗುತ್ತಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ